ಕೋವಿಡ್ ಮಾನದಂಡ ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ ಜೋಡೋ ಯಾತ್ರೆ ಮುಂದೂಡಿ: ರಾಹುಲ್ ಗಾಂಧಿಗೆ ಆರೋಗ್ಯ ಸಚಿವ ಪತ್ರ

ನವದೆಹಲಿ: ಪಕ್ಷದ ಭಾರತ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾನದಂಡಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ಚೀನಾ ಮತ್ತು ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ … Continued

ದುಬೈನಲ್ಲಿ ಮಾಡೆಲ್‌ ಉರ್ಫಿ ಜಾವೇದ್ ವಶಕ್ಕೆ ಪಡೆದ ಪೊಲೀಸರು : ವರದಿ

ತನ್ನ ವಿಲಕ್ಷಣವಾದ ಫ್ಯಾಶನ್ ಸೆನ್ಸ್‌ಗಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡ್‌ಗಳಲ್ಲಿ ಇರುವ ಮೂಲಕ ಪದೇಪದೇ ವಿವಾದಕ್ಕೀಡಾಗುತ್ತಿದ್ದ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ಉರ್ಫಿ ಜಾವೇದ್ ಈಗ ಯುಎಇಯಲ್ಲಿ ಬಂಧಿತಳಾಗಿದ್ದಾಳೆ ಎಂಬ ವರದಿಗಳ ನಂತರ ಮತ್ತೆ ಸುದ್ದಿಯಲ್ಲಿದ್ದಾಳೆ. ಅವಳನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅರೆಬರೆ ಉಡುಪಿನಲ್ಲಿ … Continued

ಅಫ್ಘಾನಿಸ್ತಾನದಲ್ಲಿ ಹುಡುಗಿಯರಿಗೆ ವಿಶ್ವವಿದ್ಯಾಲಯಗಳ ಶಿಕ್ಷಣ ನಿಷೇಧಿಸಿದ ತಾಲಿಬಾನ್ ಆಡಳಿತ

ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತಗಾರರು ಮಂಗಳವಾರ ರಾಷ್ಟ್ರಾದ್ಯಂತ ಮಹಿಳೆಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣವನ್ನು ನಿಷೇಧಿಸಿದ್ದಾರೆ. ಮಹಿಳೆಯರಿಗೆ ಶಿಕ್ಷಣ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಹತ್ತಿಕ್ಕುವುದನ್ನು ಮುಂದುವರೆಸಿದ್ದಾರೆ. ಕಳೆದ ವರ್ಷ ಅಧಿಕಾರವನ್ನು ವಶಪಡಿಸಿಕೊಂಡಾಗ ಮೃದುವಾದ ಆಡಳಿತ ನೀಡುವ ಭರವಸೆ ನೀಡಿದ್ದರೂ, ತಾಲಿಬಾನ್ ಅಂತಾರಾಷ್ಟ್ರೀಯ ಆಕ್ರೋಶವನ್ನು ನಿರ್ಲಕ್ಷಿಸಿ ಮಹಿಳೆಯರ ಮೇಲೆ ನಿರ್ಬಂಧಗಳನ್ನು ಮುಂದುವರಿಸಿದ್ದಾರೆ. ಮುಂದಿನ ಸೂಚನೆ ಬರುವವರೆಗೆ ಮಹಿಳಾ ಶಿಕ್ಷಣವನ್ನು ಅಮಾನತುಗೊಳಿಸುವ … Continued

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ಸಹಚರ ಜಾಮೀನಿನ ಮೇಲೆ ಬಿಡುಗಡೆ

ಮೈಸೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದಂತಚೋರ ವೀರಪ್ಪನ್‌ನ ಸಹಚರ ಜ್ಞಾನಪ್ರಕಾಶ ಮಂಗಳವಾರ ಬೆಳಗ್ಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 68ರ ಹರೆಯದ ಜ್ಞಾನಪ್ರಕಾಶನನ್ನು ಇಬ್ಬರ ಶ್ಯೂರಿಟಿ ಹಾಗೂ 5 ಲಕ್ಷ ರೂ. ಬಾಂಡ್ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಶ್ವಾಸಕೋಶದ ಕ್ಯಾನ್ಸರ್ (Lung Cancer) … Continued

