ಮಾಜಿ ಸಂಸದನ ಹತ್ಯೆ ಪ್ರಕರಣ : ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಭಾಸ್ಕರ ರೆಡ್ಡಿ ಬಂಧಿಸಿದ ಸಿಬಿಐ

ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ. ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ (ಏಪ್ರಿಲ್ 16) ಬಂಧಿಸಿದೆ. ಹತ್ಯೆಯಾಗಿದ್ದ ವಿವೇಕಾನಂದ ರೆಡ್ಡಿ ಸಹ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ … Continued

ಎಸ್.ಎಸ್.ಎಲ್.ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು : 2023ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರಗಳನ್ನು ಏಪ್ರಿಲ್‌ 15 ರಂದು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಪ್ರಕಟಿಸಿದ ಮೂರು ದಿನಗಳೊಳಗೆ ವಿದ್ಯಾರ್ಥಿಗಳು ಕೀ ಉತ್ತರಗಳ ಕುರಿತು Online ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಆಕ್ಷೇಪಣೆ ಸಲ್ಲಿಸುವ ವಿದ್ಯಾರ್ಥಿಯು, ಮಂಡಳಿಯ ಅಂತರ್ಜಾಲ kseab.karnataka.gov.in ನಲ್ಲಿ ಲಾಗಿನ್ ಆಗಿ, ವಿದ್ಯಾರ್ಥಿಯು ನೋಂದಣಿ … Continued

ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ ಅವರನ್ನು ಯಾರೂ ಕ್ಷಮಿಸುವುದಿಲ್ಲ : ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಬಿಜೆಪಿ (BJP) ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ ಅವರನ್ನು ಯಾರು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಶೆಟ್ಟರ್ ರಾಜೀನಾಮೆ ನಂತರ ಮಧ್ಯಾಹ್ನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ ಜನಸಂಘದಿಂದಲೂ ಬಿಜೆಪಿ ಜೊತೆಗಿದ್ದರು. ಶೆಟ್ಟರ್ ಅವರನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, … Continued

ಬಿಜೆಪಿಯ ಕೊನೆಯ ಕ್ಷಣದ ಸಂಧಾನಕ್ಕೂ ಬಗ್ಗದ ಜಗದೀಶ ಶೆಟ್ಟರ್‌ : ಸ್ಪೀಕರ್‌ ಕಾಗೇರಿಗೆ ರಾಜೀನಾಮೆ ಸಲ್ಲಿಕೆ

ಶಿರಸಿ: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ ಶೆಟ್ಟರ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು. ಶಿರಸಿಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು. ಜಗದೀಶ್‌ ಶೆಟ್ಟರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ … Continued

ತನ್ನ ಮರಿಯನ್ನು ರಕ್ಷಿಸಲು ಮೊಸಳೆ ಮೇಲೆ ದಾಳಿ ಮಾಡಿದ ತಾಯಿ ಆನೆ, ಕೊಳದಿಂದಲೇ ಪಲಾಯನ ಮಾಡಿದ ಮೊಸಳೆ | ವೀಕ್ಷಿಸಿ

ತಾಯಂದಿರು ಶೌರ್ಯ ಮತ್ತು ಧೈರ್ಯದ ಪ್ರತಿರೂಪ ಮತ್ತು ತಾಯಿಯಂತೆ ಯಾರೂ ಮಗುವನ್ನು ರಕ್ಷಿಸಲು ಸಾಧ್ಯವಿಲ್ಲ. ತನ್ನ ಮಗುವನ್ನು ರಕ್ಷಿಸಲು ಅವಳು ತನ್ನ ಜೀವವನ್ನೇ ಅಪಾಯಕ್ಕೆ ತಳ್ಳಬಹುದು. ಅಂತಹ ಬಲವಾದ ಪ್ರವೃತ್ತಿಗಳು ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಕಂಡುಬರುತ್ತವೆ. ತಾಯಿ ಆನೆಯೊಂದು ತನ್ನ ಮಗುವನ್ನು ರಕ್ಷಿಸಲು ಮೊಸಳೆ ಮೇಲೆ ದಾಳಿ ಮಾಡುವುದನ್ನು ತೋರಿಸುವ ಇಂತಹ ವೀಡಿಯೊ ಟ್ವಿಟರ್‌ನಲ್ಲಿ ಕಾಣಿಸಿಕೊಂಡಿದೆ. … Continued

