ಡ್ರಾಯಿಂಗ್ ಗ್ರೇಡ್’ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಆನ್‌ಲೈನ್‌ ಅರ್ಜಿ ಆಹ್ವಾನ

ಬೆಂಗಳೂರು : 2022ರ ಜನವರಿ ತಿಂಗಳಿನಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಇತರೆ ಪರೀಕ್ಷೆಗಳ ವಿಭಾಗದಿಂದ ಜನವರಿ ತಿಂಗಳಿನಲ್ಲಿ ನಡೆಯುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ … Continued

ಅದ್ಧೂರಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬ್ರೇಕ್ : ಹೊಸ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದ್ಧೂರಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದೆ. ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಬಂಧಿಸಿದಂತೆ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಅದ್ಧೂರಿ ನೂತನ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ಸಾರ್ವಜನಿಕ … Continued

ಓಮಿಕ್ರಾನ್ ರೂಪಾಂತರವು ಮೂರು ಪಟ್ಟು ಹೆಚ್ಚು ಹರಡುತ್ತದೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕಿಂತ ಓಮಿಕ್ರಾನ್ ರೂಪಾಂತರ ಮೂರು ಪಟ್ಟು ಸಾಂಕ್ರಾಮಿಕವಾಗಿದೆ ಮತ್ತು ಅದನ್ನು ನಿಯಂತ್ರಿಸಲು ವಾರ್ ರೂಮ್‌ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪತ್ರ ಬರೆದು ತಿಳಿಸಿದೆ. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹಿ ಮಾಡಿರುವ ಪತ್ರದಲ್ಲಿ “ ಹೆಚ್ಚಿನ ದೂರದೃಷ್ಟಿ, ದತ್ತಾಂಶ ವಿಶ್ಲೇಷಣೆ ಮತ್ತು ಕ್ರಿಯಾತ್ಮಕ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕಳೆದ … Continued

ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು ಅದಕ್ಕೇ ಆದ್ಯತೆ ನೀಡಬೇಕಿದೆ: ಗೋವಿಂದಾಚಾರ್ಯ

ಯಾದಗಿರಿ: ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು. ಲಕ್ಷೀ ನಗರದ ಶ್ರೀ ಲಕ್ಷೀ ಮಾರುತಿ ದೇವಸ್ಥಾನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ … Continued

ದಿ. ಆರ್.ಎಸ್ ಹುಕ್ಕೇರಿಕರ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಧಾರವಾಡ: ಕಾಲಕಾಲಕ್ಕೆ ಹಲವಾರು ಪ್ರಾತಸ್ಮರಣಿಯರು ಜನ್ಮತಾಳುತ್ತಾರೆ. ಅವರ ಆಗಮನದಿಂದ ದೇಶ ರಾಜ್ಯ ಸುಭಿಕ್ಷೆ ಕಾಣುತ್ತದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಜನಿಸಿದ ರಾಮರಾವ್ ಹುಕ್ಕೇರಿಕರವರು ಅಂತಹ ಮಹನೀಯರಲ್ಲಿ ಒಬ್ಬರು. ಅವರು ಅಂದು ಸ್ಥಾಪಿಸಿದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಇಂದು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದಿಂದ ಪ್ರತಿವರ್ಷ ಸಾವಿರಾರು ಮಕ್ಕಳ ವಿದ್ಯಾರ್ಜನೆಗೆ ದಾರಿಯಾಗಿದೆ ಎಂದು ಜೆ.ಎಸ್.ಎಸ್ ಸಂಸ್ಥೆ … Continued

ಸಿದ್ದಾಪುರ: ಶೇಲೂರಿನಲ್ಲಿ ಕರಡಿ ದಾಳಿಯಿಂದ ವ್ಯಕ್ತಿಗೆ ಗಾಯ

ಸಿದ್ದಾಪುರ; ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಶೇಲೂರಿನಲ್ಲಿ ಮಂಗಳವಾರ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಶೇಲೂರು ಗ್ರಾಮದ ದತ್ತಾತ್ರೇಯ ನಾಗಾ ನಾಯ್ಕ(೫೫) ಕರಡಿ ದಾಳಿಗೆ ಒಳಗಾದವರಾಗಿದ್ದು … Continued

ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ- ರಾಜ್ಯದಿಂದ 1200 ಕೋಟಿ ರೂ. ಹೆಚ್ಚುವರಿ ಪರಿಹಾರ : ಸಿಎಂ ಬೊಮ್ಮಾಯಿ

ಸುವರ್ಣಸೌಧ(ಬೆಳಗಾವಿ): ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದರು. ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಒಟ್ಟು ೧೦ ಲಕ್ಷಕ್ಕೂ ಹೆಚ್ಚಿನ ರೈತರಿಗೆ ೯೬೯ ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್. … Continued

ಮಹಿಳೆಯರ ಮದುವೆ ವಯಸ್ಸು 21ಕ್ಕೆ ಹೆಚ್ಚಿಸುವ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಏರಿಸುವ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆಯನ್ನು ಕೇಂದ್ರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಹಾಲಿ ದೇಶದಲ್ಲಿ ಮದುವೆಯ ಕನಿಷ್ಠ ವಯಸ್ಸು ಪುರುಷರಿಗೆ 21 ಮತ್ತು ಮಹಿಳೆಯರಿಗೆ 18 ಆಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಕಾಂಗ್ರೆಸ್‌ನ … Continued

ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ … Continued

ಭಾರತ-ವಿರೋಧಿ ಪ್ರಚಾರಕ್ಕಾಗಿ 20 ಯೂ ಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಸರ್ಕಾರ

ನವದೆಹಲಿ: ಭಾರತ ವಿರೋಧಿ ಪ್ರಚಾರಕ್ಕಾಗಿ 20 ಯೂ ಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಂಗಳವಾರ ತಿಳಿಸಿದೆ. ಗುಪ್ತಚರ ಸಂಸ್ಥೆಗಳು ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಡುವೆ ನಿಕಟವಾಗಿ ಸಂಘಟಿತ ಪ್ರಯತ್ನದಲ್ಲಿ, ಸಚಿವಾಲಯವು ಸೋಮವಾರ ಯೂ ಟ್ಯೂಬ್‌ನಲ್ಲಿ 20 ಚಾನೆಲ್‌ಗಳು ಮತ್ತು ಅಂತರ್ಜಾಲದಲ್ಲಿ ಭಾರತ ವಿರೋಧಿ ಪ್ರಚಾರ … Continued