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ಒಮ್ಮತದ ನಿರ್ಧಾರ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ (ಡಿಸೆಂಬರ್‌ ೨೧) ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕ ಗಡಿ ವಿಚಾರವಾಗಿ ನಿಲುವಳಿ ಸೂಚನೆ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಅವರ ನಡೆ ವಿರುದ್ಧ ಉಭಯ ಸದನ ಮೂಲಕ ಖಂಡನಾ ನಿರ್ಣಯ ಮಂಡಿಸುವ ಬಗ್ಗೆ ಮುಖ್ಯಮಂತ್ರಿ … Continued

ಕೆಪಿಟಿಸಿಎಲ್ ಎಇ, ಜೆಇ ನೇಮಕ ಪರೀಕ್ಷೆ ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ-ಸಚಿವ ಸುನೀಲಕುಮಾರ

ಬೆಂಗಳೂರು: ಕೆಪಿಟಿಸಿಎಲ್ (KPTCL) ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲಕುಮಾರ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಇಂದು, ಮಂಗಳವಾರ (ಡಿಸೆಂಬರ್‌ 20) ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ ಅವರು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. … Continued

33 ಪಾಕಿಸ್ತಾನಿ ತಾಲಿಬಾನ್ ಉಗ್ರರನ್ನು ಕೊಂದು ಹಾಕಿದ ಪಾಕ್‌ ಸೇನೆ : ಒತ್ತೆಯಾಳು ಬಿಕ್ಕಟ್ಟು ಮುಕ್ತಾಯ

40 ಗಂಟೆಗಳ ಕಾಲ ನಡೆದ ಘರ್ಷಣೆಯ ನಂತರ, ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳು ಮಂಗಳವಾರ ಪೊಲೀಸರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಎಲ್ಲಾ 33 ಭಯೋತ್ಪಾದಕರನ್ನು ಕೊಂದಿವೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ (AFP) ವರದಿ ಮಾಡಿದೆ. ಈ ಘರಷ್ಣೆಯಲ್ಲಿ ಪಾಕಿಸ್ತಾನಿ ಸೇನೆಯ ವಿಶೇಷ ಪಡೆಗಳ ಇಬ್ಬರು ಸೈನಿಕರೂ ಹತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಸ್ಥಳೀಯ ತಾಲಿಬಾನ್ ಉಗ್ರರು … Continued

ಚೀನಾ, ಅಮೆರಿಕಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ : ಭಾರತದಲ್ಲೂ ರೂಪಾಂತರಗಳ ಟ್ರ್ಯಾಕಿಂಗ್ ಹೆಚ್ಚಿಸಲು ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

ನವದೆಹಲಿ : ಚೀನಾ ಮತ್ತು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಆದ್ಯತೆಯ ಆಧಾರದ ಮೇಲೆ ಸಕಾರಾತ್ಮಕ ಪ್ರಕರಣಗಳ ಮಾದರಿಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ. ಚೀನಾ, ಜಪಾನ್, ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ … Continued

ರಾಜ್ಯದಲ್ಲಿ ಈಗಿನ ಮೀಸಲಾತಿ ವ್ಯವಸ್ಥೆ ಸಂಪೂರ್ಣ ರದ್ದುಪಡಿಸಲಿ: ಕೋಡಿಹಳ್ಳಿ ಚಂದ್ರಶೇಖರ

ಶಿರಸಿ: ದೊಡ್ಡ ಹಾಗೂ ಬಲಿಷ್ಠ ಸಮುದಾಯಗಳು ತಮ್ಮ ಸಮುದಾಯದ ಜನಸಂಖ್ಯೆ ಮುಂದಿಟ್ಟು ಸರ್ಕಾರದ ಮೇಲೆ ಪ್ರಭಾವ ಬೀರಿ ಮೀಸಲಾತಿ ಗಿಟ್ಟಿಸಿಕೊಳ್ಳುತ್ತಿದ್ದರೆ ಸಣ್ಣ ಸಣ್ಣ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಜಾತಿ ಸಂಘರ್ಷಕ್ಕೆ ಕಾರಣವಾಗುವ ಮೀಸಲಾತಿ ತೆಗೆದುಹಾಕಿ ಆರ್ಥಿಕ ಮಾನದಂಡದ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡಬೇಕು ಎಂದು ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ … Continued

ಡಿಸೆಂಬರ್‌ 29ರಂದು ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ಮುಷ್ಕರ, ಆಟೋ ಸಂಚಾರ ಬಂದ್‌

ಬೆಂಗಳೂರು: ಡಿಸೆಂಬರ್‌ 29ರಂದು ಆಟೋ ಚಾಲಕರು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದು, ಹೀಗಾಗಿ ಅಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಕ್ರಾಂತಿ … Continued