ಕೃಷಿ ಭೂಮಿ ವಾರದಲ್ಲಿ ಪರಿವರ್ತನೆ : ಸುಗ್ರೀವಾಜ್ಞೆಗೆ ಸರ್ಕಾರದ ತೀರ್ಮಾನ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ … Continued

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್ ವಿರುದ್ಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 1,406 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ಸಿಐಡಿ ಪೊಲೀಸರು

ಬೆಂಗಳೂರು: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ವಿರುದ್ಧ ಸಿಐಡಿ ಪೊಲೀಸರು ಸುಮಾರು 1,406 ಪುಟಗಳ ಪ್ರತ್ಯೇಕ ಆರೋಪ ಪಟ್ಟಿಯನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಡಿವೈಎಸ್‌ಪಿ ಬಿ. ಕೆ. … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮುಂದಿನ ವಿಚಾರಣೆ ವರೆಗೆ ಮಧ್ಯಂತರ ತಡೆ ನೀಡಿದೆ. ಕೋಲಾರದ ಚಂದನ್‌ ವಿ, ವಸಂತ ನಾಯಕ್‌, ಆಶಾ ಸಣಕಲ್ಲ ಮತ್ತು ಇತರರು ಪ್ರತ್ಯೇಕವಾಗಿ ಮರು ಪರೀಕ್ಷೆ ರದ್ದು ಕೋರಿ … Continued

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅಕ್ಟೋಬರ್‌ 1ರಂದು ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2022 ಪರಿಷ್ಕೃತ ರ್‍ಯಾಂಕ್‌ ಪಟ್ಟಿಯ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್‌ 1ಕ್ಕೆ ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್‌ 29ರಂದು ಪಟ್ಟಿ ಪ್ರಕಟಿಸುವುದಾಗಿ ಹೇಳಲಾಗಿತ್ತು. ಆದರೆ ಪಟ್ಟಿ ಪ್ರಕಟಿಸಲು ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆಯಲ್ಲಿ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕೆಇಎ ಮೂಲಗಳಿಂದ ತಿಳಿದುಬಂದಿದೆ. ಪರಿಷ್ಕೃತ ರ್‍ಯಾಂಕ್‌ ಪಟ್ಟಿಗಾಗಿ ಸುಮಾರು 2 … Continued

ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್. ವೆಂಕಟರಮಣಿ ನೇಮಕ

ನವದೆಹಲಿ: ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ. ಬುಧವಾರ ಸಂಜೆ ಹೊರಡಿಸಲಾದ ಕಾನೂನು ಸಚಿವಾಲಯದ ಅಧಿಸೂಚನೆಯಲ್ಲಿ ವೆಂಕಟರಮಣಿ ಅವರ ನೇಮಕವು ಅವರು ತಮ್ಮ ಕಚೇರಿಯ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಿದೆ. ವೆಂಕಟರಮಣಿ (72) ಅವರು … Continued

ಕನಕಪುರದ ಡಿಕೆ ಶಿವಕುಮಾರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ರಾಮನಗರ: ಕನಕಪುರದಲ್ಲಿನ ಡಿ.ಕೆ.ಶಿವಕುಮಾರ ನಿವಾಸದ ಮೇಲೆ ಸಿಬಿಐ (CBI) ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ 11ರ ಸುಮಾರಿಗೆ ಎಂಟು ಮಂದಿ ಅಧಿಕಾರಿಗಳ ತಂಡ ಕನಕಪುರ ತಹಸೀಲ್ದಾರ್ ಅವರನ್ನು ಕರೆದುಕೊಂಡು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಕೆಲವೊಂದು ದಾಖಲೆಗಳ ಪರಿಶೀಲನೆ ಮಾಡಿದೆ. ಅಲ್ಲದೆ, ಅವರ ಕನಕಪುರ, ದೊಡ್ಡಆಲಹಳ್ಳಿ, … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸರ್ವಾನುಮತದ ನಿರ್ಣಯ ಅಂಗೀಕಾರ

