ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪೇಜಾವರ ಸ್ವಾಮೀಜಿ ಭೇಟಿ

ಬೆಂಗಳೂರು: ಅನಾರೋಗ್ಯದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪದ್ಮನಾಭ ನಗರದ ಮನೆಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ … Continued

ಆರ್​ಎಸ್​ಎಸ್​ ಪ್ರಮುಖನ ಕಾರಿನ ಮೇಲೆ ‘ಕಿಲ್ ಯು’ ಎಂಬ ಜಿಹಾದಿ ಬರಹ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರದ ಗಾಳಿ ಬಿಟ್ಟು ಕಾರಿನ ಮೇಲೆ ಕಿಲ್ ಯು, ಜಿಹಾದಿ ಎಂದು ಬರೆಯಲಾಗಿದೆ ಎಂದು ವರದಿಯಾಗಿದೆ. ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದ ದುಷ್ಕರ್ಮಿಗಳು ಬಳಿಕ ಈ ರೀತಿ ಬರೆದಿದ್ದಾರೆ. ಕಿಲ್ … Continued

ನಾಲೆಜ್‌ ಪಾರ್ಕ್ ಸ್ಥಾಪನೆಯತ್ತ ನಮ್ಮ ಚಿಂತನೆ ಇರಲಿ: ಧಾರವಾಡದ ಐಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇನ್ನೂ ಗುಣಮಟ್ಟದ ತಂತ್ರಜ್ಞರನ್ನು ತಯಾರು ಮಾಡಿದರೆ ಇನ್ನೂ ಎತ್ತರಕ್ಕೇರಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟರು. ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ಅದರ ನೂತನ ಕ್ಯಾಂಪಸ್‌ ಅನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ನ್ಯಾನೊ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ … Continued

ರಾಜಸ್ಥಾನ ಬಿಕ್ಕಟ್ಟಿನ ನಡುವೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಗೆಹ್ಲೋಟ್ ಔಟ್: ಈಗ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ, ದಿಗ್ವಿಜಯ ಹೆಸರು ಮುಂಚೂಣಿಗೆ

ನವದೆಹಲಿ: ರಾಜಸ್ಥಾನದಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಮತ್ತು ಕಾಂಗ್ರೆಸ್ ಆಂತರಿಕ ಕಲಹದ ನಡುವೆ, ಪಕ್ಷದ ಅಧ್ಯಕ್ಷೀಯ ಚುನಾವಣೆಯ ರೇಸ್‌ನಿಂದ ಅಶೋಕ್ ಗೆಹ್ಲೋಟ್ ಹೊರಬಿದ್ದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಸ್ತುತ ಕಾಂಗ್ರೆಸ್‌ನ ಉನ್ನತ ನಾಯಕತ್ವಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ ಮತ್ತು ದಿಗ್ವಿಜಯ ಸಿಂಗ್ ಹೆಸರು ಮಂಚೂಣಿಗೆ ಬಂದಿದೆ. “ಅವರು (ಅಶೋಕ್ … Continued

ತಪ್ಪು ಮಾಹಿತಿ-ಕೋಮು ಸೌಹಾರ್ದತೆ ಕದಡುವ 45 ಯೂ ಟ್ಯೂಬ್ ವೀಡಿಯೊ ನಿಷೇಧಿಸಿದ ಸರ್ಕಾರ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆನ್‌ಲೈನ್ ವೀಡಿಯೊ ಹಂಚಿಕೆ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆ – ಯೂಟ್ಯೂಬ್‌ಗೆ 10 ಚಾನಲ್‌ಗಳ 45 ವೀಡಿಯೊಗಳನ್ನು ನಿರ್ಬಂಧಿಸಲು ನಿರ್ದೇಶಿಸಿದೆ. ನಿರ್ಬಂಧಿಸಲಾದ ವೀಡಿಯೊಗಳು ಒಟ್ಟು 1.30 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದ್ದವು. ಯೂ ಟ್ಯೂಬರ್ ಧ್ರುವ ರಾಥೀ ಅವರ ವೀಡಿಯೊ ಇದರಲ್ಲಿ ಸೇರಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ … Continued

