ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಲಕ್ಷ್ಮಣ ಸವದಿ

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ಸಲ್ಲಿಸುವ ಮಾತನ್ನಾಡಿದ್ದಾರೆ. ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ನಾಯಕರು ಟಿಕೆಟ್‌ ನೀಡುವ ಆಶ್ವಾಸನೆ ನೀಡಿದ್ದರು. ಆದರೆ, ಕೊಟ್ಟ ಮಾತಿನಂತೆ ಅವರು ನಡೆದುಕೊಂಡಿಲ್ಲ. ಬಿಜೆಪಿಯಲ್ಲಿ ತತ್ವ ಸಿದ್ಧಾಂತಗಳು ಉಳಿದಿಲ್ಲ. ನಾಳೆ (ಗುರುವಾರ) ಕ್ಷೇತ್ರದ ಮತದಾರರ ಹಾಗೂ … Continued

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7830 ಹೊಸ ಕೋವಿಡ್‌-19 ಪ್ರಕರಣಗಳು ದಾಖಲು

ನವದೆಹಲಿ: ಇಂದು ಬುಧವಾರ (ಏಪ್ರಿಲ್ 12) ಬೆಳಿಗ್ಗೆ ನೀಡಿದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 7,830 ದೈನಂದಿನ ಹೊಸ ಕೊರೊನಾ ವೈರಸ್ ಸೋಂಕುಗಳು ದಾಖಲಾಗಿದೆ, ಇದು 223 ದಿನಗಳಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ ದಾಖಲಾದ ಪ್ರಕರಣವಾಗಿದೆ ಮತ್ತು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215 ಕ್ಕೆ ಏರಿದೆ. ದೆಹಲಿ, … Continued

ಬಟಿಂಡಾ ಸೇನಾ ಕಂಟೋನ್ಮೆಂಟ್‌ನೊಳಗೆ ಗುಂಡಿನ ದಾಳಿ: 4 ಸಾವು

ನವದೆಹಲಿ: ಇಂದು, ಬುಧವಾರ (ಏ.12) ಬೆಳಗ್ಗೆ ಪಂಜಾಬ್​​ನ ಬಟಿಂಡಾ ಸೇನಾ ಕಂಟೋನ್ಮೆಂಟ್‌ನೊಳಗೆ ಗುಂಡಿನ ದಾಳಿ ನಡೆದಿದೆವಎಂದು ಪಂಜಾಬ್ ಎಸ್‌ಎಸ್‌ಪಿ ಹೇಳಿದ್ದಾರೆ. ಘಟನೆಯ ನಂತರ ಸ್ಟೇಷನ್ ಕ್ವಿಕ್ ರಿಯಾಕ್ಷನ್ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ ಮತ್ತು ಪ್ರದೇಶವನ್ನು ಸೀಲ್ ಮಾಡಲಾಗಿದೆ. ಸೇನಾ ಸ್ಟೇಷನ್‌ ಒಳಗೆ ಮುಂಜಾನೆ 4:35ಕ್ಕೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎಸ್‌ಎಸ್‌ಪಿ ಬಟಿಂಡಾ ಪ್ರಕಾರ, “ಇದು … Continued

ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್ ನಂತರ ದೆಹಲಿಗೆ ಹೊರಟ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ, ತಮ್ಮ ಹೆಸರು ಇಲ್ಲದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ದೆಹಲಿಗೆ ಹೋಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ದೆಹಲಿಗೆ ಬರುವಂತೆ … Continued

ಆಘಾತಕಾರಿ ..: ಸತ್ತ ನಂತರಮಹಿಳೆ ಶವವನ್ನು ಕಾರಿನಲ್ಲಿ ಒಯ್ದು ನಕಲಿ ಉಯಿಲಿಗೆ ಹೆಬ್ಬೆಟ್ಟು ಒತ್ತಿಸಿಕೊಂಡ ಸಂಬಂಧಿಕರು | ವೀಕ್ಷಿಸಿ

