ಶಾಸಕ ನೆಹರು ಓಲೆಕಾರ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ; ಚುನಾವಣಾ ಹಾದಿ ಸುಗಮ

ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೆಕಾರ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ ಅವರನ್ನು ಸಲ್ಲಿಸಿದ್ದ ಮಧ್ಯಂತರ … Continued

ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ … Continued

ಧಾರ್ಮಿಕ ವಿಧಿವಿಧಾನದ ವೇಳೆ ದೇವಸ್ಥಾನದ ಕೆರೆಯಲ್ಲಿ ಮುಳುಗಿ 5 ಮಂದಿ ಸಾವು

ಚೆನ್ನೈ : ಚೆನ್ನೈನ ಕೀಲ್ಕತ್ತಲೈ ಬಳಿಯ ಮೂವರಸಂಪೇಟೆಯಲ್ಲಿರುವ ದೇವಸ್ಥಾನದ ಕೊಳದಲ್ಲಿ ಬುಧವಾರ ಧಾರ್ಮಿಕ ಕ್ರಿಯೆಯ ವೇಳೆ 18 ರಿಂದ 23 ವರ್ಷದೊಳಗಿನ ಐವರು ಮುಳುಗಿ ಮೃತಪಟ್ಟಿದ್ದಾರೆ. ಬೆಳಗ್ಗೆ 10:15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನವು ಕಳೆದ ಕೆಲವು ದಿನಗಳಿಂದ ದೇವಸ್ಥಾನದಲ್ಲಿ ಸಮಾರಂಭಗಳನ್ನು ಆಯೋಜಿಸುತ್ತಿದೆ ಎಂದು ಅವರು ಹೇಳಿದರು. … Continued

ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು … Continued

ಸಿಎಂ ಬೊಮ್ಮಾಯಿಗೆ ನಟ ಸುದೀಪ್​ ಬೆಂಬಲ: ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ ಎಂದು ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಿಚ್ಚ ಸುದೀಪ್ ಅವರನ್ನು ತನ್ನ ಸ್ಟಾರ್ ಪ್ರಚಾರಕ ಎಂದು ಬಿಜೆಪಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಸಂಸದ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಯಾರನ್ನು ಬೆಂಬಲಿಸಬೇಕು ಎಂಬುದನ್ನು ಆಯ್ಕೆ ಮಾಡಲು ನಟ ಸುದೀಪ್‌ ಅವರು ಸ್ವತಂತ್ರರು ಎಂದು ಹೇಳಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು … Continued

ಕೇಂದ್ರೀಯ ಸಂಸ್ಥೆಗಳ ‘ದುರುಪಯೋಗ’ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಹಾಗೂ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲು ವಿರೋಧ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಈ ಬಗ್ಗೆ ಮಾರ್ಗಸೂಚಿಗಳನ್ನು ಸೂಚಿಸಬೇಕು … Continued

ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಬೆಂಗಳೂರು : ಇದ್ರೀಷ್ ಪಾಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಮಾರ್ಚ್ 31 ರಂದು ಕನಕಪುರದ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ಈ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ … Continued

ರಾಜ್ಯ ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ

ಬೆಂಗಳೂರು: ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ … Continued

ಫೋರ್ಬ್ಸ್ ಬಿಲಿಯನೇರ್ಸ್ 2023 ಪಟ್ಟಿ ಬಿಡುಗಡೆ : ಏಷ್ಯಾದ ಶ್ರೀಮಂತ ವ್ಯಕ್ತಿ ಸ್ಥಾನ ಮರಳಿ ಪಡೆದ ಮುಖೇಶ ಅಂಬಾನಿ

ನವದೆಹಲಿ: ಏಪ್ರಿಲ್ 4 ರಂದು ಬಿಡುಗಡೆಯಾದ ಫೋರ್ಬ್ಸ್ ಬಿಲಿಯನೇರ್ 2023 ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಮರಳಿ ಪಡೆದಿದ್ದಾರೆ. $211 ಶತಕೋಟಿ ನಿವ್ವಳ ಮೌಲ್ಯದೊಂದಿಗೆ, ಫ್ರೆಂಚ್ ಐಷಾರಾಮಿ ಸರಕುಗಳ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್, LVMH ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. $180 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 51 ವರ್ಷದ … Continued

ಭಾರತದಲ್ಲಿ ಹೊಸದಾಗಿ ಹೊಸದಾಗಿ 4,435 ಕೊರೊನಾ ಪ್ರಕರಣಗಳು ದಾಖಲು : 163 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 4,435 ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಇದು 163 ದಿನಗಳಲ್ಲಿ (ಐದು ತಿಂಗಳು ಮತ್ತು 13 ದಿನಗಳು) ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಅಂಕಿಅಂಶಗಳು 15 ಸಾವುಗಳು ಸಾವಿನ ಸಂಖ್ಯೆ ವರದಿ … Continued