ಕನಕಪುರದಲ್ಲಿ ಕೊನೆ ಕ್ಷಣದ ಅಚ್ಚರಿ : ಡಿಕೆಶಿ ಸ್ಪರ್ಧಿಸಿರುವ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹೋದರನಿಂದ ನಾಮಪತ್ರ ಸಲ್ಲಿಕೆ…!

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಸ್ಪರ್ಧಿಸಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದೆ. ಡಿ.ಕೆ ಶಿವಕುಮಾರ ಅವರನ್ನು ಕಟ್ಟಿ ಹಾಕಲು ಬಿಜೆಪಿ ರಣತಂತ್ರ ರೂಪಿಸಿ ಸಚಿವ ಆರ್.ಅಶೋಕ ಅವರನ್ನು ಕಣಕ್ಕಿಳಿಸಿದ್ದು ಒಂದೆಡೆಯಾದರೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಗುರುವಾರ ಮತ್ತೊಂದು ಅಚ್ಚರಿಯ ಬೆಳವಣಿಗೆಯಾಗಿದೆ. ಈಗ ಕನಕಪುರದಲ್ಲಿ … Continued

ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಹಿನ್ನಡೆ: ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಸೂರತ್‌ : “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಮೇಲಿನ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ. ಆ ಮೂಲಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದ್ದು, ಅವರ ಲೋಕಸಭಾ ಸದಸ್ಯತ್ವದ ಅನರ್ಹತೆ ಮುಂದುವರಿಯಲಿದೆ. 2019ರ ಮಾನಹಾನಿ … Continued

ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗೆ ಕೊರೊನಾ ಸೋಂಕು

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಗುರುವಾರ ಅವರ ಕೋವಿಡ್ -19 ಪರೀಕ್ಷೆ ವರದಿಯಲ್ಲಿ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ, ಹೀಗಾಗಿ ಅವರು ಪ್ರಸ್ತುತ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಅವರು ಗುರುವಾರ ನವದೆಹಲಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲು ನಿರ್ಧರಿಸಿದ್ದರು ಆದರೆ ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್‌ ವರದಿ ಬಂದ ನಂತರ … Continued

ಆಘಾತಕಾರಿ ಘಟನೆ ..: ಮದುವೆ ಮಂಟಪದಲ್ಲಿ ವಧು-ವರರ ಮೇಲೆ ಎಸಿಡ್‌ ಎರಚಿದ ದುಷ್ಕರ್ಮಿಗಳು, 12 ಜನರಿಗೆ ಗಂಭೀರ ಗಾಯ

ಜಗದಲ್‌ಪುರ: ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ಬುಧವಾರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ವಧು-ವರರ ಮೇಲೆ ಯಾರೋ ಎಸಿಡ್ ಎರಚಿದ್ದಾರೆ. ಘಟನೆಯಲ್ಲಿ ವಧು-ವರರು, ಆರು ಮತ್ತು ನಾಲ್ಕು ವರ್ಷದ ಇಬ್ಬರು ಮಕ್ಕಳು ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಎಲ್ಲ ಗಾಯಾಳುಗಳನ್ನು ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಭಾರತದ ಶೇ.90 ರಷ್ಟು ಪ್ರದೇಶ ಬಿಸಿಗಾಳಿ ‘ಅಪಾಯಕಾರಿ ವಲಯ’ದಲ್ಲಿದೆ : ಅಧ್ಯಯನ

ನವದೆಹಲಿ : ಭಾರತದ ಒಟ್ಟು ಪ್ರದೇಶದ ಶೇಕಡಾ 90 ಕ್ಕಿಂತ ಹೆಚ್ಚು ಪ್ರದೇಶವು “ಅತ್ಯಂತ ಎಚ್ಚರಿಕೆಯ” ಅಥವಾ “ಅಪಾಯ ವಲಯ” ದಲ್ಲಿದೆ, ಇದು ಹವಾಮಾನ ಬದಲಾವಣೆಯಿಂದಾಗಿ ಪದೇಪದೇ ಆಗುತ್ತಿರುವ ಶಾಖದ ಅಲೆಗಳಿಂದಾಗಿ ತೊಂದರೆಗೊಳಗಾಗಿದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ರಮಿತ್ ದೇಬನಾಥ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಸಹೋದ್ಯೋಗಿಗಳು ನಡೆಸಿದ ಅಧ್ಯಯನದ ಪ್ರಕಾರ, ದೆಹಲಿಯು ವಿಶೇಷವಾಗಿ ತೀವ್ರವಾದ … Continued

ಯೆಮೆನ್‌ ರಾಜಧಾನಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 78 ಜನರು ಸಾವು, ಹಲವರಿಗೆ ಗಾಯ

ಸನಾ (ಯೆಮೆನ್‌): ಬುಧವಾರ ತಡರಾತ್ರಿ ಯೆಮೆನ್‌ನ ರಾಜಧಾನಿಯಲ್ಲಿ ಹಣಕಾಸಿನ ನೆರವು ವಿತರಿಸುವ ಕಾರ್ಯಕ್ರಮವೊಂದರಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಕನಿಷ್ಠ 78 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಹೌತಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೌತಿ ನಡೆಸುತ್ತಿರುವ ಆಂತರಿಕ ಸಚಿವಾಲಯದ ಪ್ರಕಾರ, ಸನಾ ಮಧ್ಯಭಾಗದಲ್ಲಿರುವ ಓಲ್ಡ್ ಸಿಟಿಯಲ್ಲಿ ವ್ಯಾಪಾರಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಾರು ಬಡವರು ಜಮಾಯಿಸಿದಾಗ … Continued

ತನ್ನ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ

ಸೂಪರ್‌ ಸ್ಟಾರ್‌ ಅಮಿತಾಬ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗಳು ಹಾಗೂ ಅಭಿಷೇಕ ಮತ್ತು ಐಶ್ವರ್ಯಾ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರು ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಕ್ಕಾಗಿ ಅನೇಕ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದರ ವಿಚಾರಣೆಯು ಗುರುವಾರ, ಏಪ್ರಿಲ್ 20 … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ 6 ನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಡ್ಲಘಟ್ಟದಲ್ಲಿ ಹಾಲಿ ಶಾಸಕ ಮುನಿಯಪ್ಪ ಹಾಗೂ ರಾಯಚೂರು ನಗರದಲ್ಲಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಭೋಸರಾಜು ಅವರ ಕುಟುಂಬಕ್ಕೆ … Continued

ತುಮಕೂರು ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ತುಮಕೂರು : ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜಕುಮಾರ ಅವರನ್ನು ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಕ ಮಾಡಿದ್ದಾರೆ. ಅವರನ್ನು ಏ.23ರ ಬಸವ ಜಯಂತಿಯಂದು ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗುತ್ತದೆ. ಮನೋಜಕುಮಾರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾಗಿದ್ದಾರೆ. ಅವರು ಬಿಎ, ಬಿಇಡಿ, … Continued

ಕರ್ನಾಟಕ ವಿಧಾನಸಭಾ ಚುನಾವಣೆ: ಜೆ.ಪಿ. ನಡ್ಡಾ, ಕಿಚ್ಚ ಸುದೀಪ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಜಿಲ್ಲೆಯ ಶಿಗ್ಗಾಂವಿಯಿಂದ ಬುಧವಾರ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ ಅವರೊಂದಿಗೆ ಬೃಹತ್‌ ರ್ಯಾಲಿಯಲ್ಲಿ ಸಾಗಿದ ಬೊಮ್ಮಾಯಿ ನಂತರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 2008ರಿಂದ ಶಿಗ್ಗಾಂವಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ … Continued