ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೂರು ದಿನಗಳ ರಾಜ್ಯಪ್ರವಾಸಕ್ಕಾಗಿ ಇಂದು, ಭಾನುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ. ಇಂದು ಭಾನುವಾರ ರಾತ್ರಿ ದೆಹಲಿಯಿಂದ ಮಂಗಳೂರಿಗೆ ಆಗಮಿಸುವ ಅವರು, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ, ಸೋಮವಾರ ಬೆಳಿಗ್ಗೆ ಉಡುಪಿಯಲ್ಲಿ ಬಿಜೆಪಿಯ ಬೂತ್ ಮಟ್ಟದ … Continued

ನಾನು ಗೋಮಾಂಸ ತಿನ್ನುತ್ತೇನೆ, ಬಿಜೆಪಿಯಲ್ಲಿದ್ದೇನೆ : ಬಿಜೆಪಿ ಮುಖಂಡನ ಹೇಳಿಕೆ

ಗುವಾಹಟಿ: ಕೇಸರಿ ಪಕ್ಷವು ಗೋಮಾಂಸ ಸೇವನೆಗೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ ಮತ್ತು ನನಗೆ ಪಕ್ಷದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೇಘಾಲಯದ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ದೇಶದಲ್ಲಿ ಯಾವುದೇ ಚರ್ಚ್ ದಾಳಿಗೆ ಒಳಗಾಗಿದ್ದನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಮೇಘಾಲಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ … Continued

ಕ್ರಿಕೆಟ್‌ : ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗದ 25,000 ರನ್ ಗಳಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ದಾಖಲೆ ಮುರಿದು ವಿರಾಟ್‌ ಕೊಹ್ಲಿ ಭಾನುವಾರ ಇತಿಹಾಸ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ಎರಡನೇ ಟೆಸ್ಟ್‌ನ 3ನೇ ದಿನವಾದ ಭಾನುವಾರ ಈ ಸಾಧನೆ ಮಾಡಿದ್ದಾರೆ. ಸಚಿನ್ 577 ಪಂದ್ಯಗಳಲ್ಲಿ 25,000 ರನ್ ಗಳಿಸಿದ್ದರು, ವಿರಾಟ್ 549 ಪಂದ್ಯಗಳಲ್ಲಿ ಇದನ್ನು … Continued

ಜೆಡಿಎಸ್‌ ಸೇರಿದ ಮಾಜಿ ಎಂಎಲ್‌ಸಿ ಎಸ್‌.ಎಲ್‌. ಘೋಟ್ನೇಕರ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಮಾತ್ರ ಇರುವಾಗ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಉತ್ತರ ಕನ್ನಡ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಕೋಲಾರದ ಜಿಲ್ಲಾ ಪಂಚಾಯತ ಮಾಜಿ … Continued

5000 ವರ್ಷಗಳ ಹಿಂದಿನ ಹೊಟೇಲ್‌ ಪತ್ತೆ: ಅದರಲ್ಲಿ ಫ್ರಿಡ್ಜ್‌ ತರಹದ ವ್ಯವಸ್ಥೆ, ಓವನ್‌, ಊಟದ ಟೇಬಲ್‌ಗಳ ಅವಶೇಷಗಳು ಪತ್ತೆ..!

ನಾಗರಿಕತೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಗರಗಳನ್ನು ನಿರ್ಮಾಣ ಮಾಡಿದ ಕೀರ್ತಿಗೆ ಭಾಜನರಾಗಿರುವ ಸುಮೇರಿಯನ್ನರು, ಸುಧಾರಿತ ತಂತ್ರಜ್ಞಾನಗಳನ್ನು ಬಳಸುತ್ತಿದ್ದರು.ಈಗಿನ ದಕ್ಷಿಣ ಇರಾಕ್‌ನಲ್ಲಿ ಸುಮಾರು 5,000 ವರ್ಷಗಳ ಹಿಂದಿನ ಸುಮೇರಿಯನ್‌ ನಾಗರಿಕತೆಯ ಹೊಟೇಲ್‌ನ ಅವಶೇಷಗಳನ್ನು ಪುರಾತತ್ತ್ವಜ್ಞರು ಪತ್ತೆ ಮಾಡಿದ್ದಾರೆ. ಪ್ರಾಚೀನ ಇರಾಕ್‌ನ ಸುಮೇರಿಯನ್ ನಾಗರಿಕತೆಯ ಮೊದಲ ನಗರ ಕೇಂದ್ರಗಳಲ್ಲಿ ಒಂದಾಗಿದ್ದ ಆಧುನಿಕ ನಗರವಾದ ನಾಸಿರಿಯಾದ ಈಶಾನ್ಯದಲ್ಲಿರುವ ಪ್ರಾಚೀನ ಲಗಾಶ್‌ನ … Continued

