ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಪಾಲಿಕೆ ಆಯುಕ್ತರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರವಿದೆ ಎಂದ ಹೈಕೋರ್ಟ್‌

ಧಾರವಾಡ: ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ನಿರ್ಧಾರ ಕೈಗೊಳ್ಳುವ ಅಧಿಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈದ್ಗಾ ಮೈದಾನದಲ್ಲಿ … Continued

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂಕೋರ್ಟ್‌ ಆದೇಶ : ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ

ನವದೆಹಲಿ : ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಾಗಿನ ವಿವಾದ ಬೆನ್ನಲ್ಲೇ, ಸುಪ್ರೀಂಕೋರ್ಟ್​ ಯಥಾಸ್ಥಿತಿಗೆ ಆದೇಶಿಸಿದೆ. ಸುದೀರ್ಘ ಎರಡು ಗಂಟೆಗಳ ವಾದ ಪ್ರತಿವಾದನವನ್ನು ಆಲಿಸಿದ ತ್ರಿಸದಸ್ಯ ಪೀಠ, ಎರಡೂ ಬದಿಯ ಕಕ್ಷಿದಾರರಿಗೆ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿತು. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಿಲ್ಲ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ … Continued

ರಾಜ್ಯದಲ್ಲಿ ಮಳೆ ಹಾನಿ: 250 ಕೋಟಿ ರೂ.ಗಳ ಪರಿಹಾರ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ವರುಣನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. … Continued

ಜಯಲಲಿತಾ ಸಾವು ಪ್ರಕರಣ : ಆಪ್ತೆ ಶಶಿಕಲಾ ವಿರುದ್ಧ ತನಿಖೆಗೆ ಶಿಫಾರಸು ಮಾಡಿದ ತನಿಖಾ ಆಯೋಗ

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಆರ್ಮುಗಂ ಸ್ವಾಮಿ ಅವರ ಆಯೋಗವು ಘಟನೆಗೆ ಸಂಬಂಧಿಸಿದಂತೆ ವಿಕೆ ಶಶಿಕಲಾ ಮತ್ತು ಇತರರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು ಇತರರ ವಿರುದ್ಧ ತನಿಖೆ ನಡೆಸುವಂತೆ ಶಿಫಾರಸು ಮಾಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಡಿಸೆಂಬರ್ 2016 ರಲ್ಲಿ ನಿಧನರಾಗುವ … Continued

ಬೆಂಗಳೂರಲ್ಲಿ ಮಳೆ ಆರ್ಭಟ: ಹಲವು ಬಡಾವಣೆಗಳು ಬುಳುಬುಳು, ಜನಜೀವನ ತತ್ತರ

ಬೆಂಗಳೂರು: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಗಣೇಶ ಹಬ್ಬದ ಸಡಗರಕ್ಕೆ ವರುಣ ನೀರೆರೆದಿದ್ದಾನೆ. ಮಹಾನಗರದ ಬಡಾವಣೆಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜನ ಜಾಗರಣೆ ಮಾಡುವಂತಾಗಿದೆ. ಹಬ್ಬದ ಸಂಭ್ರಮದಲ್ಲಿರಬೇಕಾದ ಜನರು ಮನೆಯಿಂದ ನೀರು ಹೊರಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಸರ್ಜಾಪುರ ರಸ್ತೆ, ಸಾಯಿ ಲೇಔಟ್, ನಾಗವಾರ, … Continued

ಅಮೆಜಾನ್ ಕಾಡಿನಲ್ಲಿ 26 ವರ್ಷಗಳಿಂದ ಯಾರ ಸಂಪರ್ಕಕ್ಕೂ ಬಾರದೆ ಒಂಟಿಯಾಗಿ ಜೀವಿಸಿದ್ದ ಬುಡಕಟ್ಟು ಜನಾಂಗವೊಂದರ ಕೊನೆಯ ವ್ಯಕ್ತಿ ಸಾವು…

