ನಾನು ಬಿಜೆಪಿ ಸೇರುವುದಿಲ್ಲ, ಆದರೆ ಕಾಂಗ್ರೆಸ್ಸಿನಲ್ಲಿಯೂ ಉಳಿಯುವುದಿಲ್ಲ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌

ನವದೆಹಲಿ: ನಾನು ಬಿಜೆಪಿಗೆ ಸೇರುತ್ತಿಲ್ಲ, ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೇನೆ ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಹೇಳಿದ್ದಾರೆ. ಚುನಾವಣೆಗೆ ನಾಲ್ಕು ತಿಂಗಳಿರುವಾಗ, ಪಂಜಾಬ್ ಮುಖ್ಯಮಂತ್ರಿಯಿಂದ ರಾಜೀನಾಮೆ ನೀಡಬೇಕಾಗಿ ಬಂದ ನಂತರದ ಪರಿಸ್ಥಿತಿ ಬಗ್ಗೆ ಅವರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ ಆದರೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು … Continued

ಡೆತ್‌ನೋಟ್‍ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಿನೆಮಾ-ಕಿರುತೆರೆ ನಟಿ

ಬೆಂಗಳೂರು: ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ಇಂದು (ಗುರುವಾರ) ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಪಿಎಗೆ ತಿಂಡಿ ತರಲು … Continued

ನವಜೋತ್ ಸಿಧು -ಪಂಜಾಬ್ ಸಿಎಂ ಮಧ್ಯಾಹ್ನ 3 ಗಂಟೆಗೆ ಭೇಟಿ: ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಧು

ನವದೆಹಲಿ: ಪಂಜಾಬ್‌ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯನ್ನು ಭೇಟಿಯಾಗಲು ಒಪ್ಪಿಕೊಂಡಿರುವುದಾಗಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾತುಕತೆಗೆ ಆಹ್ವಾನಿಸಿರುವ ಪಂಜಾಬ್‌ ಮುಖ್ಯಮಂತ್ರಿ ನವಜೋತ್‌ ಸಿಂಗ್‌ ಸಿಧು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಸಿಧು … Continued

ಹುಬ್ಬಳ್ಳಿ: ಈಗ ದೇವರಗುಡಿಹಾಳ-ಬೂದನಗುಡ್ಡದ ಬಳಿಯೂ ಚಿರತೆ ಪ್ರತ್ಯಕ್ಷ….!

ಹುಬ್ಬಳ್ಳಿ: ಈಗ ಹುಬ್ಬಳ್ಳಿ ಹಾಗೂ ಕಲಘಟಗಿ ತಾಲೂಕಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಕಲಘಟಗಿಯ ದೇವರ ಗುಡಿಹಾಳ ಮತ್ತು ಬೂದನಗುಡ್ಡದ ಸಮೀಪ ದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ದೇವರಗುಡುಹಾಳ, ಕಲಘಟಗಿ ತಾಲೂಕಿನ ಬೂದನಗುಡ್ಡದಲ್ಲಿ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುತ್ತಾಡಿದೆ ಎಂದು ವರದಿಯಾಗಿದೆ. ಅರಣ್ಯ ಇಲಾಖೆ ಇದನ್ನು ಖಚಿತಪಡಿಸಿದೆ ಎಂದು ವಿಜಯವಾಣಿ ವರದಿ ಮಾಡಿದೆ. ಇದು … Continued

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಮಂತ್ರಿ ಮಾಲ್​ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಕಟ್ಟದ ಸತಾಯಿಸುತ್ತಿದ್ದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ (Mantri Square Mall)ಗೆ ಇಂದು (ಸೆಪ್ಟಂಬರ್‌30, ಗುರುವಾರ) ಬೆಳಿಗ್ಗೆ ಬೀಗ ಹಾಕಲಾಗಿದೆ. ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಕಾರಣ ಮಾಲ್‌ಗೆ ಬಿಬಿಎಂಪಿ ಅಧೀಕಾರಿಗಳು ಬೀಗ ಜಡಿದಿದ್ದಾರೆ. 2017ರ ಬಳಿಕ ಇದೂವರೆಗೂ ಮಂತ್ರಿ ಮಾಲ್​ ಆಸ್ತಿ … Continued

ನಮ್ಮ ಮೆಟ್ರೊ ಕಾಮಗಾರಿ ಸ್ಥಳದಲ್ಲಿ ಮುಚ್ಚಿದ ಬಾವಿಯಿಂದ 30 ಅಡಿ ಮಣ್ಣು ಕುಸಿತ..!

