ರಾಹುಲ್‌ ಗಾಂಧಿ ಭೇಟಿಗೆ ಒಂದು ದಿನ ಮೊದಲು ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಸಿಂಗ್ ವಘೇಲಾ ರಾಜೀನಾಮೆ

ಅಹಮದಾಬಾದ್ : ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಸಿಂಗ್ ವಘೇಲಾ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಭೇಟಿ ನೀಡುವ ಒಂದು ದಿನ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಗೆ ಮುಂಚಿತವಾಗಿ ಸೆಪ್ಟೆಂಬರ್ 5 ರಂದು ಗುಜರಾತ್‌ನಲ್ಲಿ ಮುಂಬರುವ … Continued

ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಆರೋಗ್ಯ ಸಚಿವೆ ಶೈಲಜಾ : ಪಕ್ಷದೊಂದಿಗೆ ಚರ್ಚಿಸಿದ ನಂತರ ನಿರ್ಧಾರ

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಕೆಕೆ ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿ ವಿಶೇಷವಾಗಿ ನಿಪಾ ವೈರಸ್ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಅವಧಿಯಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಅವರನ್ನು 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಏಷ್ಯನ್ ನೊಬೆಲ್ ಪ್ರಶಸ್ತಿ … Continued

ಸ್ಥಳ ಮಹಜರ್‌ ನಡೆಸಲು ಮುರುಘಾ ಶರಣರನ್ನು ಮಠಕ್ಕೆ ಕರೆತಂದ ಪೊಲೀಸರು

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸ್ಥಳ ಮಹಜರ್‌ ನಡೆಸಲು ಮುರುಘಾ ಮಠಕ್ಕೆ ಭಾನುವಾರ ಕರೆತಂದರು. ಪೊಲೀಸ್ ವಶದಲ್ಲಿರುವ ಆರೋಪಿ ಮುರುಘಾ ಶರಣರನ್ನು ತನಿಖಾಧಿಕಾರಿಗಳು ಶುಕ್ರವಾರ ರಾತ್ರಿಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:45 ಮುರುಘಾ ಮಠಕ್ಕೆ ಕರೆತಂದು ಸ್ಥಖ ಮಹಜರು ನಡೆಸಿದ್ದಾರೆ. ಡಿವೈಎಸ್‌ಪಿ ಕಚೇರಿಯಿಂದ … Continued

ಸೇವಾ ದರ್ಶನಕ್ಕೆ ವ್ಯವಸ್ಥೆ ಮಾಡಿ ಅಥವಾ ಭಕ್ತನಿಗೆ 45 ಲಕ್ಷ ಪರಿಹಾರ ನೀಡಿ : ಟಿಟಿಡಿಗೆ ಗ್ರಾಹಕ ನ್ಯಾಯಾಲಯ ಆದೇಶ….!

ಸೇಲಂ: ಭಾರತದ ಅತ್ಯಂತ ಶ್ರೀಮಂತ ದೇವರು ಎಂದು ಎನಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜನರು ಕೋಟಿ ಕೋಟಿ ಬೆಲೆ ಬಾಳುವ ಕಾಣಿಕೆಗಳನ್ನು ನೀಡಿ ಬರುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ತಿರುಪತಿ ತಿಮ್ಮಪ್ಪನೇ ಭಕ್ತರೊಬ್ಬರಿಗೆ ಈಗ ದುಡ್ಡು ನೀಡಬೇಕಾಗಿದೆ. ಹೌದು. ಈ ಪ್ರಕರಣದಲ್ಲಿತಿರುಪತಿ ತಿಮ್ಮಪ್ಪ ದೇವಸ್ಥಾನದ ಟ್ರಸ್ಟ್​ ಈಗ ಭಕ್ತರೊಬ್ಬರಿಗೆ ಪರಿಹಾರದ ಹಣ ನೀಡಬೇಕಿದೆ. ದೇವಸ್ಥಾನವೊಂದು … Continued

