ಹುಬ್ಬಳ್ಳಿ -ಧಾರವಾಡಕ್ಕೆ ಹಂಗಾಮಿ ಪೊಲೀಸ್ ಆಯುಕ್ತರಾಗಿ ಸಂತೋಷ ಬಾಬು ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಅವಳಿ ನಗರಕ್ಕೆ ಪ್ರಭಾರಿ ಕಮಿಷನರ್ ಆಗಿ ಸಂತೋಷ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎಂಟು ದಿನಗಳಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆ ತೆರವಾಗಿತ್ತು. ಈ ಹುದ್ದೆಗೆ 2011 ರ ಬ್ಯಾಚ್​ನ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಅವರು ಪ್ರಭಾರಿಯಾಗಿ ನೇಮಕವಾಗಿದ್ದಾರೆ. ರಮಣ್ ಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆಯಾದ ನಂತರ … Continued

ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಯುವಕ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ವ್ಯಕ್ತಿಯನ್ನು ನಾಗರಾಜ ಗಣಪತಿ ಗಾಂವ್ಕರ (35) ಎಂದು ಗುರುತಿಸಲಾಗಿದೆ. ಈತ ತೇಲಂಗಾರದ ಕಿರಗಾರಿಮನೆಯ ನಿವಾಸಿ. ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ … Continued

ತಡರಾತ್ರಿ ಬಿಜೆಪಿಯ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ; 2024ರ ಚುನಾವಣೆ, ಪುನರ್ರಚನೆ ಬಗ್ಗೆ ಚರ್ಚೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ಬಹು ನಿರೀಕ್ಷಿತ 2024ರ ಲೋಕಸಭೆ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆಗಳು … Continued

ಶಿವರಾಜ್ ಸಿಂಗ್ ಚೌಹಾಣ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ : ಕಾಂಗ್ರೆಸ್ಸಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಫೋನ್ ಪೇ

ಭೋಪಾಲ: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಭೋಪಾಲದಾದ್ಯಂತ ಕಾಂಗ್ರೆಸ್ ಪಕ್ಷವು ಪೋಸ್ಟರ್‌ಗಳನ್ನು ಅಂಟಿಸಿದ ನಂತರ, ಡಿಜಿಟಲ್ ಪಾವತಿ ಕಂಪನಿ ಫೋನ್‌ ಪೇ ಪೋಸ್ಟರ್‌ಗಳಲ್ಲಿ ತನ್ನ ಲೋಗೋ ಬಳಸುವುದಕ್ಕೆ ಆಕ್ಷೇಪಿಸಿದೆ. ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವಿನ ಪೋಸ್ಟರ್‌ಗಳ ಯುದ್ಧದ ನಡುವೆ, … Continued

ಈ ವರ್ಷ ಬೆಳಗಾವಿ ಕೇಂದ್ರ ಸ್ಥಾನವಾಗಿಸಿಕೊಂಡು ಭಗವದ್ಗೀತೆ ಅಭಿಯಾನ : ಸ್ವರ್ಣವಲ್ಲಿ ಶ್ರೀಗಳು

ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರ ಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದ ನಂತರ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರ … Continued

ಛತ್ತೀಸ್‌ಗಢದ ಉಪಮುಖ್ಯಮಂತ್ರಿಯಾಗಿ ಟಿ.ಎಸ್. ಸಿಂಗ್ ದೇವ ನೇಮಕ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟಿ.ಎಸ್. ಸಿಂಗ್ ದೇವ ಅವರನ್ನು ಛತ್ತೀಸ್‌ಗಢ ಉಪ ಮುಖ್ಯಮಂತ್ರಿಯಾಗಿ ಬುಧವಾರ ನೇಮಕ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಕುರಿತು ಚರ್ಚಿಸಲು ನಡೆದ ಪರಿಶೀಲನಾ ಸಭೆಯಲ್ಲಿ ಸಿಂಗ್ ದೇವ ಅವರ ನೇಮಕವನ್ನು ಘೋಷಿಸಲಾಯಿತು. ಸಿಂಗ್ ದೇವ ಅವರ ನೇಮಕಾತಿಗೆ ಭೂಪೇಶ ಬಘೇಲ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ. … Continued

ಟಿಸಿಎಸ್‌ ಪರಿಷ್ಕೃತ ದರಗಳ ಜಾರಿ ಮುಂದಕ್ಕೆ ಹಾಕಿದ ಸರ್ಕಾರ

ನವದೆಹಲಿ: ಬುಧವಾರ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಈ ವರ್ಷ ಹೆಚ್ಚಿಸಲಾದ  ಮೂಲದಲ್ಲಿ ತೆರಿಗೆ ಸಂಗ್ರಹ  (ಟಿಸಿಎಸ್) ದರಗಳು ಈ ವರ್ಷದ ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಹೇಳಿದೆ. ಹೆಚ್ಚಿಸಲಾದ TCS ದರಗಳು ಜುಲೈ 1 ರಿಂದ ಅನ್ವಯವಾಗಲಿವೆ ಎಂದು ಹಿಂದೆ ತಿಳಿಸಲಾಗಿತ್ತು. ಈಗ ಮೂರು ತಿಂಗಳು ಅವಧಿ ವಿಸ್ತರಿಸಲಾಗಿದೆ. “ಜುಲೈ 1, 2023 … Continued

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಎನ್‌ಐಎ ಗಡುವು : ಜೂನ್‌ 30ರೊಳಗೆ ಶರಣಾಗದಿದ್ದರೆ ಮನೆ ಜಪ್ತಿ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವ ಎನ್‌ಐಎ ಆರೋಪಿಗಳಿಗೆ ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ಗಡುವು ನೀಡಿದೆ. ಇಲ್ಲದಿದ್ದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಎನ್ ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ … Continued

ರಥಯಾತ್ರೆ ವೇಳೆ ವಿದ್ಯುತ್‌ ತಂತಿ ತಂಡಾಗಿ ಬಿದ್ದು 6 ಮಂದಿ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ (ಜೂನ್ 28) ಕಬ್ಬಿಣದಿಂದ ಮಾಡಿದ ರಥದ ಮೇಲೆ ವಿದ್ಯುತ್‌ ಹರಿಯುತ್ತಿದ್ದ ತಂತಿ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ರಥದ ಮೆರವಣಿಗೆ ಹೋಗುತ್ತಿದ್ದಾಗ ರಥದ ಮೇಲೆ ವಿದ್ಯುತ್ … Continued