ಬಿಜೆಪಿ 3ನೇ ಪಟ್ಟಿಯಲ್ಲಿ ಮೂವರು ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲೂ ಬಿಜೆಪಿ ಮೂವರು ಹಾಲಿ ಶಾಸಕರಿಗೆ ಕೊಕ್ ನೀಡಿದೆ. ಬಿಜೆಪಿ ಈವರೆಗೆ ಬಿಡುಗಡೆ ಮಾಡಿದ್ದ 2 ಪಟ್ಟಿಗಳಲ್ಲಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಸೋಮವಾರ 3ನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇನ್ನೂ 2 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಮೂವರು … Continued

ಕರ್ನಾಟಕ ವಿಧಾನಸಭಾ ಚುನಾವಣೆ: 1,609 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ ಮಾಡಿದ ಸಚಿವ ಎಂಟಿಬಿ ನಾಗರಾಜ

ಬೆಂಗಳೂರು: ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಸಚಿವ ಎಂಟಿಬಿ ನಾಗರಾಜ ಅವರು ಒಟ್ಟು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಆಡಳಿತಾರೂಢ ಬಿಜೆಪಿ … Continued

ತೀವ್ರ ಶಾಖದ ಅಲೆ : ಪಶ್ಚಿಮ ಬಂಗಾಳದಲ್ಲಿ ಒಂದು ವಾರ ಶಾಲಾ ಕಾಲೇಜುಗಳಿಗೆ ರಜೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ 17ರಿಂದ ವಾರದ ವರೆಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು … Continued

ವೀಡಿಯೊ: ಕಾಂಗ್ರೆಸ್‌ ಸೇರ್ಪಡೆ ನಂತರ ಹುಬ್ಬಳ್ಳಿಗೆ ಬಂದ ಜಗದೀಶ ಶೆಟ್ಟರ ಅವರನ್ನು ತಬ್ಬಿಕೊಂಡು ಗಳಗಳನೆ ಅತ್ತ ಪತ್ನಿ ಶಿಲ್ಪಾ ಶೆಟ್ಟರ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು, ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ ಕೆಲವೇ ಗಂಟೆಗಳ ನಂತರ ಅವರು ತಮ್ಮ ಕ್ಷೇತ್ರ ಹುಬ್ಬಳ್ಳಿಗೆ ಆಗಮಿಸಿದಾಗ ಅವರಿಗೆ ಭಾವನಾತ್ಮಕವಾದ ಸ್ವಾಗತ ಸಿಕ್ಕಿತು. ವೀಡಿಯೊದಲ್ಲಿ ಜಗದೀಶ್ ಶೆಟ್ಟರ್ ಅವರ ಪತ್ನಿ ಶಿಲ್ಪಾ ಅವರ ಅವರನ್ನು ತಬ್ಬಿಕೊಂಡು ಅಳುತ್ತಿರುವುದು ಕಂಡುಬಂದಿದೆ. ಇದೇವೇಳೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ … Continued

ಈವರೆಗಿನ ಅತ್ಯಂತ ಬೃಹತ್ ರಾಕೆಟ್ ಉಡಾವಣೆಗೆ ಕ್ಷಣಗಣನೆ: ಇತಿಹಾಸ ನಿರ್ಮಿಸಲಿದೆಯೇ ಎಲಾನ್ ಮಸ್ಕ್‌ ನ ಸ್ಪೇಸ್ ಎಕ್ಸ್ ಕಂಪನಿ…?

ಟೆಕ್ಸಾಸ್: ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಕಂಪನಿಯಿಂದ ನಿರ್ಮಿಸಲಾದ ಬೃಹತ್ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ರಾಕೆಟ್ ಉಡಾವಣೆ ಯಶಸ್ವಿಯಾದರೆ ಇದು ಬಾಹ್ಯಾಕಾಶ ಇತಿಹಾಸದಲ್ಲೇ ಈವರೆಗೆ ಉಡಾವಣೆಯಾದ ರಾಕೆಟ್‌ಗಳಲ್ಲೇ ಬೃಹತ್ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಕಂಪನಿಯಿಂದ ಸ್ಟಾರ್ ಶಿಪ್ ಎಂಬ ಹೆಸರಿನ … Continued

ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಬಿಜೆಪಿ : ನಾಳೆ ಹುಬ್ಬಳ್ಳಿಗೆ ನಡ್ಡಾ ಆಗಮನ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಜಾಗೃತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿ- ಧಾರವಾಡಕ್ಕೆ ಮಂಗಳವಾರ, ನವೆಂಬರ್‌ 18ರಂದು ಆಗಮಿಸಲಿದ್ದು, ಎರಡು ದಿನ ಜಿಲ್ಲೆಯಲ್ಲೇ ವಾಸ್ತವ್ಯ ಠಿಕಾಣಿ ಹೂಡಲಿದ್ದಾರೆ ಎಂದು ವರದಿಯಾಗಿದೆ. ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಆಗದಂತೆ ತಡೆಯಲು … Continued

ಕರ್ನಾಟಕದ ಚುನಾವಣೆ: ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ, ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೂರನೇ ಪಟ್ಟಿ ಕ್ಷೇತ್ರ         ಅಭ್ಯರ್ಥಿ ನಾಗಠಾಣ-ಸಂಜೀವ ಐಹೊಳೆ ಸೇಡಂ-ರಾಜಕುಮಾರ ಪಾಟೀಲ ಕೊಪ್ಪಳ-ಮಂಜುಳಾ ಅಮರೇಶ ರೋಣ – ಕಳಕಪ್ಪ ಬಂಡಿ, … Continued

ಬಿಜೆಪಿ ವರಿಷ್ಠರು ಸೂಚಿಸಿದರೆ ಮಂಡ್ಯದಲ್ಲಿ ಸ್ಪರ್ಧಿಸುವೆ : ಸುಮಲತಾ ಅಂಬರೀಶ

ಮಂಡ್ಯ: ಬಿಜೆಪಿಯ ಹೈಕಮಾಂಡ್‌ ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ವದಂತಿ ಇದೆ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ. ಒಂದೊಮ್ಮೆ ಪಕ್ಷ ಸೂಚನೆ ನೀಡಿದರೆ ನಾನು ಸ್ಪರ್ಧೆ ಮಾಡುವೆ. ಆದರೆ ಈವರೆಗೆ … Continued

ಕೇರಳ ರೈಲಿನ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ: ಶಂಕಿತ “ಅತ್ಯಂತ ತೀವ್ರಗಾಮಿ” ; ತನಿಖಾ ತಂಡದ ಮುಖ್ಯಸ್ಥ

ಕೋಝಿಕ್ಕೋಡ್: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ಆರೋಪಿಯು “ತೀವ್ರಗಾಮಿ ಮೂಲಭೂತವಾದಿ” ವ್ಯಕ್ತಿಯಾಗಿದ್ದು, ಪೂರ್ವ ಯೋಜನೆಯಂತೆ ಅಪರಾಧ ಎಸಗಲು ರಾಜ್ಯಕ್ಕೆ ತಲುಪಿದ್ದಾನೆ ಎಂದು ಹೇಳಿದೆ. . ಎಸ್‌ಐಟಿ ಮುಖ್ಯಸ್ಥರಾಗಿರುವ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಎಂಆರ್ ಅಜಿತಕುಮಾರ ಅವರು, ಆರೋಪಿ ಶಾರುಖ್ … Continued

ಸೇತುವೆಯ ಮೇಲೆ ವಿಶಿಷ್ಟ ಪಟ್ಟಣ ನಿರ್ಮಿಸಿದ ಚೀನಾ | ವೀಕ್ಷಿಸಿ

ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಆಸಕ್ತಿದಾಯಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಅವರ ಟ್ವೀಟ್‌ಗಳು ಆನ್‌ಲೈನ್‌ನಲ್ಲಿ ಹೆಚ್ಚಿನ ಗಮನ ಸೆಳೆಯುತ್ತವೆ. ಈ ವೇಳೆ ಅವರು ಚೀನಾದ ಚಾಂಗ್‌ಕಿಂಗ್‌ ಎಂಬಲ್ಲಿ ಸೇತುವೆಯ ಮೇಲೆ ನಿರ್ಮಿಸಲಾದ ವರ್ಣರಂಜಿತ ಟೌನ್‌ಶಿಪ್‌ನ ಆಕರ್ಷಕ ವೀಡಿಯೊ ಹಂಚಿಕೊಂಡಿದ್ದಾರೆ. ”ಇಲ್ಲಿ ವಾಸಿಸುವುದನ್ನು ಕಲ್ಪಿಸಿಕೊಳ್ಳಿ…..” ಎಂದು ಆರ್‌ಪಿಜಿ (RPG)ಎಂಟರ್‌ಪ್ರೈಸಸ್‌ ಅಧ್ಯಕ್ಷ ಹರ್ಷ ಗೋಯೆಂಕಾ ವೀಡಿಯೊವನ್ನು ಹಂಚಿಕೊಳ್ಳುವಾಗ … Continued