ಹುಬ್ಬಳ್ಳಿ: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ಸಂಪೂರ್ಣವಾಗಿ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ತನ್ನ ೯೩ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು, ಈ ಯೋಜನೆ ಜಾರಿಯಾಗುವುದರಿಂದ ಉತ್ತರ ಕರ್ನಾಟಕ ಸಂಪೂರ್ಣ ಅಭಿವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ ಉದ್ಯಮಿಗಳ ಅಭಿವೃದ್ಧಿಗೆ … Continued

ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

ನವದೆಹಲಿ: ಮಂಗಳವಾರದಂದು ಸರ್ಕಾರವು ಮಾಜಿ ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ರಕ್ಷಣಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರನ್ನಾಗಿ (ಸಿಡಿಎಸ್) ನೇಮಿಸಿದೆ. ಡಿಸೆಂಬರ್ 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ದೇಶದ ಮೊದಲ ಸಿಡಿಎಸ್‌ (CDS) ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ನಂತರ ಈ ಹುದ್ದೆಯು ಖಾಲಿಯಾಗಿದೆ. ಡಿಸೆಂಬರ್ 8, … Continued

ಇರಾನ್‌: ಪ್ರತಿಭಟನೆಯಲ್ಲಿ ಹಿಜಾಬ್ ತೆಗೆದು ಕೂದಲು ಕಟ್ಟಿದ್ದ ಯುವತಿ ವೀಡಿಯೊ ವೈರಲ್ ಆದ ಬೆನ್ನಲ್ಲೇ ಗುಂಡಿಕ್ಕಿ ಹತ್ಯೆ

ತೆಹ್ರಾನ್ : ಹಿಜಾಬ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಿಂದ ಇರಾನ್ ಧಗಧಗನೆ ಹೊತ್ತಿ ಉರಿಯುತ್ತಿದೆ. ಪ್ರತಿಭಟನೆಯಲ್ಲಿ 75ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳುತ್ತವೆ. ಹಿಜಾಬ್ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನಕಾರರ ಮೇಲೆ ಗುಂಡಿನ ದಾಳಿ ನಡೆಯುತ್ತಿದೆ.  ಪ್ರತಿಭಟನೆ ನಡುವೆ ಹಿಜಾಬ್ ಕಿತ್ತೆಸೆದು ತಲೆಕೂದಲನ್ನು ಕಟ್ಟುತ್ತಾ ಧೈರ್ಯದಿಂದ ಹೆಜ್ಜೆ ಹಾಕಿದ ಇರಾನ್ ಯುವತಿಯ ವಿಡಿಯೋ ಭಾರೀ ವೈರಲ್ … Continued

ಕಾರವಾರ: ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ- ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯಿಂದ ಸಂಘ-ಸಂಸ್ಥೆಗಳಿಂದ ಅಹವಾಲು ಸ್ವೀಕಾರ

ಕಾರವಾರ :ಕರ್ನಾಟಕ ಹೈಕೋರ್ಟ್‌ ಆದೇಶದ ಮೇರೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯು ಅಂಕೋಲಾ- ಹುಬ್ಬಳ್ಳಿ ರೇಲ್ವೆ ಯೋಜನೆಯಿಂದ ವನ್ಯಜೀವಿಗಳ ಮೇಲೆ ಆಗಬಹದಾದ ಪರಿಣಾಮದ ಕುರಿತು ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿ ನೀಡಲಾಗುವುದು ಎಂದು ಭಾರತೀಯ ಅರಣ್ಯ ಸೇವಾ ಡಿಐಜಿ ರಾಕೇಶ ಜಗನ್ಯ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ಬುಧವಾರ ನಡೆದ ಅಂಕೊಲಾ-ಹುಬ್ಬಳ್ಳಿ ರೇಲ್ವೆ ಯೋಜನೆಯ … Continued