ಎರಡು ಆಟೋ-ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ವಿಜಯನಗರ : ಎರಡು ಆಟೋ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ … Continued

ರಾಜ್ಯದ ಟಾಪ್‌-10 ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ : ಈ ಹತ್ತು ದೇವಾಲಯಗಳ ಆದಾಯ ಎಷ್ಟು..? ಖರ್ಚು-ವೆಚ್ಚ ಎಷ್ಟು ?

ಬೆಂಗಳೂರು: ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಇಲಾಖೆ ವ್ಯಾಪ್ತಿಗೆ ಸೇರಿದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಮಣ್ಯ ದೇವಾಲಯ ರಾಜ್ಯದ ಶ್ರೀಮಂತ ದೇವಸ್ಥಾನವಾಗಿ ಈ ಸಲವೂ ಮುಂದುವರಿದಿದೆ. ಕಳೆದ ವರ್ಷವೂ ಈ ದೇಗುಲ ಮೊದಲ ಸ್ಥಾನದಲ್ಲಿತ್ತು. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು … Continued

ಒಬ್ಬಂಟಿಯಾಗಿದ್ದ ಶಾಸ್ತ್ರ ಹೇಳುವವನ ಮನೆಯಲ್ಲಿತ್ತು 30 ಲಕ್ಷ ರೂ: ಸಾವಿನ ನಂತರ ಪತ್ತೆಯಾಯ್ತು ಇಷ್ಟೊಂದು ಸಂಪತ್ತು…!

ಚಿತ್ರದುರ್ಗ: ವಿವಾಹವಾಗದೇ ಒಂಟಿಯಾಗಿ ಜೀವನ ನಡೆಸುತ್ತಿದ್ದ ಅರ್ಚಕರೊಬ್ಬರು ವಾರದ ಹಿಂದಷ್ಟೇ ಮೃತಪಟ್ಟಿದ್ದರು. ಇದೀಗ ಅವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಸಿಕ್ಕಿದೆ ಎಂದು ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ನಿವಾಸಿ ಗಂಗಾಧರ ಶಾಸ್ತ್ರೀ (70) ಎಂಬವರು ವಾರದ ಹಿಂದೆ ಮೃತರಾಗಿದ್ದರು. ಸಣ್ಣ ಮನೆಯೊಂದರಲ್ಲಿ ಒಬ್ಬರೇ ಇದ್ದ ಅವರು ಶಾಸ್ತ್ರ ಹೇಳುವುದು ಹಾಗೂ ಶುಭ ಕಾರ್ಯದಲ್ಲಿ ಪೂಜೆ … Continued

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ : ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಕೆಜಿ ಅಕ್ಕಿ ನೀಡಲಾಗುವುದು, ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ (ಜುಲೈ 1)ಯಿಂದಲೇ ಅನ್ನಭಾಗ್ಯ ಯೋಜನೆ ಆರಂಭವಾಗುತ್ತಿದೆ. ಎಲ್ಲ … Continued

ಕೇಂದ್ರದ ಸಲಹೆ ನಂತರ ಸಚಿವ ಸೆಂಥಿಲ್ ಬಾಲಾಜಿ ವಜಾ ಆದೇಶಕ್ಕೆ ತಡೆ: ತಮಿಳುನಾಡು ರಾಜ್ಯಪಾಲರ ಕ್ರಮ ಚರ್ಚೆಗೆ ಗ್ರಾಸ

ಚೆನ್ನೈ: ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಿದ ಗಂಟೆಗಳ ನಂತರ, ಕೇಂದ್ರ ಗೃಹ ಸಚಿವಾಲಯದ ಸಲಹೆಯ ಮೇರೆಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ತಮ್ಮ ಆದೇಶವನ್ನು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಪತ್ರವನ್ನೂ ಕಳುಹಿಸಿದ್ದು, ಅವರ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, … Continued

