ರಾಯ್‌ಪುರ ಧರಮ್ ಸಂಸದ್‌ನಲ್ಲಿ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಕೆ: ಕಾಳಿಚರಣ್ ಮಹಾರಾಜ್ ವಿರುದ್ಧ ಪ್ರಕರಣ ದಾಖಲು

ರಾಯ್ಪುರ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಮತ್ತು ರಾಷ್ಟ್ರಪಿತನನ್ನು ಕೊಂದ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ರಾಯ್ಪುರದ ಪೊಲೀಸರು ಕಾಳಿಚರಣ್ ಮಹಾರಾಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ರಾಯ್‌ಪುರದ ಮಾಜಿ ಮೇಯರ್ ಪ್ರಮೋದ್ ದುಬೆ ಅವರ ದೂರಿನ ಮೇರೆಗೆ ಕಾಳಿಚರಣ್ ಮಹಾರಾಜ್ ವಿರುದ್ಧ ರಾಯ್‌ಪುರದ ತಿಕ್ರಪಾರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಳಿಚರಣ್ ಮಹಾರಾಜ್‌ ವಿರುದ್ಧ … Continued

ಓಮಿಕ್ರಾನ್‌ಗಿಂತ ಚುನಾವಣೆಗೆ ಆದ್ಯತೆ’: ರಾತ್ರಿ ಕರ್ಫ್ಯೂ ವಿಧಿಸಿ ಹಗಲಿಗೆ ಸಮಾವೇಶ, ಸಿಎಂ ಯೋಗಿ ತರಾಟೆಗೆ ತೆಗೆದುಕೊಂಡ ವರುಣ್‌ ಗಾಂಧಿ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ವರುಣ್ ಗಾಂಧಿ, ಲಕ್ನೋದಲ್ಲಿ ಹಗಲಿನಲ್ಲಿ ಕಿಕ್ಕಿರಿದ ಸಮಾವೇಶ ನಡೆಸಿ ರಾತ್ರಿ ಕರ್ಫ್ಯೂ ಹೇರಿದ ಉತ್ತರ ಪ್ರದೇಶದ ಸರ್ಕಾರದ ನಡೆ ಬಗ್ಗೆ ಪ್ರಶ್ನಿಸಿದ್ದಾರೆ. ಓಮಿಕ್ರಾನ್‌ನ ಉದಯದ ಮಧ್ಯೆ ಇಂತಹ ಸಮಾವೇಶಗಳನ್ನು ನಡೆಸುವ ಮೂಲಕ ಉತ್ತರ ಪ್ರದೇಶ ಸರ್ಕಾರವು ಓಮಿಕ್ರಾನ್ ಅನ್ನು … Continued

ವಿವಾದದ ಬಳಿಕ ತಮ್ಮ ಮತಾಂತರ ಹೇಳಿಕೆ ಬೇಷರತ್‌ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಉಡುಪಿ: ಹಿಂದೂ ಧರ್ಮದಿಂದ ಮತಾಂತರಗೊಂಡು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದಿದ್ದಾರೆ. ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರ್ಪಣಮ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನು … Continued

ಡ್ರಗ್ಸ್ ದಂಧೆಯಿಂದ ತನ್ನ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಪತ್ರ ಬರೆದ ಕ್ರೈಸ್ತ ಮಹಿಳೆ: ಆರೋಪಿ ಬಂಧನ

ಮಂಗಳೂರು: ಮಂಗಳೂರು: ಡ್ರಗ್ಸ್ ದಂಧೆಗೆ ಯುವತಿಯನ್ನು ದೂಡಿದ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನೇ ಬಂಧಿತ ಆರೋಪಿ. ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ತಮ್ಮ ಮಗಳಿಗೆ ಆಗುತ್ತಿರುವ ಸಮಸ್ಯೆ ಹಾಗೂ ತಮ್ಮ ಮಗಳಿಗೆ ಮಾದಕ ದ್ರವ್ಯ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂಪರಿಷತ್ … Continued

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಜೀರ್

ಮಂಗಳೂರು: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು, ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಹೈದರಾಬಾದ್‍ನಿಂದ ಮಂಗಳೂರಿಗೆ ಕುಟುಂಬ ಸಮೇತರಾಗಿ ವಿಮಾನದಲ್ಲಿ ಬಂದ ನ್ಯಾಯಮೂರ್ತಿಗಳು ಕಾರಿನಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಆಶ್ಲೇಷ ಬಲಿ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಿದರು. ಆಶ್ಲೇಷ ಪೂಜೆ … Continued