ಇಂದಿನಿಂದ ರಾಹುಲ್​ ಗಾಂಧಿ ಎರಡು ದಿನಗಳ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಇಂದಿನಿಂದ (ಏಪ್ರಿಲ್‌ 16) ರಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಭಾನುವಾರ ಬೆಳಗ್ಗೆ 9:30ಕ್ಕೆ ದೆಹಲಿ ಏರ್​​ಪೋರ್ಟ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸುವ ಅವರು, ನಂತರ ಮಧ್ಯಾಹ್ನ 12:25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ … Continued

ದೆಹಲಿಯಲ್ಲಿ ಒಂದೇ ದಿನಕ್ಕೆ 1,300 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲು, 30% ದಾಟಿದ ಪಾಸಿಟಿವಿಟಿ ದರ

ನವದೆಹಲಿ: ದೆಹಲಿ ಆರೋಗ್ಯ ಇಲಾಖೆ ಶನಿವಾರದ ದೈನಂದಿನ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 1,300 ಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಹಾಗೂ ಪಾಸಿಟಿವಿಟಿ ದರ ಶೇಕಡಾ 30 ಕ್ಕಿಂತ ಹೆಚ್ಚು ಎಂಬುದು ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಒಟ್ಟು 1,369 ಕೊರೊನಾ ಪ್ರಕರಣಗಳು ದಾಖಲಾಗಿವೆ. ಪಾಸಿಟಿವಿಟಿ … Continued

ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಅತೀಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ ನಲ್ಲಿ ಹತ್ಯೆ

ಲಕ್ನೋ: ಮಾಜಿ ಸಂಸದ, ಕುಖ್ಯಾತ ಗ್ಯಾಂಗ್‌ಸ್ಟರ್‌ ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಗ್ಯಾಂಗ್‌ಸ್ಟರ್‌ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ ನಲ್ಲಿ ಹತ್ಯೆ ಅತೀಕ್‌ ಅಹ್ಮದ್‌ (Atiq Ahmed) ಮತ್ತು ಸಹೋದರ ಅಶ್ರಫ್‌ ಅಹ್ಮದ್‌ ಗ್ಯಾಂಗ್‌ವಾರ್‌ ಗೆ ಬಲಿಯಾಗಿದ್ದಾರೆ. ಇಬ್ಬರನ್ನು ಶನಿವಾರ ಪ್ರಯಾಗ್‌ರಾಜ್‌ ಆಸ್ಪತ್ರೆಗೆ ಮೆಡಿಕಲ್‌ ಚೆಕಪ್‌ಗಾಗಿ ಕರೆದುಕೊಂಡು ಹೋಗುವಾಗ ಅತೀಕ್‌ ಅಹಮ್ಮದ್‌ ಮಾಧ್ಯಮಗಳ ಮುಂದೆ ಮಾತನಾಡಲು ಮುಂದಾದಾಗ ಎಲ್ಲಿಂದಲೋ … Continued

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್(Jagadish Shettar) ಅವರು ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ(ಏಪ್ರಿಲ್ 15) ರಾತ್ರಿ ಜಗದೀಶ ಶೆಟ್ಟರ್​ ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಅದು ವಿಫಲವಾಗಿದ್ದು, ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ … Continued

ನಿವೇದಿತ ಆಳ್ವಾಗೆ ಕುಮಟಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ರಾಜೀನಾಮೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಮುಖಂಡ ಹಾಗೂ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಇಂದು, ಶನಿವಾರ ಕಾಂಗ್ರೆಸ್‌ ತನ್ನ ಮೂರನೇ ಅಭ್ಯರ್ಥಿಗಳ ಬಿಡುಗಡೆ ಮಾಡಿದ್ದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ … Continued