ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಕಳೆದ 8 ವರ್ಷಗಳ ಹಿಂದೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಜಯಕುಮಾರ ಹಿರೇಮಠ ದೂರು ದಾಖಲಿಸಿದ್ದರು. (yediyurappa-denotification … Continued

ಸಚಿವರೊಂದಿಗೆ 5 ತಾಸುಗಳ ಸಭೆಯ ನಂತರ ಜೂನ್ 15ರ ವರೆಗೆ ಪ್ರತಿಭಟನೆ ಸ್ಥಗಿತಕ್ಕೆ ಕುಸ್ತಿಪಟುಗಳು

ನವದೆಹಲಿ: ಇಂದು, ಬುಧವಾದ ಐದು ತಾಸುಗಳ ಕಾಲ ನಡೆದ ಸಭೆಯ ನಂತರ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಲಿಖಿತ ಪ್ರಸ್ತಾವನೆ ಮಂಡಿಸಿದರು. ಜೂನ್ 15 ರೊಳಗೆ ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ತನಿಖೆಯನ್ನು ಪೂರ್ಣಗೊಳಿಸುವುದಾಗಿ ಅದು ಭರವಸೆ ನೀಡಿದರು. ಆದರೆ ಅವರ ಬಂಧನದ ಬಗ್ಗೆ ಯಾವುದೇ ಮಾತುಗಳಿಲ್ಲ. ಬಿಜೆಪಿ ಸಂಸದರೂ ಆಗಿರುವ … Continued

ತನ್ನದೇ ಇಂಟರ್ನೆಟ್ ಸೇವೆ ಆರಂಭಿಸಿ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕೇರಳ : ಈ ಬಗ್ಗೆ ತಿಳಿದುಕೊಳ್ಳಬೇಕಾದದ್ದು

ತಿರುವನಂತಪುರಂ: ಸಾಮಾನ್ಯ ಜನರಿಗೂ ಇಂಟರ್ನೆಟ್ ಲಭ್ಯತೆ ಸುಧಾರಿಸುವ ಪ್ರಯತ್ನದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಪ್ರಾರಂಭಿಸಿದ ರಾಜ್ಯ ಸರ್ಕಾರ-ಚಾಲಿತ ಉಪಕ್ರಮವಾದ K-FON ಅಥವಾ ‘ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್’ ತನ್ನದೇ ಆದ ಬ್ರಾಡ್‌ಬ್ಯಾಂಡ್ ಸೇವೆ ಆರಂಭಿಸುವ ಮೂಲಕ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ. ಸೇವೆಯನ್ನು ಪ್ರಾರಂಭಿಸುವಾಗ, ಮುಖ್ಯಮಂತ್ರಿ ಪಿಣರಾಯಿ … Continued

ಕುಮಟಾ : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ; ಮರುಮೌಲ್ಯಮಾಪನದ ನಂತರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅದಿತಿ ವೈದ್ಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಅದಿತಿ ಪ್ರಕಾಶ ವೈದ್ಯ ಎಸ್ ಎಸ್ ಎಲ್ ಸಿ ಯಲ್ಲಿ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಇಂಗ್ಲಿಷ್‌ ವಿಷಯದಲ್ಲಿ ಮಾತ್ರ … Continued

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ … Continued

ಲಕ್ನೋ ನ್ಯಾಯಾಲಯದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಸಂಜೀವ ಜೀವಾನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಲಕ್ನೋ: ಬುಧವಾರ ಲಕ್ನೋ ನ್ಯಾಯಾಲಯದ ಹೊರಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕುಖ್ಯಾತ ಗ್ಯಾಂಗ್‌ಸ್ಟರ್ ಸಂಜೀವ ಜೀವಾ ಎಂಬಾತನನ್ನು ಗುಂಡಿಕ್ಕಿ ಕೊಂದಿದ್ದಾರೆ. ನ್ಯಾಯಾಲಯದೊಳಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಗುಂಡು ಹಾರಿಸಿ, ಸಂಜೀವ ಜೀವವನ್ನು ಕೊಂದಿದ್ದಾರೆ, ಈ ಘಟನೆಯಲ್ಲಿ ಯುವತಿಯೊಬ್ಬಳು ಗಾಯಗೊಂಡಿದ್ದಾಳೆ. ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಆಪ್ತ ಸಹಾಯಕ ಸಂಜೀವ ಮಹೇಶ್ವರಿ ಜೀವಾ, ಬಿಜೆಪಿ ಶಾಸಕ ಬ್ರಹ್ಮದತ್ … Continued

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇಂದು, ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ … Continued

2.14 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್‌ ಲಾಭ : ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ ; ಕೆಲ ಷರತ್ತುಗಳು ಅನ್ವಯ-ಸಚಿವ ಜಾರ್ಜ್

ಬೆಂಗಳೂರು : ವಿಧಾನಸಭೆ ಚುನಾವಣೆ ವೇಳೆ ಭರವಸೆ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜುಲೈ 1ರಂದು ಜಾರಿ ಮಾಡುವುದಾಗಿ ಈಗಾಗಲೇ ಪ್ರಕಟಿಸಿದೆ. ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್​ ಗೊಂದಲಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ 2.14 … Continued

ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಎರಡು ಹುಲಿಗಳ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಇಂದು ಬುಧವಾರ (ಜೂನ್‌ 7) ಬೆಳಿಗ್ಗೆ ಸಾವಿಗೀಡಾಗಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ … Continued

ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಶ್ವೇತಭವನದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ‘ಕಪಾಳಮೋಕ್ಷ’ : ಬಿಜೆಪಿ

ನವದೆಹಲಿ: ಮಂಗಳವಾರ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು “ನಾಚಿಕೆಯಿಲ್ಲದೆ” ಭಾರತದ ಪ್ರಜಾಪ್ರಭುತ್ವವನ್ನು ಅಮೆರಿಕದಲ್ಲಿ ಟೀಕಿಸುವುದನ್ನು ಮುಂದುವರೆಸಿದ್ದು, ಆದರೆ ಅಮೆರಿಕದ ಶ್ವೇತಭವನವು ಭಾರತವನ್ನು ರೋಮಾಂಚಕ ಪ್ರಜಾಪ್ರಭುತ್ವ ಎಂದು ಹೇಳಿರುವುದು ರಾಹುಲ್‌ ಗಾಂಧಿ ಅವರಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಜಾಫರ್ ಇಸ್ಲಾಂ ಹೇಳಿದ್ದಾರೆ. … Continued