ಶಿವಸೇನೆಯ ಹೆಸರು, ಚಿಹ್ನೆ ಪಡೆಯಲು 2,000-ಕೋಟಿ ಡೀಲ್ ನಡೆದಿದೆ : ಸಂಜಯ ರಾವತ್‌ ಗಂಭೀರ ಆರೋಪ

ಮುಂಬೈ: ಶಿವಸೇನೆ ಪಕ್ಷದ ಹೆಸರು ಮತ್ತು ಅದರ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಖರೀದಿಸಲು “₹ 2000 ಕೋಟಿಗಳ ಅವ್ಯವಹಾರ ನಡೆದಿದೆ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ ರಾವತ್ ಅವರು ಭಾನುವಾರ ಆರೋಪಿಸಿದ್ದಾರೆ. ಸಂಜಯ ರಾವತ್‌ ಅವರು ತಮ್ಮ ಟ್ವೀಟ್‌ನಲ್ಲಿ ₹ 2,000 ಕೋಟಿ ಎಂಬುದು ಪ್ರಾಥಮಿಕ ಅಂಕಿ ಅಂಶವಾಗಿದೆ ಮತ್ತು … Continued

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಬೆಂಗಳೂರು: ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡುವುದಾಗಿ ಘೋಷಣೆ ಮಾಡುತ್ತೇನೆ. ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. … Continued

ಕ್ಯಾನ್ಸರಿಗೆ ನೀಡುವ ಔಷಧಿಗಳಿಗೆ ತಡೆಯೊಡ್ಡುವ ಸಣ್ಣ ಡಿಎನ್‌ಎ ಪತ್ತೆ ಮಾಡಿದ ವಿಜ್ಞಾನಿಗಳು: ಇದರಿಂದ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಬದಲಾವಣೆಯ ನಿರೀಕ್ಷೆ

ಕ್ಯಾನ್ಸರ್ ಹರಡಲು ಸಹಾಯ ಮಾಡುವ ಡಿಎನ್‌ಎ ತುಣುಕುಗಳನ್ನು ವಿಜ್ಞಾನಿಗಳು ಗುರುತಿಸಿದ್ದಾರೆ. ಕ್ಯಾನ್ಸರ್-ವಿರೋಧಿ ಔಷಧಿಗಳಿಗೆ ಗೆಡ್ಡೆಗಳು ಪ್ರತಿರೋಧ ಒಡ್ಡಲು ಸಹಾಯ ಮಾಡಲು ಈ ಸೂಕ್ಷ್ಮದರ್ಶಕ ಏಜೆಂಟ್‌ಗಳು ಕಾರಣವೆಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಎಕ್ಸ್‌ಟ್ರಾಕ್ರೊಮೋಸೋಮಲ್ ಡಿಎನ್‌ಎ ಅಥವಾ ಇಸಿಡಿಎನ್‌ಎ ಎಂದು ಕರೆಯಲ್ಪಡುವ ಆನುವಂಶಿಕ ವಸ್ತುಗಳ ಈ ಬಿಟ್‌ಗಳ ಆವಿಷ್ಕಾರವು ಇಂದು ಜನರ ಮೇಲೆ ಪರಿಣಾಮ ಬೀರುವ ಕೆಲವು ಆಕ್ರಮಣಕಾರಿ ಗೆಡ್ಡೆಗಳ … Continued

ದೆಹಲಿ ಮದ್ಯ ನೀತಿ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಸಮಯ ಕೋರಿದ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಮುಂದೂಡುವಂತೆ ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹಣಕಾಸು ಖಾತೆ ಹೊಂದಿರುವ ಸಿಸೋಡಿಯಾ ಅವರು ದೆಹಲಿ ಬಜೆಟ್ ಸಿದ್ಧಪಡಿಸುತ್ತಿರುವುದರಿಂದ ವಿಚಾರಣೆ ದಿನಾಂಕವನ್ನು ಮುಂದೂಡುವಂತೆ ಕೋರಿದ್ದಾರೆ. ಅಬಕಾರಿ … Continued

ಪಾಕಿಸ್ತಾನವು ಈಗಾಗಲೇ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ಸಚಿವ…!

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಒಂದು ಲೀಟರ್ ಹಾಲಿನ ಬೆಲೆ 250 ರೂ.ಗಳಿಗೆ ಏರಿದೆ ಮತ್ತು ಇಸ್ಲಾಮಾಬಾದ್‌ನ ಪ್ರಮುಖ ಆಹಾರವಾದ ಕೋಳಿ ಪ್ರತಿ ಕೆಜಿಗೆ ರೂ 780 ಕ್ಕೆ ಏರಿದೆ. ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನ ದಿವಾಳಿಯಾಗಿದೆ ಎಂದು ಪಾಕ್‌ ರಕ್ಷಣಾ ಸಚಿವರು ಹೇಳಿದ್ದಾರೆ. ಸಿಯಾಲ್‌ಕೋಟ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು ಮತ್ತು … Continued