ಟ್ವೀಟ್‌ಗಳು, ಅಕೌಂಟ್‌ ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿದ್ದ ಟ್ವಿಟರ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಕೆಲವು ಸಾಮಾಜಿಕ ಮಾಧ್ಯಮ ಅಕೌಂಟ್‌ಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಟ್ವಿಟರ್‌ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ಕಂಪನಿಗೆ 50 ಲಕ್ಷ ರೂಪಾಯಿ ವೆಚ್ಚವನ್ನು ವಿಧಿಸಿದೆ. ಕಳೆದ ವರ್ಷ, ಟ್ವಿಟರ್ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ … Continued

500 ರೂ.ನೋಟಿನ ಕಂತೆಗಳೊಂದಿಗೆ ಸೆಲ್ಫಿ ತೆಗೆದುಕೊಂಡ ಹೆಂಡತಿ-ಮಕ್ಕಳ ಫೋಟೋ ವೈರಲ್‌ : ಪೊಲೀಸ್‌ ಅಧಿಕಾರಿಗೆ ಎದುರಾಯ್ತು ಸಂಕಷ್ಟ…

ಲಕ್ನೋ: ಕುಟುಂಬದವರು ನೋಟಿನ ಕಂತೆಗಳೊಂದಿಗೆ ತೆಗೆದುಕೊಂಡ ಸೆಲ್ಫಿ ಫೋಟೊಗಳು ವೈರಲ್‌ ಆದ ನಂತರ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಸಂಕಷ್ಟ ಎದುರಾಗಿದೆ. ಹಾಗೂ ಅವರು ತಕ್ಷಣ ವರ್ಗಾವಣೆಗೊಂಡಿದ್ದಾರೆ. ಪತ್ನಿ ಮತ್ತು ಮಕ್ಕಳು ನೋಟಿನ ಕಂತೆಗಳೊಂದಿಗೆ ತೆಗೆದುಕೊಂಡ ತೆಗೆದ ಸೆಲ್ಫಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಅವರು ಪೋಸ್ … Continued

ರಾಜ್ಯದ ಕರಾವಳಿಯಲ್ಲಿ ಮುಂದಿನ 10 ದಿನ ಭಾರೀ ಮಳೆ ಮುನ್ಸೂಚನೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಬೆಂಗಳೂರು: ಮುಂದಿನ 10 ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ (ಅಂದಾಜು 64.5 ಮಿಮೀ ನಿಂದ 115 ಮಿಮೀ). ಕರಾವಳಿಯ ವಿವಿಧ ಸ್ಥಳಗಳಲ್ಲಿ … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌

ಬೆಂಗಳೂರು: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು … Continued

ಅಹಮದಾಬಾದ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ : 1 ಲಕ್ಷ ರೂ. ತಲುಪಿದ ಹೊಟೇಲ್‌ಗಳ ರೂಮ್‌ ದರ…!

ಅಹಮದಾಬಾದ್‌ : ಭಾರತದಲ್ಲಿ ಅಕ್ಟೋಬರ್‌ 5ರಂದು ಆರಂಭವಾಗಲಿರುವ ಏಕದಿನ ವಿಶ್ವಕಪ್‌-೨೦೨೩ ಪಂದ್ಯಾವಳಿಯಲ್ಲಿ ಅಕ್ಟೋಬರ್ 15 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದ್ದು, ನಗರದಲ್ಲಿ ಹೋಟೆಲ್ ರೂಂ ದರಗಳು ಸುಮಾರು ಹತ್ತು ಪಟ್ಟು ಹೆಚ್ಚಾಗಿವೆ. ವಿವಿಧ ಹೋಟೆಲ್ ಬುಕಿಂಗ್ ವೆಬ್‌ಸೈಟ್‌ಗಳಲ್ಲಿನ ದರಗಳು ಅಭೂತಪೂರ್ವ ಬೇಡಿಕೆಯು ಅಕ್ಟೋಬರ್ 15 ರಂದು ನರೇಂದ್ರ ಮೋದಿ … Continued