ತೀವ್ರ ಚಂಡಮಾರುತವಾಗಿ ರೂಪುಗೊಂಡ ‘ಬಿಪರ್‌ಜೋಯ್’ ಚಂಡಮಾರುತ ; ಕರ್ನಾಟಕ, ಮಹಾರಾಷ್ಟ್ರ ಸೇರಿ ನಾಲ್ಕು ರಾಜ್ಯಗಳಲ್ಲಿ ಪರಿಣಾಮ: ಐಎಂಡಿ

ನವದೆಹಲಿ: ಕಳೆದ 6 ಗಂಟೆಗಳಲ್ಲಿ 2 ಕಿಮೀ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸಿದ ‘ಬಿಪರ್‌ಜೋಯ್’ ಹೆಸರಿನ ಚಂಡಮಾರುತವು ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ತಿಳಿಸಿದೆ. ಐಎಂಡಿ (IMD)ಯು ಬುಧವಾರ ಬೆಳಿಗ್ಗೆ 9ಕ್ಕೆ ನವೀಕರಿಸಲಾದ ಇತ್ತೀಚಿನ ಬುಲೆಟಿನ್‌ನಲ್ಲಿ ತನ್ನ ತೀವ್ರತೆಯನ್ನು ಉಳಿಸಿಕೊಂಡು ಮುಂದಿನ 24 ಗಂಟೆಗಳಲ್ಲಿ ಸುಮಾರು ಉತ್ತರದ ಕಡೆಗೆ ಚಲಿಸುವ … Continued

ಶಿಕ್ಷಕರು, ಉಪನ್ಯಾಸಕರ ನೇಮಕಾತಿ ; ವಯೋಮಿತಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಯ ನೇಮಕಾತಿಗೆ ವಯೋಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) … Continued

ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸಿ ಲೋಪದೋಷ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಉಂಟಾಗಿದ್ದ ಗೊಂದಲ ಬಗೆಹರಿಸುವಂತೆ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ … Continued

ಚುನಾವಣಾ ರಾಜಕೀಯಕ್ಕೆ ಬಿಜೆಪಿ ಸಂಸದ ಶಿವಕುಮಾರ ಉದಾಸಿ ವಿದಾಯ

ಹಾವೇರಿ : ಲೋಕಸಭೆ ಚುನಾವಣೆಗೂ ಮುನ್ನ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಇವರು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರಿಗೆ ಆಘಾತ ಮತ್ತು ಅಚ್ಚರಿ ತಂದಿದೆ. ಈ ಕುರಿತು ಮಾತನಾಡಿರುವ ಸಂಸದ … Continued

ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಅಕ್ರಮದ ಬಗ್ಗೆ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಕುರಿತು ಮಂಗಳವಾರ ಟಿಪ್ಪಣಿ ಹೊರಡಿಸಿರುವ ಅವರು, “ದಿನಾಂಕ 23-7-2022 ಮತ್ತು 24-7-2022 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ … Continued

ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued

ಕಾಂಗ್ರೆಸ್‌ಗೆ ಹೊಸ ತಲೆನೋವು..? : ಸಚಿನ್‌ ಪೈಲಟ್‌ ಜೂನ್‌ 11ಕ್ಕೆ ಹೊಸ ಪಕ್ಷ ಘೋಷಿಸುವ ಸಾಧ್ಯತೆ-ವರದಿ

ನವದೆಹಲಿ : ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಕಾಂಗ್ರೆಸ್‌ ಪಕ್ಷದ ಭಿನ್ನಮತೀಯ ನಾಯಕನಾಗಿ ಗುರುತಿಸಿಕೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಸಚಿನ್‌ ಪೈಲಟ್‌ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯಸ್ಮರಣೆ ದಿನವಾದ ಜೂನ್ 11ರಂದು ಹೊಸ ಪಕ್ಷ ‘ಪ್ರಗತಿಶೀಲ ಕಾಂಗ್ರೆಸ್’ ಘೋಷಿಸುವ … Continued

ಎಸ್ ಎಸ್ ಎಲ್ ಸಿ ಪರೀಕ್ಷೆ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು, ಮಂಗಳವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪಕನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ kseeb.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಂತ ವಿದ್ಯಾರ್ಥಿಗಳು … Continued

ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಜೂನ್ 30ರಂದು ಚುನಾವಣೆ ನಡೆಸಲಾಗುತ್ತಿದೆ. ಇಂದು, ಸೋಮವಾರ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಾಬುರಾವ್ ಚಿಂಚನಸೂರು, ಆರ್ ಶಂಕರ ಹಾಗೂ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ … Continued

11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಇಂದು, ಸೋಮವಾರ ಅಧಿಸೂಚನೆ ಹೊರಡಿಸಿದೆ. 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ ಮೋಹನ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಉಮಾಶಂಕರ ಎಸ್.ಆರ್. ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ … Continued