ತ್ಯಾಜ್ಯ ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ: ಪಶ್ಚಿಮ ಬಂಗಾಳ ಸರ್ಕಾರಕ್ಕೆ 3,500 ಕೋಟಿ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ನವದೆಹಲಿ: ಘನ ಮತ್ತು ದ್ರವ ತ್ಯಾಜ್ಯ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ ತೋರಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 3,500 ಕೋಟಿ ರೂಪಾಯಿಗಳ ಭಾರೀ ದಂಡ ವಿಧಿಸಿದೆ. 2022-2023ರ ರಾಜ್ಯದ ಬಜೆಟ್‌ನ ಪ್ರಕಾರ ನಗರಾಭಿವೃದ್ಧಿ ಮತ್ತು ಪುರಸಭೆ ವ್ಯವಹಾರಗಳಿಗೆ 12,818.99 ಕೋಟಿ ರೂ.ಗಳನ್ನು ಒದಗಿಸಲಾಗಿದ್ದರೂ ರಾಜ್ಯ ಸರ್ಕಾರವು ಒಳಚರಂಡಿ … Continued

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನ ಹಾಗೂ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾ ಮಾಡಲಾಗಿದೆ.ಶನಿವಾರ ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಕ್ರಮ ಕೈಗೊಳ್ಳಾಗಿದೆ … Continued

ಉನ್ನತ ಶಿಕ್ಷಣದಲ್ಲಿ ʼಪ್ರೋಫೆಸರ ಆಫ್ ಪ್ರಾಕ್ಟೀಸ್‌ʼ ಹೆಸರಲ್ಲಿ ಶೈಕ್ಷಣಿಕ ವಿದ್ಯಾರ್ಹತೆ ಇಲ್ಲದವರಿಗೆ ನೇರ ನೇಮಕಕ್ಕೆ ಒಪ್ಪಿಗೆ: ವಸಂತ ಲದವಾ ವಿರೋಧ

ಹುಬ್ಬಳ್ಳಿ: ವಿಶ್ವ ವಿದ್ಯಾಲಯ ಅನುದಾನ ಆಯೋಗ (UGC) ಆಗಸ್ಟ್‌ ತಿಂಗಳು ನಡೆದ ೫೬೦ನೇ ಸಭೆಯಲ್ಲಿ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಇರದಿದ್ದವರಿಗೂ ವಿಶ್ವವಿದ್ಯಾಲಯ ಮತ್ತು ಮಹಾವಿದ್ಯಾಲಯಗಳಲ್ಲಿ ನೇರ ನೇಮಕಾತಿಗೆ ಕರಡು ಮಾರ್ಗ ಸೂಚಿಗೆ ಅನುಮೋದನೆ ನೀಡಿದೆ. ಇದು ಅರ್ಹ ವಿದ್ಯಾವಂತರನ್ನು ಕಡೆಗಣಿಸುವ ಹಾಗೂ ಮೀಸಲಾತಿ ಮಾರ್ಗ ಸೂಚಿಗಳ ವಿರುದ್ಧದ ಕ್ರಮವಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸಿನೆಟ್ … Continued

ತುಮಕೂರು: ಬಿಜೆಪಿಯತ್ತ ಮಾಜಿ ಸಂಸದ ಮುದ್ದಹನುಮೇಗೌಡ

ತುಮಕೂರು: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.‍ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಪಿತೃ ಪಕ್ಷ ಆರಂಭಕ್ಕೂ ಮುನ್ನ ಬಿಜೆಪಿ ಸೇರಲು ಅವರು ಸಿದ್ಧತೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದು, ಈ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 9ರ ವರೆಗೆ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ರಾಜಧಾನಿ ಬೆಂಗಳೂರು, ರಾಜ್ಯದ ಕರಾವಳಿ ಹಾಗೂ ಮಲೆನಾಡು, ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 9ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಿರಲಿದೆ. ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು … Continued

ಕರ್ನಾಟಕ ಸಿಇಟಿ : ಪುನರಾವರ್ತಿತ ವಿದ್ಯಾರ್ಥಿಗಳ ದ್ವಿತೀಯ ಪಿಯು-ಸಿಇಟಿಯ ತಲಾ ಶೇ. 50 ಅಂಕ ಪರಿಗಣಿಸಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ. 50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಶನಿವಾರ ಮಹತ್ವದ ತೀರ್ಪು ಪ್ರಕಟಿಸಿದೆ. 2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು (ಪುನರಾವರ್ತಿತ ವಿದ್ಯಾರ್ಥಿಗಳು) ದ್ವಿತೀಯ … Continued