ಕಾರು ಅಪಘಾತ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರಗೆ ಗಾಯ

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಡರಾತ್ರಿ ಎರಡು ಗಂಟೆ ಸುಮಾರಿಗೆ ಬಾಬಾರಾವ್‌ ಚಿಂಚನಸೂರ ಅವರನ್ನು ಯುನೈಟೆಡ್‌ ಆಸ್ಪತ್ರೆಗೆ … Continued

ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಭಾಷಣ ಸ್ಥಳದಲ್ಲಿ ಸ್ಫೋಟ

ಶನಿವಾರ ವಕಯಾಮಾ ನಗರದಲ್ಲಿ ಭಾಷಣ ಪ್ರಾರಂಭಿಸುವ ಮುನ್ನ ಪೈಪ್ ಬಾಂಬ್ ಎಸೆದ ನಂತರ ಮತ್ತು ದೊಡ್ಡ ಸ್ಫೋಟದ ಶಬ್ದ ಕೇಳಿದ ನಂತರ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಾರ್ವಜನಿಕ ಪ್ರಸಾರಕ NHK ಪ್ರಕಾರ, ಸ್ಥಳದಲ್ಲಿ ಸ್ಫೋಟದ ರೀತಿಯ ಧ್ವನಿ ಇತ್ತು. ಘಟನೆ ನಡೆದ ಸ್ಥಳದಲ್ಲಿ … Continued

125 ಅಡಿ ಎತ್ತರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶುಕ್ರವಾರ ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಹೈದರಾಬಾದ್‌ನ ಈ ಡಾ.ಅಂಬೇಡ್ಕರ್ ಪ್ರತಿಮೆಯು ಭಾರತದ ಅತಿ ಎತ್ತರದ ಪ್ರತಿಮೆಯಾಗಿದೆ. ಅನಾವರಣ ಸಮಾರಂಭದಲ್ಲಿ 35,000 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪ್ರತಿಮೆಯು ಹೈದರಾಬಾದ್‌ನ ಪ್ರಸಿದ್ಧ ಹುಸೇನ್ ಸಾಗರ್ ಸರೋವರದ … Continued

ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣಾ ಭತ್ಯೆ (allowance) ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಡಿಎಸ್​ಪಿ ದರ್ಜೆ ಮತ್ತು ಮೇಲ್ಮಟ್ಟದ ಅಧಿಕಾರಿಗಳಿಗೆ 7000 ರೂ. (ಒಂದು ಬಾರಿಗೆ) ಪೊಲೀಸ್ ಇನ್ಸ್ಪೆಕ್ಟರ್​ಗಳಿಗೆ 700 ರೂ. (ಪ್ರತಿ ದಿನಕ್ಕೆ) ಪಿಎಸ್​ಐ, ಎಎಸ್​ಐ, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ … Continued

ದೇವಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಡಾ.ಪರಮೇಶ್ವರ ಪಾದ ಮುಟ್ಟಿ ನಮಸ್ಕರಿಸಿದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ | ವೀಕ್ಷಿಸಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ತುಮಕೂರಿನ ದೇವಸ್ಥಾನದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ ಪರಮೇಶ್ವರ ಅವರ ಆಶೀರ್ವಾದ ಪಡೆದರು. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರು ತಮ್ಮ ತಂದೆಯ ಭದ್ರಕೋಟೆಯಾದ ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ … Continued

ಕಾಂತಾರ ತಂಡಕ್ಕೆ ಮತ್ತೆ ಸಂಕಷ್ಟ : ಥಿಯೇಟರ್, ಒಟಿಟಿಯಲ್ಲಿ ‘ವರಾಹ ರೂಪಂ’ ಹಾಡು ಬಳಸದಂತೆ ಕೇರಳ ಕೋರ್ಟ್ ಮಧ್ಯಂತರ ತಡೆಯಾಜ್ಞೆ

ಕೋಝಿಕ್ಕೋಡ್: ಕನ್ನಡದ ಕಾಂತಾರ ಚಿತ್ರದ ವಿವಾದಾತ್ಮಕ ಹಾಡನ್ನು ಚಿತ್ರಮಂದಿರಗಳಲ್ಲಿ ಹಾಗೂ ಒಟಿಟಿ (OTT) ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿಷೇಧಿಸಿ ಕೇರಳ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಕೃತಿಸ್ವಾಮ್ಯ ಕಾಯ್ದೆಯ ಪ್ರಾಥಮಿಕ ಉಲ್ಲಂಘನೆಯನ್ನು ಉಲ್ಲೇಖಿಸಿದೆ. ಕೋಝಿಕ್ಕೋಡ್ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಕೆ.ಇ ಸಾಲಿಹ್ ಅವರು 2022 ರ ಚಲನಚಿತ್ರ ‘ಕಾಂತಾರ’ ಸಿನೆಮಾದ … Continued

ಕರ್ನಾಟಕ ಚುನಾವಣೆ : 40-45 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ ಎನ್‌ಸಿಪಿ, ನಾಳೆ ಸಭೆ ; ಕಾಂಗ್ರೆಸ್‌ ಮೇಲೆ ಇದರ ಪರಿಣಾಮ ಏನು..?

ನವದೆಹಲಿ : “ವಿರೋಧ ಪಕ್ಷಗಳ ಏಕತೆ” ಹೆಸರಿನಲ್ಲಿ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನ ಚುನಾವಣೆಯಲ್ಲಿ ತಾನು ಸ್ಪರ್ಧಿಸಬಹುದು ಎಂದು ಹೇಳಿದೆ. ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಂಬರುವ ಕರ್ನಾಟಕ … Continued

ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್‌ ಬೈ: ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ವಿಧಾನ ಪರಿಷತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್ ಕಮಿಟಿ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ನಂತರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ … Continued

ತಿರುಪತಿ ದೇಗುಲದ ದಿವ್ಯ ದರ್ಶನ ಟೋಕನ್‌ ನೀಡುವಲ್ಲಿ ಪ್ರಮುಖ ಬದಲಾವಣೆ

ತಿರುಪತಿ: ದಿವ್ಯ ದರ್ಶನ ಟೋಕನ್‌ (Divya Darshan tokens)ಗಳನ್ನು ನೀಡುವುದಕ್ಕೆ ಸಂಬಂಧಪಟ್ಟಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹೊಸ ಬದಲಾವಣೆ ಮಾಡಿದೆ. ಹೊಸ ನಿಯಮದಿಂದ ಪಾದಯಾತ್ರೆ ಮೂಲಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಆಗಮಿಸುವವರ ಮೇಲೆ ಪರಿಣಾಮ ಬೀರಲಿದೆ. ಈ ಮೊದಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಗಮಿಸುವವರಿಗೆ ಪಾದಯಾತ್ರೆ ಮಾರ್ಗದಲ್ಲಿ ಮತ್ತು ಗಾಳಿಗೋಪುರಂನಲ್ಲಿ ದಿವ್ಯ ದರ್ಶನ … Continued

ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗಲು ಅರವಿಂದ ಕೇಜ್ರಿವಾಲಗೆ ಸಮನ್ಸ್ ನೀಡಿದ ಸಿಬಿಐ

ನವದೆಹಲಿ: ಈಗ ರದ್ದಾದ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಸಿಸೋಡಿಯಾ ಅವರು ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಾರ್ವಜನಿಕ ಆಸ್ತಿ … Continued