ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇಂದು, ಶನಿವಾರ 2024 ರ ಆರ್ಥಿಕ ವರ್ಷದ ಮೊದಲ ದಿನ ಸರ್ಕಾರವು ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿದೆ. ಏಪ್ರಿಲ್ 1 ರಂದು ಅಡುಗೆ ಅನಿಲದ ಬೆಲೆಯನ್ನು ಸುಮಾರು ₹ 92 ರಷ್ಟು ಕಡಿತಗೊಳಿಸಲಾಯಿತು. ಆದರೆ, ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ದರ ಇಳಿಕೆಯಾಗಿದೆ. ದೇಶೀಯ ಎಲ್‌ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಏಪ್ರಿಲ್ 6 ಅಥವಾ 7 ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್ ನೀಡುವ ಮೊದಲು ಪಕ್ಷವು ವಿಭಿನ್ನ ಜನರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿದೆ. ಬಹುತೇಕ ಏಪ್ರಿಲ್ 6 … Continued

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಗುಡ್‌ ಬೈ

ಹಾವೇರಿ: ಟಿಕೆಟ್ ಕೈ ತಪ್ಪಿದ ಕಾರಣದಿಂದ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ ಘೋಷಿಸಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಸೇರುವುದಾಗಿ ತಿಳಿಸಿದ್ದಾರೆ. ಶುಕ್ರವಾರ ಹಾನಗಲ್ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಅವರು ಅಲ್ಲಿ ಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಏಪ್ರಿಲ್ 7ರಂದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ತಿಳಿಸಿದ್ದಾರೆ ಹಾಗೂ ತನಗೆ ಬೆಂಬಲ … Continued

ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ “ತಪ್ಪು” ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಭೋಪಾಲ್ : ಸ್ವಾತಂತ್ರ್ಯ ಪಡೆದ ಏಳು ದಶಕಗಳ ನಂತರ ಪಾಕಿಸ್ತಾನದ ಜನರು ಸಂತೋಷವಾಗಿಲ್ಲ ಮತ್ತು ಅವರು ಈಗ ಭಾರತದ ವಿಭಜನೆ ಮಾಡಿದ್ದು ತಪ್ಪು ಎಂದು ನಂಬಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ. ಹದಿಹರೆಯದ ಕ್ರಾಂತಿಕಾರಿ ಹೇಮು ಕಲಾನಿ ಅವರ ಜನ್ಮದಿನದ ಅಂಗವಾಗಿ ದೇಶದ ವಿವಿಧ ಭಾಗಗಳಿಂದ ಸಿಂಧಿಗಳು ಪಾಲ್ಗೊಂಡಿದ್ದ … Continued

ವರುಣಾದಿಂದ ವಿಜಯೇಂದ್ರ ಸ್ಪರ್ಧೆ : ಊಹಾಪೋಹಕ್ಕೆ ತೆರೆ ಎಳೆದ ಯಡಿಯೂರಪ್ಪ

ಬೆಂಗಳೂರು : ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವರುಣಾದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧೆ ಮಾಡುವ ವಿಚಾರವಾಗಿ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಪುತ್ರ ವಿಜಯೇಂದ್ರ ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅವರಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಗೊಂದಲಗಳಿಗೆ … Continued

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು : ಕರಾಚಿ ಆಹಾರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು, ಹಲವರಿಗೆ ಗಾಯ

ಇಂದು, ಶುಕ್ರವಾರ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಉಚಿತ ಪಡಿತರ ವಿತರಣಾ ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪಡಿತರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಪಾಕಿಸ್ತಾನದ ಎಕ್ಸ್‌ಪ್ರೆಸ್ ನ್ಯೂಸ್ ವರದಿ … Continued

ಪ್ರಧಾನಿ ಮೋದಿ ಪದವಿ ಪ್ರಕರಣ: ಪಿಎಂಒ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್ ; ಅರವಿಂದ್ ಕೇಜ್ರಿವಾಲ್‌ ಗೆ 25,000 ರೂ. ದಂಡ

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಮಾಹಿತಿ ಹಕ್ಕು ಕಾಯಿದೆ ಅಡಿ ಒದಗಿಸುವ ಅಗತ್ಯವಿಲ್ಲ ಎಂದು ಶುಕ್ರವಾರ ಗುಜರಾತ್‌ ಹೈಕೋರ್ಟ್‌ ಆದೇಶಿಸಿದೆ. ಮೋದಿ ಪದವಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಪ್ರಧಾನಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ) ಮತ್ತು ಗುಜರಾತ್‌ ಹಾಗೂ ದೆಹಲಿ ವಿಶ್ವವಿದ್ಯಾಲಯಗಳಿಗೆ … Continued

ಕರ್ನಾಟಕ ಚುನಾವಣೆ 2023 : ಎಎಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು: ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿಗಳ ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಹೊಸದಾಗಿ ಸೇರ್ಪಡೆಗೊಂಡವರು, ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗಿರುವವರು, ರೈತರು, ಮಹಿಳಯರು ಸೇರಿದಂತೆ ಜನಸಾಮಾನ್ಯರಿಗೆ ಹೆಚ್ಚಿನ ಟಿಕೆಟ್‌ ನೀಡಿದೆ. 60 ಅಭ್ಯರ್ಥಿಗಳಲ್ಲಿ 11 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. 14 ಅಭ್ಯರ್ಥಿಗಳು ರೈತರಿದ್ದಾರೆ. ಬಿಎಂಟಿಸಿ ಮಾಜಿ ಕಂಡಕ್ಟರ್ ಅವರಿಗೂ ಟಿಕೆಟ್‌ ನೀಡಲಾಗಿದೆ. ಪಟ್ಟಿ … Continued

ಶ್ರೀರಾಮನ ಮೂರ್ತಿ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕನಿಂದ ಎಡವಟ್ಟು

ಬೀದರ: ಶ್ರೀರಾಮ ನವಮಿಯಂದು ಶ್ರೀರಾಮನ ಮೂರ್ತಿಯ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು ಮಾಡಿಕೊಂಡಿದ್ದಾರೆ. ಗುರುವಾರ ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕರ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ (Sharanu Salagar) ಅವರು … Continued

ಮಂಗಳ ಗ್ರಹಕ್ಕೆ ಮಾನವ : ನಾಸಾ ಯೋಜನೆ ಮುಖ್ಯಸ್ಥರಾಗಿ ಭಾರತೀಯ ಮೂಲದ ರೊಬೊಟಿಕ್ಸ್ ಇಂಜಿನಿಯರ್ ನೇಮಕ

ನವದೆಹಲಿ: ಭಾರತೀಯ ಮೂಲದ ಸಾಫ್ಟ್‌ವೇರ್ ಮತ್ತು ರೊಬೊಟಿಕ್ಸ್ ಎಂಜಿನಿಯರ್ ಅಮಿತ್‌ ಕ್ಷತ್ರಿಯ ಅವರನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹೊಸದಾಗಿ ಸ್ಥಾಪಿಸಿದ ಚಂದ್ರನಿಂದ ಮಂಗಳಕ್ಕೆ (Moon to Mars) ಗಗನಯಾನ ಕಾರ್ಯಕ್ರಮದ ಮೊದಲ ಮುಖ್ಯಸ್ಥರನ್ನಾಗಿ ನೇಮಿಸಿದೆ. ಅಮಿತ್‌ ಕ್ಷತ್ರಿಯ ಅವರು ಕಚೇರಿಯ ಮೊದಲ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ … Continued