ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ: ಒಂದು ತಿಂಗಳಲ್ಲಿ ಎರಡನೇ ಟಾರ್ಗೆಟೆಡ್‌ ಹತ್ಯೆ

ಕರಾಚಿ ಮುನ್ಸಿಪಲ್ ಕಾರ್ಪೊರೇಶನ್‌ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ ಬೀರಬಲ್ ಗೆನಾನಿ ಅವರನ್ನು ಗುರುವಾರ ಲಿಯಾರಿ ಎಕ್ಸ್‌ಪ್ರೆಸ್‌ವೇ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಲ್ಲಿ ಅವರ ಸಹಾಯಕ ಡಾ.ಕುರಾತ್-ಉಲ್-ಐನ್ ಸಹ ಗಾಯಗೊಂಡಿದ್ದಾರೆ. ಇವರಿಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ದಾಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಇದು … Continued

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ … Continued

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಎಸ್.ಆರ್ ಶ್ರೀನಿವಾಸ

ಬೆಂಗಳೂರು : ತುಮಕೂರು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು, ಗುರುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ‍್ಧರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ … Continued

ಏಷ್ಯಾ ಕಪ್ ಬೆಳವಣಿಗೆ ಬಗ್ಗೆ ಅತೃಪ್ತಿ : ಭಾರತದಲ್ಲಿ ನಡೆಯುವ ವಿಶ್ವಕಪ್ ಕ್ರಿಕೆಟ್‌ ಪಂದ್ಯಗಳಲ್ಲಿ ಪಾಕಿಸ್ತಾನ ಆಡುವುದು ಡೌಟು-ವರದಿ

ನವದೆಹಲಿ: ಒಂದು ಮೂಲದ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ 2023 ರಲ್ಲಿ ಭಾರತದ ತಂಡಕ್ಕೆ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಅವಕಾಶ ನೀಡದಿದ್ದರೆ ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕಿಸ್ತಾನ ಬೆದರಿಕೆ ಹಾಕಿದೆ. ಮೂಲವೊಂದರ ಪ್ರಕಾರ ಪಾಕಿಸ್ತಾನವು ಪಂದ್ಯಗಳನ್ನು ಬಾಂಗ್ಲಾದೇಶ … Continued

ಪರೀಕ್ಷೆ ಮುನ್ನಾ ದಿನ ನದಿಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶವ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟುಶನ್‌ಗೆ ತೆರಳಿದ್ದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬನ ಶಬವ ನದಿಯಲ್ಲಿ ಪತ್ತೆಯಾದ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಗುಂಡಿಮಜಲು ಗ್ರಾಮದಲ್ಲಿ ನಡೆದ ವರದಿಯಾಗಿದೆ 10ನೇ ತರಗತಿಯ ಪರೀಕ್ಷೆಗಳು ಶುಕ್ರವಾರದಿಂದ (ಮಾರ್ಚ್ 31) ಪ್ರಾರಂಭವಾಗಲಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ, 15 ವರ್ಷದ ಅದ್ವೈತ್ ಶೆಟ್ಟಿ ಪರೀಕ್ಷೆಯ ಒತ್ತಡದಿಂದಾಗಿ … Continued

ಹಣ್ಣಿನ ಮಾರ್ಕೆಟಲ್ಲಿ ಮಾರಾಟಗಾರರ ನಡುವೆ ಮಾರಾಮಾರಿ: ಟ್ರೇ-ದೊಣ್ಣೆಗಳಿಂದ ಬಡಿದಾಟ | ಮಾರಾಮಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

2021ರಲ್ಲಿ, ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಇಬ್ಬರು ಚಾಟ್ ಮಾರಾಟಗಾರರ ನಡುವಿನ ಜಗಳದ ವೀಡಿಯೊವು ವೈರಲ್ ಆಗಿತ್ತು, ಈಗ, ಶಿಮ್ಲಾದಲ್ಲಿ ಹಣ್ಣಿನ ಮಾರಾಟಗಾರರ ಗುಂಪುಗಳ ನಡುವಿನ ಕಾದಾಟದ ಇದೇ ರೀತಿಯ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಾದ-ವಿವಾದ ನಡೆದ ನಂತರ ಹಿಂಸಾತ್ಮಕ ಹೊಡೆದಾಟ ನಡೆಯಿತು. ವೀಡಿಯೊದಲ್ಲಿ ಖಾಲಿ ತರಕಾರಿ ಟ್ರೇಗಳು ಮತ್ತು ದೊಣ್ಣೆಗಳಿಂದ ವ್ಯಾಪಾರಿಗಳು … Continued

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ಕುಸಿತ: 13 ಭಕ್ತರು ಸಾವು

ಇಂದೋರ್ : ಮಧ್ಯಪ್ರದೇಶದ ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿತದ ಘಟನೆಯಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಗುರುವಾರ ಮಾಹಿತಿ ನೀಡಿದ್ದಾರೆ. ಹತ್ತೊಂಬತ್ತು ಜನರನ್ನು ರಕ್ಷಿಸಲಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, 11 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ – ಅದರಲ್ಲಿ 10 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ರಕ್ಷಿಸಲ್ಪಟ್ಟ 19 … Continued

ಕರ್ನಾಟಕ, ತಮಿಳುನಾಡು ವಿರೋಧದ ನಂತರ ಎಫ್‌ಎಸ್‌ಎಸ್‌ಎಐ ಯೂಟರ್ನ್‌ : ಮೊಸರಿನ ಬದಲು ʼದಹಿʼ ಎಂದು ಪ್ರಿಂಟ್‌ ಮಾಡುವ ಆದೇಶ ಹಿಂದಕ್ಕೆ

ನವದೆಹಲಿ: ಮೊಸರು ಪ್ಯಾಕೆಟ್‌ಗಳನ್ನು ಹಿಂದಿಯಲ್ಲಿ “ದಹಿ” ಎಂದು ಪ್ರಿಂಟ್‌ ಮಾಡುವಂತೆ ಭಾರತದ ಆಹಾರ ಸುರಕ್ಷತಾ ಪ್ರಾಧಿಕಾರದ ನಿರ್ದೇಶನವನ್ನು ಗುರುವಾರ ಬದಲಾಯಿಸಲಾಗಿದೆ. ಇದು ಹಿಂದಿಯೇತರರ ಮೇಲೆ ಹಿಂದಿಯನ್ನು ಹೇರುವ ಪ್ರಯತ್ನ ಎಂದು ದಕ್ಷಿಣ ರಾಜ್ಯಗಳಲ್ಲಿ ವಿರೋಧ ವ್ಯಕತವಾದ ಬೆನ್ನಲ್ಲೇ ನಿರ್ದೇಶನವನ್ನು ಹಿಂಪಡೆಯಲಾಗಿದೆ. ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇಂಗ್ಲಿಷ್‌ನ ಕರ್ಡ್‌ ಜೊತೆಗೆ ದಹಿ, … Continued

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ..? : ಸುಳಿವು ನೀಡಿದ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ವಿರುದ್ಧ ತಮ್ಮ ಮಗ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪ್ರಸ್ತುತ ತಮ್ಮ ಪುತ್ರ ಯತೀಂದ್ರ ಶಾಸಕರಾಗಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಿ.ವೈ. ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸುವ ಬಗ್ಗೆ … Continued

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವನರ್ತಕ

ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಮುಂಜಾನೆ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. … Continued