ತಮಿಳುನಾಡು: ಆನ್‌ಲೈನ್ ಜೂಜಾಟ ನಿಷೇಧಿಸುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನುಮೋದನೆ

ಚೆನ್ನೈ: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧಿಸುವ ಸುಗ್ರೀವಾಜ್ಞೆಗೆ ತಮಿಳುನಾಡು ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ತಮಿಳುನಾಡು ರಾಜ್ಯಪಾಲರ ಒಪ್ಪಿಗೆ ದೊರೆತ ನಂತರ ರಾಜ್ಯದಲ್ಲಿ ಸುಗ್ರೀವಾಜ್ಞೆ ಜಾರಿಗೆ ಬರಲಿದೆ. ಸೈಬರ್‌ಸ್ಪೇಸ್‌ನಲ್ಲಿ ರಮ್ಮಿ ಮತ್ತು ಪೋಕರ್‌ನಂತಹ ಆನ್‌ಲೈನ್ ಜೂಜಾಟದ ಮೇಲಿನ ತಮಿಳುನಾಡು ಸರ್ಕಾರದ ನಿಷೇಧವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ … Continued

ಜೆಡಿಎಸ್ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಪಂಚರತ್ನ ಯಾತ್ರೆ ನವೆಂಬರ್ 1ರಿಂದ ನಡೆಸಲು ನಿರ್ಧಾರ ಮಾಡಲಾಗಿದೆ. ನಾವು … Continued

ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ

ಹುಬ್ಬಳ್ಳಿ: ಪೌರ ಸನ್ಮಾನ ಮಾಡಿ ಕೇವಲ ಒರಿಸ್ಸಾದ ಬಡ ಕುಟುಂಬದ ಹೆಣ್ಣುಮಗಳನ್ನು ಸನ್ಮಾನಿಸಿಲ್ಲ. ಇಡೀ ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ಗೌರವಿಸಿದ್ದೀರಿ. ‘ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಸೋಮವಾರ ಆಯೋಜಿಸಲಾಗಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಧಾರವಾಡ ಜಿಲ್ಲೆ ವಿದ್ಯಾಕಾಶಿ ಎಂದು … Continued

2024ರ ಲೋಕಸಭಾ ಚುನಾವಣೆ, ವರ್ಷದಲ್ಲಿ ಸಾಲುಸಾಲು ಚುನಾವಣೆಗಳು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ಅವಧಿ ವಿಸ್ತರಣೆ ಸಾಧ್ಯತೆ

ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಗೆ ಎರಡು ವರ್ಷಕ್ಕಿಂತ ಕಡಿಮೆ ಸಮಯವಿದ್ದು, ಅದಕ್ಕೂ ಮುನ್ನ ರಾಜ್ಯ ಚುನಾವಣೆಗಳ ಸರಮಾಲೆಯಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾಕದ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ವಿಸ್ತರಣೆಯು ಏಪ್ರಿಲ್-ಮೇ 2024ರ ಲೋಕಸಭೆ ಚುನಾವಣೆಯ ಕೊನೆಯವರೆಗೂ ಇರುತ್ತದೆ ಎಂದು ಹೇಳಲಾಗಿದೆ. 2020ರಲ್ಲಿ ಅಮಿತ್ ಶಾ ಅವರಿಂದ ಬಿಜೆಪಿ ಅಧ್ಯಕ್ಷ … Continued

10 ಸೆಕೆಂಡುಗಳಲ್ಲಿ ನಿಮ್ಮನ್ನು ಮುಗಿಸ್ತೇವೆ: ಆರ್‌ಎಸ್‌ಎಸ್‌ಗೆ ಎಸ್‌ಡಿಪಿಐ ನಾಯಕನ ಬಹಿರಂಗ ಬೆದರಿಕೆ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ಕೇಂದ್ರದ ‘ಆಪರೇಷನ್ ಆಕ್ಟೋಪಸ್’ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಾಯಕನ ಆಘಾತಕಾರಿ ವೀಡಿಯೊ ಸೋಮವಾರ ಕೇರಳದಿಂದ ಹೊರಹೊಮ್ಮಿದೆ. ಎಸ್‌ಡಿಪಿಐ ಎಂಬುದು ಪಿಎಫ್‌ಐ ರಾಜಕೀಯ ಮುಖವಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ … Continued