ಗಂಗಾವತಿ: ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ … Continued

ಜೂನ್ 21 ರಂದು ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೇತೃತ್ವ ವಹಿಸಲಿರುವ ಪ್ರಧಾನಿ ಮೋದಿ

ನವದೆಹಲಿ; ಜೂನ್ 21 ರಂದು ಆಚರಿಸಲಾಗುವ 9 ನೇ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಅಧಿವೇಶನ ಮುನ್ನಡೆಸಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನವು ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಡಿಸೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯು ಜೂನ್ 21 … Continued

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ ರಾವ್‌ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಿಆರ್‌ಪಿಸಿ ಸೆಕ್ಷನ್‌ 235(1)ರ ಅಡಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು 50ನೇ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಸಿ ಬಿ ಸಂತೋಷ … Continued

ನೆಹರೂ ಮ್ಯೂಸಿಯಂ ಮರುನಾಮಕರಣ ಮಾಡಿದ ಕೇಂದ್ರ : ಭಾರತೀಯರ ಹೃದಯದಿಂದ ನೆಹರು ಹೆಸರು ತೆಗೆದುಹಾಕಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್

ನವದೆಹಲಿ: ‘ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ’ಯನ್ನು ‘ಪ್ರಧಾನಿಗಳ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ’ ಎಂದು ಮರುನಾಮಕರಣ ಮಾಡಲಾಗಿದೆ. ಸಂಸ್ಕೃತಿ ಸಚಿವಾಲಯದ ಅಧಿಕೃತ ಪ್ರಕಟಣೆಯ ಪ್ರಕಾರ, “ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ ವಿಶೇಷ ಸಭೆಯಲ್ಲಿ, ಅದರ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ವಿಶೇಷ … Continued

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ತಮಿಳುನಾಡಿನ ಮಾಜಿ ಮಾಜಿ ಪೊಲೀಸ್ ಮಹಾನಿರ್ದೇಶಕರಿಗೆ 3 ವರ್ಷ ಜೈಲು

ಚೆನ್ನೈ: ಸಹ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ ದಾಸ್ ಅವರಿಗೆ ಇಂದು, ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ವಿಲ್ಲುಪುರಂ ನ್ಯಾಯಾಲಯವು ಅಮಾನತುಗೊಂಡ ಐಪಿಎಸ್ ಅಧಿಕಾರಿಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು … Continued

ವೀಡಿಯೋ: ಆದಿಪುರುಷ ಸಿನೆಮಾ ವೀಕ್ಷಣೆ ವೇಳೆ ಥಿಯೇಟರ್‌ನಲ್ಲಿ ಕಾಣಿಸಿಕೊಂಡ ಮಂಗ : ‘ಜೈ ಶ್ರೀ ರಾಮ’ ಎಂದು ಕೂಗಿದ ಅಭಿಮಾನಿಗಳು | ವೀಕ್ಷಿಸಿ

ಆದಿಪುರುಷ ಸಿನೆಮಾ ಇಂದು ಶುಕ್ರವಾರ (ಜೂನ್ 16) ಹೆಚ್ಚಿನ ಅಭಿಮಾನಿಗಳ ನಡುವೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಚಿತ್ರ ವೀಕ್ಷಿಸಲು ಪ್ರೇಕ್ಷಕರು ಚಿತ್ರಮಂದಿರದ ಹೊರಗೆ ಸಾಲುಗಟ್ಟಿ ನಿಂತಿದ್ದರು. ನೆಟಿಜನ್‌ಗಳು ಚಿತ್ರ ವೀಕ್ಷಿಸುತ್ತಿರುವ ಹಾಲ್‌ನಲ್ಲಿ ಹನುಮಂತನಿಗೆ ಮೀಸಲಿಟ್ಟ ಆಸನದ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಚಿತ್ರದ ನಿರ್ಮಾಪಕರು ಭಗವಾನ್ ಹನುಮಂತನಿಗಾಗಿ ಒಂದು ಆಸನವನ್ನು ಕಾಯ್ದಿರಿಸಿದ್ದಾರೆ. ಏಕೆಂದರೆ ಹಿಂದೂ ಮಹಾಕಾವ್ಯ ರಾಮಾಯಣವನ್ನು ಪಠಿಸಿದಾಗ … Continued

10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರಕಾರ ಶುಕ್ರವಾರ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ. ಡಾ. ಕುಮಾರ- ಜಿಲ್ಲಾಧಿಕಾರಿ, ಮಂಡ್ಯ ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ ಡಾ. ವೆಂಕಟೇಶ ಎಂ.ವಿ.- ಆಯುಕ್ತರು, ಪಶುಸಂಗೋಪನಾ ಇಲಾಖೆ ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಶ್ರೀನಿವಾಸ ಕೆ.- … Continued

ಹುಬ್ಬಳ್ಳಿ : ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಸಾವು

ಹುಬ್ಬಳ್ಳಿ: ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಯ ಗೋಡೆ ಶುಕ್ರವಾರ ಬೆಳಿಗ್ಗೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ(9) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ ನಾಗವಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ … Continued

ಉಡುಪಿ: 35 ಅಡಿ ಎತ್ತರದ ಬೃಹತ್‌ ಮರವೇರಿ ಹಲಸಿನ ಹಣ್ಣು ಕೊಯ್ದ ಪೇಜಾವರ ಶ್ರೀಗಳು…!

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಮ್ಮ ಬಿಡುವಿನ ವೇಳೆ ಶಿಷ್ಯಂದಿರಿಗೆ ಪಾಠ ಪ್ರವಚನ ಮಾಡುವುದಲ್ಲದೆ, ಶ್ರೀಮಠದ ಗೋಶಾಲೆಗೆ ಹೋಗುತ್ತಾರೆ. ಅವರು ಆಗಾಗ ಶಿಷ್ಯಂದಿರೇ ಅಚ್ಚರಿಪಡುವಂತಹ ಕೆಲಸಕ್ಕೆ ಕೈ ಹಾಕುತ್ತಾರೆ. ಇದೀಗ ಅವರು ಬೃಹತ್‌ ಗಾತ್ರದ ಹಲಸಿನ ಮರವೇರಿ ಹಲಸಿನ ಕಾಯಿಗಳನ್ನು ಕೊಯ್ದು ಸುದ್ದಿಯಾಗಿದ್ದಾರೆ. ಅವರು ಹಲಸಿನ ಮರ ಏರಿದ ಫೋಟೋಗಳು ಭಾರೀ … Continued

ಜೂನ್‌ 20 ರಂದು ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ

ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಜೂನ್ 20 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು, ಶುಕ್ರವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. … Continued