ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯದ ನೂತನ ಸರ್ಕಾರ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಿ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ ಈ ವರ್ಷದ ಜನವರಿ 1ರಿಂದ ಜಾರಿಗೆ … Continued

ಈವರೆಗೆ 14,000 ಕೋಟಿ ರೂಪಾಯಿ ಮೌಲ್ಯದ 2,000 ರೂ. ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಿದ ಎಸ್‌ಬಿಐ

ನವದೆಹಲಿ: ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧಾರದ ನಂತರ, ಭಾರತದ ಅತಿದೊಡ್ಡ ಬ್ಯಾಂಕ್‌ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 14,000 ಕೋಟಿ ರೂಪಾಯಿ ಠೇವಣಿ ಮಾಡಲಾಗಿದೆ ಎಂದು ಬ್ಯಾಂಕ್‌ ಅಧ್ಯಕ್ಷ ದಿನೇಶಕುಮಾರ ಖಾರಾ ಪ್ರಕಟಿಸಿದ್ದಾರೆ. “ಸುಮಾರು 14,000 ಕೋಟಿ ರೂಪಾಯಿ ಮೌಲ್ಯದ 2,000 ರೂ.ಗಳ ನೋಟುಗಳನ್ನು ಖಾತೆಗಳಿಗೆ … Continued

ಶಾಸಕ ಡಾ. ಅಶ್ವತ್ಥ ನಾರಾಯಣಗೆ ರಿಲೀಫ್: ಅವರ ವಿರುದ್ಧದ ತನಿಖೆಗೆ 4 ವಾರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : “ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರ ತನಿಖೆಗೆ ತಡೆ ನೀಡಿ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ

ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು, ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಬಸ್ಸು​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಸಾರಿಗೆ … Continued

ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ವರದಿಯಾಗಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಭೀಮಾಶಂಕರ ಆರ್ಯ ಅವರಿಗೆ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ  ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ … Continued

ಮಹಾರಾಷ್ಟ್ರದ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ನಿಧನ

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು (ಸುರೇಶ) ಧನೋರ್ಕರ್ ಅವರು ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಬಾಲು ಧನೋರ್ಕರ್ ಅವರಿಗೆ 47 ವರ್ಷ ವಯಸ್ಸಾಗಿತ್ತು ಮತ್ತು ಅವರು ಪತ್ನಿ ಪ್ರತಿಭಾ, ಶಾಸಕರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. “ಕಳೆದ ವಾರ ಅವರನ್ನು ಮೂತ್ರಪಿಂಡದ ಕಲ್ಲುಗಳ … Continued

ಮಧ್ಯಪ್ರದೇಶ ಉದ್ಯಾನವನದಲ್ಲಿ 6 ಚಿರತೆಗಳು ಸತ್ತ ನಂತರ ನಮೀಬಿಯಾಕ್ಕೆ ಅಧಿಕಾರಿಗಳ ಅಧ್ಯಯನ ಪ್ರವಾಸ

ಭೋಪಾಲ್: ಚಿರತೆಯ ಪುನರುಜ್ಜೀವನ ಯೋಜನೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾಕ್ಕೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಲಾಗುವುದು, ಅಲ್ಲಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಗಳನ್ನು ತರಲಾಗುವುದು ಎಂದು ಕೇಂದ್ರ ಅರಣ್ಯ ಸಚಿವ ಭೂಪೇಂದರ ಯಾದವ್ ಹೇಳಿದ್ದಾರೆ. ಸೋಮವಾರ ಭೋಪಾಲ್‌ನಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ, ಯಾದವ್ ಅವರು ಜೂನ್ … Continued

ಕಾಂಗ್ರೆಸ್‌ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ

ಬೆಂಗಳೂರು : ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ ನಡೆದಿದ್ದು, ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಕ್ತಿಭವನದಲ್ಲಿ ಗ್ಯಾರಂಟಿ ಅನುಷ್ಠಾನ ಸಂಬಂಧ ಹಣಕಾಸು ಮತ್ತಿತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಎರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಕನಿಷ್ಠ 50 … Continued

ಬಸ್ ಕಮರಿಗೆ ಉರುಳಿ 10 ಮಂದಿ ಸಾವು, 20 ಮಂದಿಗೆ ಗಾಯ

ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ ಬಸ್ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುವವರಾಗಿದ್ದರು. ಅವರೆಲ್ಲ ಮಾತಾ ವೈಶ್ನವೋದೇವಿ ಮಂದಿರಕ್ಕೆ ತೆರಳುತ್ತಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. … Continued

ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ … Continued