ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ರಾಜಕೀಯಕ್ಕೆ ಎಂಟ್ರಿ

ನವದೆಹಲಿ: ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದು, ಅವರು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಾನ್ಸುರಿ ಸ್ವರಾಜ್ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಪ್ರಾಕ್ಟೀಸ್‌ ಮಾಡುತ್ತಾರೆ. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಅವರು ರಾಜ್ಯ ಘಟಕದಲ್ಲಿ ತಮ್ಮ ಮೊದಲ ನೇಮಕಾತಿಯಲ್ಲಿ, ಪಕ್ಷದ … Continued

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಶಾಕ್‌: ಜೆಡಿಎಸ್‌ ಸೇರಿದ ಸಂಭಾವ್ಯ ಕಾಂಗ್ರೆಸ್‌ ಅಭ್ಯರ್ಥಿ…!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದಳಪತಿಗಳು ಜೆಡಿಎಸ್‌ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ. ಚನ್ನಪಟ್ಟಣದ ಮತಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಪ್ರಸನ್ನಗೌಡ ಪಿ ಜೆಡಿಎಸ್‌ ಸೇರಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಇವರಿಗೆ ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ, ಮೊದಲ ಪಟ್ಟಿಯಲ್ಲಿ ಚನ್ನಪಟ್ಟಣಕ್ಕೆ ಟಿಕೆಟ್‌ ಘೋಷಣೆ ಮಾಡಿರಲಿಲ್ಲ. ಇದರಿಂದ ಬೇಸರಗೊಂಡ ಪ್ರಸನ್ನಗೌಡ ಜೆಡಿಎಸ್‌ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈಸೂರಿನ ಚಾಮುಂಡಿ … Continued

ಭೋಜಪುರಿ ನಟಿ ಆಕಾಂಕ್ಷಾ ದುಬೆ ಹೊಟೇಲ್‌ ರೂಮಿನಲ್ಲಿ ಶವವಾಗಿ ಪತ್ತೆ

ವಾರಾಣಸಿ: ಜನಪ್ರಿಯ ಭೋಜಪುರಿ ನಟಿ ಆಕಾಂಕ್ಷಾ ದುಬೆ ಭಾನುವಾರ ಇಲ್ಲಿನ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. 25 ವರ್ಷದ ನಟಿ ಆಕಾಂಕ್ಷಾ ದುಬೆ ಫ್ಯಾನ್‌ಗೆ ಬಟ್ಟೆಯ ತುಂಡಿನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗೊತ್ತಾದ ತಕ್ಷಣ ಪೊಲೀಸರಿಗೆ ಕರೆ ಮಾಡಲಾಗಿದೆ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ. ಸಹಾಯಕ ಪೊಲೀಸ್ … Continued

ಸಂವಿಧಾನದ ಪ್ರಕಾರ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೀದರ: ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಜಾರಿಗೆ ತಂದಿದ್ದ ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ ನಂತರ ಈ ಹೇಳಿಕೆ ಬಂದಿದೆ. ಚುನಾವಣೆಗೆ ಮುನ್ನ ನಡೆದ ತನ್ನ ಕೊನೆಯ ಕ್ಯಾಬಿನೆಟ್ … Continued

ಹುಬ್ಬಳ್ಳಿ: ಚೆಕ್ ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದ 15 ಲಕ್ಷ ರೂ. ಹಣ ವಶಕ್ಕೆ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಅಂಕೋಲಾ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನಿಂದ 15 ಲಕ್ಷ ರೂ. ಗಳಷ್ಟು ದಾಖಲೆ ಇಲ್ಲದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಬ್ರೇಜಾ ಕಾರನ್ನು ಚೆಕ್‌ ಪೋಸ್ಟ್‌ನಲ್ಲಿ ಪರಿಶೀಲನೆ ಮಾಡಿದಾಗ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 15 ಲಕ್ಷ … Continued

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ … Continued

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾರ್ಚ್‌ 26ರಿಂದ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಮಾರ್ಚ್‌ 26ರಿಂದ 29ರವರೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಅಲ್ಲದೆ, ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು … Continued

ಅನರ್ಹ ಸಂಸದ ಎಂದ ತಮ್ಮ ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

ನವದೆಹಲಿ: ಸಂಸತ್ ಸದಸ್ಯರಾಗಿ ಲೋಕಸಭೆಯಿಂದ ಅನರ್ಹಗೊಂಡ ಕೆಲವು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್ ಬಯೋ ಬದಲಾಯಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯ ಬಯೋವನ್ನು ‘ಅನರ್ಹ ಸಂಸದ’ (Dis’Qualified MP) ಎಂದು ನವೀಕರಿಸಿದ್ದಾರೆ. ‘ಮೋದಿ ಉಪನಾಮ’ ಕುರಿತ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ … Continued

ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ಸುಂಟರಗಾಳಿ ಆರ್ಭಟ : ಕನಿಷ್ಠ 25 ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

ಅಪರೂಪದ, ದೀರ್ಘ-ಟ್ರ್ಯಾಕ್ ಸುಂಟರಗಾಳಿಯು ಶುಕ್ರವಾರ ರಾತ್ರಿ  ಅಮೆರಿಕದ ಪಶ್ಚಿಮ ಮಿಸಿಸಿಪ್ಪಿಯಾದ್ಯಂತ ವಿನಾಶ ಉಂಟು ಮಾಡಿತು ಹಾಗೂ ಕನಿಷ್ಠ 25 ಜನರು ಸಾವುಗೀಡಾದರು. ಕಟ್ಟಡಗಳನ್ನು ಧ್ವಂಸ ಮಾಡಿತು ಮತ್ತು ಸಾವಿರಾರು ಮನೆಗಳನ್ನು ವಿದ್ಯುತ್ ಸಂಪರ್ಕಕ್ಕೆ ಹಾನಿ ಮಾಡಿತು. ಅಲಬಾಮಾದಲ್ಲಿ ಚಂಡಮಾರುತದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯೂ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಇದೊಂದು ಭಯಾನಕ ಘಟನೆ” ಎಂದು ಮಿಸ್ಸಿಸ್ಸಿಪ್ಪಿ ಗವರ್ನರ್ … Continued

ಭಾರತದಲ್ಲಿ ಹೊಸದಾಗಿ 1890 ಕೋವಿಡ್ ಪ್ರಕರಣಗಳು ದಾಖಲು : ಇದು 149 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ: ಭಾನುವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತವು 1890 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಇದು 149 ದಿನಗಳಲ್ಲಿ ಅತಿ ಹೆಚ್ಚು, ಸಕ್ರಿಯ ಪ್ರಕರಣಗಳು 9,433 ಕ್ಕೆ ಏರಿದೆ. ಕಳೆದ ವರ್ಷ ಅಕ್ಟೋಬರ್ 28 ರಂದು ಒಂದೇ ದಿನದಲ್ಲಿ ದೇಶದಲ್ಲಿ 2,208 ಪ್ರಕರಣಗಳು ದಾಖಲಾಗಿದ್ದವು. ಇದೇ ವೇಳೆ ಏಳು ಸಾವುಗಳು … Continued