ದೆಹಲಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂವರ ಬಂಧನ, ಫ್ಲಿಪ್‌ಕಾರ್ಟ್‌ನಲ್ಲಿ ಆರ್ಡರ್‌ ಮಾಡಿ ಆ್ಯಸಿಡ್ ಖರೀದಿಸಿದ್ದ ಖದೀಮರು…!

ನವದೆಹಲಿ: ದೆಹಲಿಯಲ್ಲಿ 17 ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದು, ಬಂಧಿತ ಮೂವರು ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಸೂಕ್ಷ್ಮವಾಗಿ ದಾಳಿಯನ್ನು ಯೋಜಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಆ್ಯಸಿಡ್ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ … Continued

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 310 ಪ್ರಾಂಶುಪಾಲರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಪ್ರಥಮದ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವಂತ 310 ಪ್ರಾಂಶುಪಾಲರ ಗ್ರೇಡ್-1 ಹುದ್ದೆಗಳಿಗೆ ನೇರ ನೇಮಕಾತಿ (Direct Recruitment) ಮೂಲಕ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ … Continued

ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ನಡೆಸಲಾಗಿದ್ದ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ತಿಳಿಸಿದ್ದಾರೆ. ನವೆಂಬರ್‌ 6 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಕರ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸುಪ್ರೀಂಕೋರ್ಟ್ ತೀರ್ಪಿನ ವರೆಗೆ ಕಾಯಲು ನಿರ್ಧಾರ- ಸಿಎಂಗಳಾದ ಬೊಮ್ಮಾಯಿ-ಶಿಂಧೆ ಭೇಟಿ ನಂತರ ಅಮಿತ್ ಶಾ ಹೇಳಿಕೆ

ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಉಭಯ ರಾಜ್ಯಗಳ ನಡುವಿನ ಗಡಿ ಸಮಸ್ಯೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಾಲ್ಗೊಂಡಿದ್ದರು.. ಸಭೆಯ … Continued

ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲಾಗಿದ್ದು ಬಿಜೆಪಿ ಸರ್ಕಾರವಲ್ಲವೇ: ಸಿಎಂ ಬೊಮ್ಮಾಯಿಗೆ ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕಳೆದ ನಾಲ್ಕು ದಶಕಗಳಿಂದ ಉತ್ತರ ಕರ್ನಾಟಕದ ರೈತರು, ಜನಸಾಮಾನ್ಯರು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿಭಟಿಸುತ್ತಿದ್ದರೆ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಯಾರನ್ನೋ ಖುಷಿಪಡಿಸಲು, ನೈಜ ಪರಿಸ್ಥಿತಿ ಮರೆಮಾಚಿ ಮುಖ್ಯಮಂತ್ರಿಗಳು ಮಹದಾಯಿ ವಿಷಯ ತಿರುಚಿ ಅದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಮಹದಾಯಿ ಕುರಿತು ಮಾತನಾಡಲು ಕಾಂಗ್ರೆಸ್‌ಗೆ ನೈತಿಕ … Continued

ಯಲ್ಲಾಪುರ: 40ಕ್ಕೂ ಹೆಚ್ಚು ಟರ್ಕಿ ಕೋಳಿಗಳ ಸಾವು, ವಿಷಪ್ರಾಶನದ ಶಂಕೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೋಟೆಮನೆಯಲ್ಲಿ ಮಹಿಳೆಯೊಬ್ಬಳ 40ಕ್ಕೂ ಹೆಚ್ಚು ಕೋಳಿಗಳು ಸಾವಿಗೀಡಾದ ವರದಿಯಾಗಿದ್ದು, ವಿಷ ಪ್ರಾಷನದ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದರಿಂದ ಉಮ್ಮಚಗಿಯ ಕಲಾವತಿ ಸೋಮಿನ್ ಸಿದ್ದಿ ಎಂಬ ಮಹಿಳೆಗೆ ಸೇರಿದ ಸುಮಾರು 40ಕ್ಕೂ ಹೆಚ್ಚು ಟರ್ಕಿ ಕೋಳಿಗಳು ಎರಡು ಹಂತಗಳಲ್ಲಿ ಸಾವಿಗೀಡಾಗಿದೆ. … Continued

ಹಿಜಾಬ್ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಇರಾನ್ ಫುಟ್ಬಾಲ್ ಆಟಗಾರನಿಗೆ ಮರಣದಂಡನೆ ಶಿಕ್ಷೆಯ ಭೀತಿ

ಟೆಹ್ರಾನ್‌: ಇರಾನ್‌ನಲ್ಲಿ ರಾಷ್ಟ್ರವ್ಯಾಪಿ ನಡೆದ ಹಿಜಾಬ್‌ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಇರಾನ್ ವೃತ್ತಿಪರ ಫುಟ್ಬಾಲ್‌ ಆಟಗಾರ ಮರಣದಂಡನೆ ಭೀತಿ  ಎದುರಿಸುತ್ತಿದ್ದಾರೆ. ನವೆಂಬರ್‌ನಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ 26 ವರ್ಷದ ಅಮೀರ್ ನಸ್ರ್-ಅಜಾದಾನಿ ಅವರನ್ನು ಬಂಧಿಸಲಾಯಿತು ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕಮಾಂಡರ್‌ನ ಸಾವಿಗೆ ಸಂಬಂಧಿಸಿದಂತೆ ಅವರ ಮೇಲೆ ಆರೋಪ ಹೊರಿಸಲಾಯಿತು ಎಂದು ನ್ಯೂಸ್‌ವೀಕ್ ವರದಿ … Continued

ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದ್ದರು. ನಂತರ ಕರ್ನಾಟಕಕ್ಕೆ ಬರುವ ಕಾಲುವೆಗೆ ಗೋಡೆ ಕಟ್ಟಿರುವುದೇ ಕಾಂಗ್ರೆಸ್ ಸಾಧನೆ. ಎಂದು ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ … Continued

ಭಾರತ-ಚೀನಾ ತವಾಂಗ್ ಎಲ್‌ಎಸಿ ಉದ್ವಿಗ್ನತೆ ನಡುವೆ ಭಾರತೀಯ ಸೈನಿಕರು ಚೀನೀ ಸೈನಿಕರನ್ನು ಹಿಮ್ಮೆಟ್ಟಿಸುವ 2021ರ ವೀಡಿಯೊ ವೈರಲ್

ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಡಿಸೆಂಬರ್ 9 ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆಯನ್ನು ಸರ್ಕಾರ ಖಚಿತಪಡಿಸಿದ ಒಂದು ದಿನದ ನಂತರ, ಭಾರತ ಮತ್ತು ಚೀನಾ ಸೈನಿಕರ ಹಿಂದಿನ ಘರ್ಷಣೆಯ ವೀಡಿಯೊ ಹೊರಬಿದ್ದಿದೆ. ಅರುಣಾಚಲ ಪ್ರದೇಶದ ತವಾಂಗ್‌ನ ಅದೇ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಘರ್ಷಣೆಯನ್ನು ಈ ವೀಡಿಯೊ ತೋರಿಸುತ್ತದೆ. ಈ ವೀಡಿಯೊ … Continued

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದೇನೆ: ವೈಎಸ್‌ವಿ ದತ್ತ

ಬೆಂಗಳೂರು:: ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು. ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿದಅವರು, ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷಗಳಷ್ಟು ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20ಕ್ಕೂ ಹೆಚ್ಚು ವರ್ಷಗಳಿಂದ ಇದ್ದೇನೆ. ನಾನು ದೇವೇಗೌಡರು … Continued