ಸಿಡಿಲು ಬಡಿದ ವ್ಯಕ್ತಿ ಪವಾಡ ಸದೃಶವಾಗಿ ಬದುಕುಳಿದ ದೃಶ್ಯ ವಿಡಿಯೊದಲ್ಲಿ ಸೆರೆ…

ವ್ಯಕ್ತಿಯೊಬ್ಬನಿಗೆ ಸಿಡಿಲು ಬಡಿದ ಆಘಾತಕಾರಿ ಕ್ಷಣ ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದಿದ್ದು, ವ್ಯಕ್ತಿ ಬದುಕುಳಿದಿದ್ದಾನೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಜಕಾರ್ತಾದ ಉತ್ತರದಲ್ಲಿ ಭಾರೀ ಯಂತ್ರೋಪಕರಣಗಳೊಂದಿಗೆ ವ್ಯವಹರಿಸುವ ಕಂಪನಿಯೊಂದರಲ್ಲಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 35 ವರ್ಷದ ವ್ಯಕ್ತಿ ಕರ್ತವ್ಯದಲ್ಲಿದ್ದಾಗ ಆತನಿಗೆ ಸಿಡಿಲು ಬಡಿದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಮಳೆಯ ಸಮಯದಲ್ಲಿ … Continued

ಚಂಡೀಗಢ ಮುನ್ಸಿಪಲ್ ಚುನಾವಣೆ: ಮೊದಲ ಪ್ರಯತ್ನದಲ್ಲೇ 14 ಸೀಟು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆಮ್‌ ಆದ್ಮಿ ಪಕ್ಷ

ಚಂಡೀಗಢ: ಪಂಜಾಬ್‌ ವಿಧಾನಸಭೆ ಚುನಾವಣೆಗೂ ಮುನ್ನ ಆಮ್‌ ಆದ್ಮಿ ಪಾರ್ಟಿ ಬಹುದೊಡ್ಡ ಗೆಲುವು ಸಾಧಿಸಿದೆ. ಆಮ್‌ ಆದ್ಮಿ ಪಕ್ಷವು ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದು, 14 ಸ್ಥಾನಗಳಲ್ಲಿ ಗೆಲ್ಲುವ ಮೂಲಕ 35 ವಾರ್ಡುಗಳ ಫಲಿತಾಂಶದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 1996 ರಿಂದ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ … Continued

ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು … Continued

ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದ ಸಿಎಂ ಬೊಮ್ಮಾಯಿ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಲಿದ್ದಾರೆ ಹಾಗೂ ಸಂಕ್ರಾಂತಿ ನಂತರ ರಾಜ್ಯದಲ್ಲಿ ಅವರ ಬದಲಿಗೆ ಮತ್ತೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ಬೊಮ್ಮಾಯಿ ನಾಟಿ ವೈದ್ಯರಿಂದ ಮೊಣಕಾಲಿಗೆ ಚಿಕಿತ್ಸೆ ಪಡೆಯುತ್ತಿರುವ … Continued

15-18 ವರ್ಷ ವಯಸ್ಸಿನವರು ಜನವರಿ 1ರಿಂದ ಕೊ-ವಿನ್ (CoWIN )ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು..ಮಾಹಿತಿ ಇಲ್ಲಿದೆ..

ನವದೆಹಲಿ: ಸರ್ಕಾರವು 15-18 ವರ್ಷ ವಯಸ್ಸಿನವರಿಗೆ ಜನವರಿ 3 ರಿಂದ ಕೋವಿಡ್‌ ಲಸಿಕೆಗಳನ್ನು ನೀಡಲು ಸಜ್ಜಾಗಿದ್ದು, ಜನವರಿ 1 ರಿಂದ CoWIN ಆ್ಯಪ್‌ನಲ್ಲಿ 15-18 ವರ್ಷ ವಯಸ್ಸಿನವರಿಗೆ ನೋಂದಾವಣೆ ಸಾಧ್ಯವಾಗಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ CoWIN ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ ಸೋಮವಾರ ಈ ಬಗ್ಗೆ ತಿಳಿಸಿದ್ದು, CoWIN ಪೋರ್ಟಲ್‌ನಲ್ಲಿ ನೋಂದಾಯಿಸಲು, ಮಕ್ಕಳು 10ನೇ ತರಗತಿಯ ಗುರುತಿನ ಚೀಟಿಯನ್ನು … Continued