ಬೆಂಗಳೂರು : ನಮ್ಮ ಮೆಟ್ರೋ ಕಾಮಗಾರಿಯ ವೇಳೆ ಮುಚ್ಚಿದ ಬಾವಿಯಿಂದ ಸುಮಾರು ಮೂವತ್ತು ಅಡಿಗಳಷ್ಟು ಮಣ್ಣು ಕುಸಿದಿರುವ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗೊಟ್ಟಿಗೆರೆಯಿಂದ ನಾಗವಾರದ ವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಟಿವಿಎಂ ಮೆಶಿನ್‌ ಊರ್ಜಾ ಸುರಂಗ ಕೊರೆದಿತ್ತು. ಆದ್ರೆ ಈಗ ಮೆಟ್ರೋ ಕಾಮಗಾರಿಯಿಂದಾಗಿ ಟ್ಯಾನರಿ … Continued

ರೇಣುಕಾಚಾರ್ಯ, ಜೀವರಾಜ್​ಗೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಮತ್ತೆ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್.ಜೀವರಾಜ್ ಮರು ನೇಮಕಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ರೇಣುಕಾಚಾರ್ಯ ಮತ್ತು ಜೀವರಾಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಈಗ ಬಸವರಾಜ ಬೊಮ್ಮಾಯಿ‌ ಮುಖ್ಯಮಂತ್ರಿಯಾಗಿ ಎರಡು ತಿಂಗಳ ಬಳಿಕ ಇವರಿಬ್ಬರು ಮತ್ತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇವರಿಗೆ ಸಂಪುಟ ದರ್ಜೆ ಸಚಿವರ … Continued

ಮಗುವಿನೊಂದಿಗೆ ನದಿಗೆ ಹಾರಿದ್ದ ತಾಯಿ ಜೀವಂತವಾಗಿ ಪತ್ತೆ, ಮಗುವಿಗಾಗಿ ಮುಂದುವರಿದ ಶೋಧ

ಗದಗ: ಮೂರು ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರೋಣ ತಾಲ್ಲೂಕಿನ ಹೊಳೆಆಲೂರ ಗ್ರಾಮದ ಮಹಿಳೆ ನದಿಯಲ್ಲಿರುವ ಮುಳ್ಳು ಕಂಟಿಯಲ್ಲಿ ಜೀವಂತ ಪತ್ತೆಯಾಗಿದ್ದಾರೆ. ಆದರೆ ಮೂರು ವರ್ಷದ ಮಗು ಸಿಕ್ಕಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಮಾದೇವಿ ಸಂಗಮೇಶ ಶೆಲ್ಲಿಕೇರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದವರು. ಅವರಿಗೆ ನಾಲ್ವರು ಹೆಣ್ಣುಮಕ್ಕಳಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಮೂರು … Continued

ಭಾರತದಲ್ಲಿ 23,529 ಹೊಸ ಕೋವಿಡ್ -19 ಪ್ರಕರಣಗಳು ದಾಖಲು..ನಿನ್ನೆಗಿಂತ 24.7% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 23,529 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 24.7 % ಹೆಚ್ಚಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಸೋಂಕುಗಳು ಈಗ 3,37,39,980 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬೆಳಿಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಇದೇ ಸಮಯದಲ್ಲಿ ಅಲ್ಲದೆ, ಕಳೆದ … Continued

ಪಾಕಿಸ್ತಾನಕ್ಕೆ ಸಂಕಷ್ಟ..?: ಅಫ್ಘಾನಿಸ್ತಾನದ ತಾಲಿಬಾನ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರದ ಮೌಲ್ಯಮಾಪನದ ಮಸೂದೆ ಅಮೆರಿಕದ ಸೆನೆಟ್ಟಿನಲ್ಲಿ ಮಂಡನೆ..!

ಕಾಬೂಲ್ ಪತನದ ಮೊದಲು ಮತ್ತು ನಂತರ ಅಫ್ಘಾನಿಸ್ತಾನದಲ್ಲಿ ಮತ್ತು ಪಂಜಶೀರ್ ಕಣಿವೆಯಲ್ಲಿ ತಾಲಿಬಾನ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವನ್ನು ನಿರ್ಣಯಿಸಲು ಇಪ್ಪತ್ತೆರಡು ಅಮೆರಿಕ ಸೆನೆಟರ್‌ಗಳು ಮಸೂದೆಯೊಂದನ್ನು ಸೆನೆಟ್ ನಲ್ಲಿ ಮಂಡಿಸಿದ್ದಾರೆ. ಸೆನೆಟರ್ ವಿದೇಶಿ ಸಂಬಂಧಗಳ ಸಮಿತಿಯ ಶ್ರೇಯಾಂಕ ಸದಸ್ಯ ಸೆನೆಟರ್ ಜಿಮ್ ರಿಶ್ ಮತ್ತು ಇತರ ರಿಪಬ್ಲಿಕನ್ನರು ಸೋಮವಾರ ಅಫಘಾನಿಸ್ತಾನ ಭಯೋತ್ಪಾದನೆ ನಿಗ್ರಹ, ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ … Continued