ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ : ಎಂಟು ದಶಕಗಳ ಹಾಡಿನ ಪಯಣ ಅಂತ್ಯ

ನವದೆಹಲಿ: ಭಾರತೀಯ ಚಿತ್ರರಂಗದ ದಂತಕಥೆ, ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಂಸ್ಲೆ (92) ಅವರು ಅಂಗಾಂಗ ವೈಫಲ್ಯದಿಂದಾಗಿ ಭಾನುವಾರ (ಏಪ್ರಿಲ್ 12) ನಿಧನರಾದರು. ಈ ವಿಷಯವನ್ನು ಅವರ ಕುಟುಂಬ ಸದಸ್ಯರು ಮತ್ತು ವೈದ್ಯರು ಖಚಿತಪಡಿಸಿದ್ದಾರೆ. ಆಶಾ ಅವರ ಪುತ್ರ ಆನಂದ ಭೋಂಸ್ಲೆ ಈ ಬಗ್ಗೆ ಮಾಹಿತಿ ನೀಡಿದ್ದು, “ನನ್ನ ತಾಯಿ ಇಂದು ನಮ್ಮನ್ನು ಅಗಲಿದ್ದಾರೆ. ಸಾರ್ವಜನಿಕರು … Continued

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ : ಇಸ್ಲಾಮಾಬಾದ್ ಶೃಂಗಸಭೆಯಲ್ಲಿ ಮೂಡದ ಒಮ್ಮತ

ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಪ್ರಯತ್ನಗಳು ವಿಫಲವಾಗಿವೆ. ಅಮೆರಿಕ ಹಾಗೂ ಇರಾನ್‌ ನಡುವಿನ 21 ಗಂಟೆಗಳ ಸುದೀರ್ಘ ಚರ್ಚೆಯು ಯಾವುದೇ ತಾರ್ಕಿಕ ಅಂತ್ಯ ಕಾಣದೆ ಸ್ಥಗಿತಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗವು ಇರಾನ್ ಪ್ರತಿನಿಧಿಗಳೊಂದಿಗೆ ಸತತ 21 ಗಂಟೆಗಳ ಕಾಲ ಗಹನವಾದ ಚರ್ಚೆ ನಡೆಸಿತು. ಆದರೆ, ಪ್ರಮುಖವಾಗಿ … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

ಇರಾನ್ ಯುದ್ಧದ ನಡುವೆಯೇ ಅಮೆರಿಕ ಸಾಹಸ : ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಎರಡು ಅಮೆರಿಕ ಯುದ್ಧನೌಕೆಗಳು…!

ವಾಷಿಂಗ್ಟನ್/ತೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವೆ ಪಾಕಿಸ್ತಾನದ ಇಸ್ಲಾಮಾಬಾದಿನಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಮೆರಿಕದ ಎರಡು ಬೃಹತ್ ಯುದ್ಧನೌಕೆಗಳು ಶನಿವಾರ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಪ್ರವೇಶಿಸಿವೆ ಎಂದು ವರದಿಗಳು ತಿಳಿಸಿವೆ. ಯುದ್ಧ ಆರಂಭವಾದ ನಂತರ ಈ ಆಯಕಟ್ಟಿನ ಜಲಮಾರ್ಗದಲ್ಲಿ ಅಮೆರಿಕದ ಮೊದಲ ಸಂಚಾರ ಇದಾಗಿದ್ದು, ಇದು ಜಾಗತಿಕವಾಗಿ ತಲ್ಲಣ ಮೂಡಿಸಿದೆ. ಈ … Continued

ಅಪರೂಪದ ದೃಶ್ಯ : ರಾಜಕೀಯ ವೈರಿಗಳಾದ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಧ್ಯೆ ಸೌಹಾರ್ದಯುತ ಮಾತುಕತೆ ; ವಿಡಿಯೋ ವೈರಲ್!

ನವದೆಹಲಿ: ಸಂಸತ್ತಿನಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡುವೆ ನಡೆದ ಸೌಹಾರ್ದಯುತ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಇವರಿಬ್ಬರ ನಡುವಿನ ಸಂವಾದ ಕಡಿಮೆ ಅವಧಿಯದ್ದಾಗಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಗಾಗ್ಗೆ ನಡೆಯುವ ವಾಗ್ಯುದ್ಧಗಳ ಮಧ್ಯೆ ಇದು ಸಾಕಷ್ಟು … Continued

ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ … Continued

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

ಮುಂಬೈ : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಸದ್ಯ ಅವರು ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಗಳ (EMS) ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅವರ ಕುಟುಂಬ ಸದಸ್ಯರಿಂದಾಗಲಿ ಅಥವಾ ಆಸ್ಪತ್ರೆಯ … Continued

ಕಾಂಗ್ರೆಸ್‌ನಲ್ಲಿ ಬೆಳವಣಿಗೆ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬೆಳವಣಿಗೆ ನಡೆದಿದ್ದು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ (MLC Abdul Jabbar) ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದಾವಣೆಗೆರೆ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಹಾಗೂ ಆಂತರಿಕ ಬೆಳವಣಿಗೆಗಳ ಕುರಿತಾದ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued