5 ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆ, ಪೆಗಾಸಸ್ ಸ್ಪೈವೇರ್‌ನ ನಿರ್ಣಾಯಕ ಪುರಾವೆ ಇಲ್ಲ: ಸುಪ್ರೀಂಕೋರ್ಟ್ ನೇಮಿಸಿದ ಸಮಿತಿ

ನವದೆಹಲಿ: ಪೆಗಾಸಸ್ ಸ್ನೂಪಿಂಗ್ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ತಾನು ಪರೀಕ್ಷಿಸಿದ 29 ಮೊಬೈಲ್ ಫೋನ್‌ಗಳಲ್ಲಿ ಸ್ಪೈವೇರ್ ಪತ್ತೆಯಾಗಿದೆ ಎಂಬುದಕ್ಕೆ ಯಾವುದೇ ನಿರ್ಣಾಯಕ ಪುರಾವೆ ಸಿಕ್ಕಿಲ್ಲ ಎಂದು ಗುರುವಾರ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠಕ್ಕೆ ತಿಳಿಸಿದೆ. 29 ಫೋನ್‌ಗಳನ್ನು ಪರಿಶೀಲಿಸಲಾಗಿದೆ. ಐದು ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆಯಾಗಿದೆ ಆದರೆ ಪೆಗಾಸಸ್ ಸ್ಪೈವೇರ್‌ ಬಗ್ಗೆ … Continued

ತುಮಕೂರು: ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವು

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆಗಸ್ಟ್‌ 25) ಮುಂಜಾನೆ ನಡೆದಿದೆ. ಕ್ರೂಸರಿನಲ್ಲಿ 24 ಜನರಿದ್ದು, ಎಲ್ಲರೂ ರಾಯಚೂರು ಜಿಲ್ಲೆಯರು ಎಂದು ಹೇಳಲಾಗಿದೆ. ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ … Continued

ಲೇಖಕಿ, ನಿವೃತ್ತ ಆಕಾಶವಾಣಿ ನಿರ್ದೇಶಕಿ ಜ್ಯೋತ್ಸ್ನಾ ಕಾಮತ್‌ ಇನ್ನಿಲ್ಲ

ಕುಮಟಾ: ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್ (86) ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಮೃತರು ಮಗ ವಿಕಾಸ್ ಕಾಮತ್, ಸೊಸೆ ಕಿಮ್ ಕಾಮತ್ ಹಾಗೂ ಮೊಮ್ಮಗಳು ಮೀನಾ ಕಾಮತ್ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಜ್ಯೋತ್ಸ್ನಾ ಕಾಮತ್‌ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 1937ರಲ್ಲಿ ಜನಿಸಿದ್ದರು. … Continued

ಸರ್ಕಾರದಿಂದ ಎಡವಟ್ಟು : ಜೀವಂತವಾಗಿಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ…!

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವಂತ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ … Continued

ಮದರಸಾಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ವರೂಪ ಬದಲಾವಣೆ: ಸಚಿವ ನಾಗೇಶ

ಬೆಂಗಳೂರು : ಹಲವಾರು ಮುಸ್ಲಿಂ ಪೋಷಕರ ಆಶಯದಂತೆ ಮದರಸಾಗಳಲ್ಲೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಣ ಮಂಡಳಿ ರಚಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಮತ್ತು ಶಿಕ್ಷಣದ ಸ್ವರೂಪ ತಿಳಿಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮದರಸಾಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ 15 … Continued

ಪಂಚಮಸಾಲಿ ಮೀಸಲಾತಿ ಪ್ರಕರಣ: ನ್ಯಾ. ಸುಭಾಷ್‌ ಆಡಿ ನೇತೃತ್ವದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 3ಎ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಬುಧವಾರ ನೋಟಿಸ್‌ ಜಾರಿ ಮಾಡಿರುವ ಕರ್ನಾಟಕ ಹೈಕೋರ್ಟ್‌, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ ಎಂದು ಬಾರ್‌ … Continued

ಕಾಶ್ಮೀರದಲ್ಲಿ ಭಯೋತ್ಪಾದಕ ಸೆರೆ, ಭಾರತದ ಸೇನೆ ಪೋಸ್ಟ್‌ ಮೇಲಿನ ದಾಳಿಗೆ 30,000 ರೂಪಾಯಿ ನೀಡಿದ ಪಾಕ್ ಕರ್ನಲ್

ನವದೆಹಲಿ: ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಿರುವ ಸೇನೆ ನೆಲಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನಿ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ ಮತ್ತು ಇಬ್ಬರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ. ಬಂಧಿತ ವ್ಯಕ್ತಿಯನ್ನು ಈ ಹಿಂದೆ ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದಕ್ಕಾಗಿ ಬಂಧಿಸಲಾಗಿತ್ತು ಆದರೆ ಮಾನವೀಯ ಆಧಾರದ ಮೇಲೆ ವಾಪಸ್ ಕಳುಹಿಸಲಾಗಿತ್ತು – … Continued

ಸಿವಿಕ್ ಚಂದ್ರನ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ‘ಪ್ರಚೋದನಕಾರಿ ಉಡುಗೆ’ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ

ಸಂತ್ರಸೆಯು ಲೈಂಗಿಕವಾಗಿ ಪ್ರಚೋದನೆ ನೀಡುವಂಥ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಮೇಲ್ನೋಟಕ್ಕೆ ನಿಲ್ಲುವುದಿಲ್ಲ ಎಂಬ ವಿವಾದಾತ್ಮಕ ತೀರ್ಪು ಪ್ರಕಟಿಸಿದ್ದಲ್ಲದೇ ಆರೋಪಿ ಸಾಮಾಜಿಕ ಕಾರ್ಯಕರ್ತ ಸಿವಿಕ್‌ ಚಂದ್ರನ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಕೊಝಿಕ್ಕೋಡ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಆದೇಶಕ್ಕೆ ಕೇರಳ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಜಾಮೀನು ಮಂಜೂರು ಮಾಡುವಾಗ … Continued

ಆರೋಪಿಯನ್ನೇ ವಿವಾಹವಾದ ಸಂತ್ರಸ್ತೆ: ಪೋಕ್ಸೊ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌ ಏಕಸದಸ್ಯ ಪೀಠ

ಬೆಂಗಳೂರು: ಅಪ್ತಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಕುರಿತಾದ ಪ್ರಕರಣದಲ್ಲಿ ಆರೋಪಿಯನ್ನೇ ಸಂತ್ರಸ್ತೆ ಮದುವೆಯಾದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ದೋಷಾರೋಪ‌ ಪಟ್ಟಿ ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. 17 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪದ ಕುರಿತು ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು … Continued

ಜಾರ್ಖಂಡ್ ಸಿಎಂ ಆಪ್ತರ ಮನೆಯಲ್ಲಿ ಪತ್ತೆಯಾದ ಎಕೆ 47 ರಾಂಚಿ ಪೊಲೀಸರದ್ದು: ಪೊಲೀಸರ ಹೇಳಿಕೆ

ನವದೆಹಲಿ: ಪ್ರೇಮ್ ಪ್ರಕಾಶ್ ಅವರ ಮನೆಯಲ್ಲಿ ರೈಫಲ್‌ಗಳನ್ನು ಇಟ್ಟುಕೊಂಡಿದ್ದಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ರಾಂಚಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ 23 ರಂದು ಅವರು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದಾಗ, ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ ಮನೆಗೆ ಸಿಬ್ಬಂದಿಯಾಗಿದ್ದ ತಮ್ಮ ಪರಿಚಯಸ್ಥರನ್ನು ಭೇಟಿ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹವಾಮಾನ ವೈಪರೀತ್ಯದ … Continued