ನವದೆಹಲಿ: ಮೃತ ಮಹಿಳೆಯ ಹೆಬ್ಬೆರಳಿನ ಗುರುತನ್ನು ಆಕೆಯ ಸಂಬಂಧಿಕರು ತೆಗೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿರುವುದು ತಡವಾಗಿ ವರದಿಯಾಗಿದೆ. ಈ ಆಘಾತಕಾರಿ ಕೃತ್ಯದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ವೀಡಿಯೊ 2021ರದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೊಮ್ಮಗ ಜಿತೇಂದ್ರ ಶರ್ಮಾ ಅವರು ಪೊಲೀಸರಿಗೆ ದೂರು ನೀಡಿದ್ದು, ಅಪರಾಧ ಎಸಗುತ್ತಿರುವವರ ವಿರುದ್ಧ ಕ್ರಮ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮೊದಲನೇ ಪಟ್ಟಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ಸವಾಲು ಹಾಕಿದ ಬಿಜೆಪಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಂಗಳವಾರ ರಾತ್ರಿ 189 ಅಭ್ಯರ್ಥಿಗಳನ್ನು ತನ್ನ ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಮೇ 10 ರಂದು 224 ಸ್ಥಾನಗಳ ವಿಧಾನಸಭೆಗೆ ಚುನಾವಣೆಗೆ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ … Continued

ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ: ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ, ಕೆಲವು ಹಾಲಿ ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾಗಿದ್ದು, ಇವುಗಳಲ್ಲಿ 52 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಹಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೊದಲನೇ ಪಟ್ಟಿಯಲ್ಲಿ ಬಿಡೆಗಡೆಯಾದ 189 ಅಭ್ಯರ್ಥಿಗಳ ಪೈಕಿ … Continued

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್‌

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಪ್ರಕಟಿಸಲಾಗಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ … Continued

ಉದ್ಯಮಿ ಆನಂದ ಮಹಿಂದ್ರಾ ಗಮನ ಸೆಳೆದ ಅಂಕೋಲಾ ಬಸ್‌ ನಿಲ್ದಾಣದಲ್ಲಿನ ಹಾಲಕ್ಕಿ ಮಹಿಳೆಯ ಸ್ವಚ್ಛತೆ | ವೀಕ್ಷಿಸಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿನಿಂದ ಹೊರಚೆಲ್ಲಿದ ಕಸ ಆರಿಸಿ ಕಸದ ಬುಟ್ಟಿಗೆ ಹಾಕುತ್ತಿರುವ ಹಾಲಕ್ಕಿ ಮಹಿಳೆಯ ಸ್ವಚ್ಛತಾ ಕಳಕಳಿಯ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಈ ಮಹಿಳೆಯ ಕೆಲಸಕ್ಕೆ ಹಲವಾರು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇಸಿಗೆ ಸಮಯದಲ್ಲಿ ಸಿಗುವ ಕಾಡು ಹಣ್ಣುಗಳನ್ನು … Continued

ಬಿಜೆಪಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ರಾಜೀನಾಮೆ ಪತ್ರ ವೈರಲ್, ಸ್ಪಷ್ಟನೆ ನೀಡಿದ ಶೆಟ್ಟರ್

ಹುಬ್ಬಳ್ಳಿ: ಕ್ಷೇತ್ರ ಬಿಟ್ಟುಕೊಡುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಅವರಿಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಅವರ ಹೆಸರಿನಲ್ಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ ಶೆಟ್ಟರ್, ನನ್ನ ಹೆಸರಿನಲ್ಲಿ ವೈರಲ್ ಆಗುತ್ತಿರುವ ರಾಜೀನಾಮೆ ಪತ್ರ ನಕಲಿ ಎಂದು ಹೇಳಿದ್ದಾರೆ. ನಾನು ಬಿಜೆಪಿ ಪ್ರಾಥಮಿಕ … Continued