ಬ್ರೆಜಿಲ್‌ನ ದಟ್ಟ ಅಮೆಜಾನ್ ಕಾಡಿನಲ್ಲಿ 26 ವರ್ಷಗಳ ಕಾಲ ಒಂಟಿಯಾಗಿ ಜೀವನ ಸಾಗಿಸಿದ್ದ ಬುಡಕಟ್ಟು ಜನಾಂಗವೊಂದರ ಕಟ್ಟ ಕಡೆಯ ವ್ಯಕ್ತಿ ಮೃತಪಟ್ಟಿದ್ದಾನೆ. ಬ್ರೆಜಿಲ್ ಮೂಲದ ಸ್ಥಳೀಯ ಸಂರಕ್ಷಣಾ ಸಂಸ್ಥೆ ಫುನೈ ಈ ಮರಣವನ್ನು ವರದಿ ಮಾಡಿದೆ. ಈತ ತನ್ನ ಗುಡಿಸಲಿನಲ್ಲಿ ಶನಿವಾರ ಶವವಾಗಿ ಪತ್ತೆಯಾಗಿದ್ದಾನೆ. ತನ್ನ 60ರ ವಯಸ್ಸಿನಲ್ಲಿ ಸ್ವಾಭಾವಿಕವಾಗಿಯೇ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ. … Continued

ಭಾರತದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ?: ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ 15% ಹೆಚ್ಚಳ, ಮೆಟ್ರೋ ನಗರಗಳಲ್ಲಿ ದೆಹಲಿ ನಂ.1, ಬೆಂಗಳೂರು ನಂ.3

ನವದೆಹಲಿ: ಒಂದು ವರ್ಷದ ಹಿಂದೆ ಹೋಲಿಸಿದರೆ 2021 ರಲ್ಲಿ ಮಹಿಳೆಯರ ವಿರುದ್ಧದ ಅಪರಾಧದಲ್ಲಿ 15.3%ರಷ್ಟು ಹೆಚ್ಚಳವಾಗಿದೆ, ಪ್ರತಿ 1 ಲಕ್ಷ ಜನಸಂಖ್ಯೆಗೆ ಅಂತಹ ಅಪರಾಧಗಳ ಘಟನೆಗಳ ಸಂಖ್ಯೆಯು ಭಾರತದಾದ್ಯಂತ ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿದ ಅಂಕಿಅಂಶಗಳು ತೋರಿಸಿವೆ. ಅಂಕಿಅಂಶಗಳ ಪ್ರಕಾರ, 2021 ರಲ್ಲಿ ಒಟ್ಟು … Continued

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಭಾರೀ ಆಘಾತ: ಗುಲಾಂ ನಬಿ ಆಜಾದ್‌ ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ 51 ನಾಯಕರು

ಜಮ್ಮು: ಉನ್ನತ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಆಗಾತ ಎದುರಿಸುತ್ತಿದ್ದು, 51 ನಾಯಕರು ರಾಜೀನಾಮೆ ನೀಡಿದ್ದು, ಆಜಾದ್ ಅವರ ಹೊಸ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಆಜಾದ್ ರಾಜೀನಾಮೆ ನಂತರ 64 ನಾಯಕರು ಪಕ್ಷ ತೊರೆದಿದ್ದಾರೆ. ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ … Continued

ಪ್ರಶಾಂತ್ ಭೂಷಣ್, ತರುಣ್ ತೇಜ್ಪಾಲ್ ವಿರುದ್ಧ 2009ರ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂಕೋರ್ಟ್

ನವದೆಹಲಿ: ವಕೀಲ ಪ್ರಶಾಂತ್ ಭೂಷಣ್ ಮತ್ತು ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಕ್ಷಮಾಪಣೆ, ವಿವರಣೆಯನ್ನು ಪರಿಗಣಿಸಿ ಅವರ ವಿರುದ್ಧ 2009ರಲ್ಲಿ ಹೂಡಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ. ತೆಹಲ್ಕಾ ನಿಯತಕಾಲಿಕದಲ್ಲಿ ಪ್ರಕಟವಾದ ಸಂದರ್ಶನಕ್ಕೆ ಸಂಬಂಧಿಸಿದಂತೆ ಭೂಷಣ್ ಮತ್ತು ತೇಜ್ಪಾಲ್ ವಿರುದ್ಧ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್ ಯೋಜನೆ…? : ವರದಿ

ನವದೆಹಲಿ: ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಸಂಭಾವ್ಯ ಅವಕಾಶಗಳನ್ನು ಹುಡುಕುತ್ತಿದ್ದಾರೆ. ಆದರೆ ಅವರಿನ್ನೂ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ಈ ಬಗ್ಗೆ ಮಾನಸಿಕವಾಗಿ ಸಿದ್ಧರಾಗಿಲ್ಲ. ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ … Continued