ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಮಂಗಳವಾರ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ … Continued

ಹುಬ್ಬಳ್ಳಿ: ಶಾಲಾ ವಾಹನದ ರೇಡಿಯೇಟರ್ ಬ್ಲಾಸ್ಟ್ ; ಕೆಲವು ಮಕ್ಕಳಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದ್ಯೊಯುವ ವಾಹನದ ರೇಡಿಯಟರ್  ಬ್ಲಾಸ್ಟ್ ನಾಲ್ಕೈದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಇಲ್ಲಿನ ಗೋಕುಲ ರಸ್ತೆ ಯ ಸೆಂಟ್ರಲ್ ಎಕ್ಸಾಯೀಜ್ ಕಾಲೋನಿಯಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ … Continued

ಬೆಳಗಾವಿ ಚಿರತೆ ಸೆರೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ಬರಲಿವೆ ಎರಡು ಆನೆಗಳು

ಬೆಳಗಾವಿ: ಬೆಳಗಾವಿ ನಗರದ ಗಾಲ್ಫ್‌ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಈಗ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್‌ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆಗಳು ಹಾಗೂ ಪರಿಣತ ಸಿಬ್ಬಂದಿಯ ತಂಡ ಶಿವಮೊಗ್ಗದಿಂದ ಹೊರಟಿದೆ ಎಂದು ಹೇಳಲಾಗಿದೆ. ಸಕ್ರೆಬೈಲ್‌ ಆನೆ ತರಬೇತಿ ಕ್ಯಾಂಪಿನಲ್ಲಿರುವ ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿರುವ … Continued

ಪಾಕಿಸ್ತಾನಕ್ಕೆ ಬ್ರಹ್ಮೋಸ್ ಕ್ಷಿಪಣಿ ಮಿಸ್‌ಫೈರ್: 3 ಭಾರತೀಯ ವಾಯುಪಡೆ ಅಧಿಕಾರಿಗಳ ಸೇವೆಯಿಂದ ವಜಾ

ನವದೆಹಲಿ: ಬ್ರಹ್ಮೋಸ್ ಕ್ಷಿಪಣಿ ಮಿಸ್‌ಫೈರ್ ಘಟನೆಗೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ (ಐಎಎಫ್) ಮೂವರು ಅಧಿಕಾರಿಗಳ ಸೇವೆಯನ್ನು ಮಂಗಳವಾರ ವಜಾಗೊಳಿಸಲಾಗಿದೆ. ಮಂಗಳವಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಗ್ರೂಪ್ ಕ್ಯಾಪ್ಟನ್ ಮತ್ತು ಇಬ್ಬರು ವಿಂಗ್ ಕಮಾಂಡರ್‌ಗಳ ಸೇವೆಯನ್ನು ಕೊನೆಗೊಳಿಸಲಾಗಿದೆ. ಮಾರ್ಚ್ 9, 2022 ರಂದು ಬ್ರಹ್ಮೋಸ್ ಕ್ಷಿಪಣಿಯನ್ನು ಆಕಸ್ಮಿಕವಾಗಿ ಉಡಾಯಿಸಲಾಯಿತು. ಘಟನೆಯ ಜವಾಬ್ದಾರಿಯನ್ನು ನಿಗದಿಪಡಿಸುವುದು ಸೇರಿದಂತೆ ಪ್ರಕರಣದ ಸತ್ಯಗಳನ್ನು … Continued

ಅಲೋಪಥಿ ಪದ್ಧತಿ-ವೈದ್ಯರ ಬಗ್ಗೆ ಅವಹೇಳನ : ಬಾಬಾರಾಮ್‌ ದೇವ್‌ಗೆ ಸುಪ್ರೀಂಕೋರ್ಟ್‌ ತರಾಟೆ

ನವದೆಹಲಿ: ಅಲೋಪತಿ ಮತ್ತು ಅಲೋಪತಿ ವೈದ್ಯರನ್ನು ಟೀಕಿಸಿದ್ದಕ್ಕಾಗಿ ಯೋಗ ಗುರು ರಾಮ್‌ದೇವ್ ಅವರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ, ವೈದ್ಯರು ಮತ್ತು ಇತರ ಚಿಕಿತ್ಸಾ ವ್ಯವಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಬೇಕು ಎಂದು ಹೇಳಿದೆ. ಲಸಿಕಾ ಅಭಿಯಾನ ಮತ್ತು ಆಧುನಿಕ ಔಷಧಿಗಳ ವಿರುದ್ಧ ಸ್ಮೀಯರ್ ಅಭಿಯಾನವನ್ನು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮನವಿಯ ಮೇಲೆ … Continued

ಬಾಲಿವುಡ್‌ನ ಈಗಿನ ಸ್ಥಿತಿಯನ್ನು ರಾಹುಲ್‌ ಗಾಂಧಿಗೆ ಹೋಲಿಸಿದ ನಟಿ ಸ್ವರಾ ಭಾಸ್ಕರ್

ಮುಂಬೈ: ಹಿಂದಿ ಸಿನೆಮಾಗಳು ಒಂದರ ಹಿಂದೆ ಒಂದು ಸೋಲು ಅನುಭವಿಸುತ್ತಿರುವ ಕುರಿತು ನಟಿ ಸ್ವರಾ ಭಾಸ್ಕರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ಕುಸಿತದ ಬಗ್ಗೆ ಮಾತನಾಡುವಾಗ ಬಾಲಿವುಡ್‌ನ  ಸದ್ಯದ ಸ್ಥಿತಿಯನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಹೋಲಿಸಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಚಾಟ್‌ನಲ್ಲಿ ಮಾತನಾಡಿದ ಸ್ವರಾ ಭಾಸ್ಕರ್‌ ಅವರು, ಬಾಲಿವುಡ್ ಚಿತ್ರಗಳು … Continued

ಗೋವು ಕಳ್ಳಸಾಗಣೆ ಪ್ರಕರಣ : ಟಿಎಂಸಿಯ ಅನುಬ್ರತ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲದಿದ್ದರೆ…’-ನ್ಯಾಯಾಧೀಶರಿಗೆ ಬಂತು ಬೆದರಿಕೆ ಪತ್ರ

ಅಸನ್ಸೋಲ್‌ (ಪಶ್ಚಿಮ ಬಂಗಾಳ) : ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಟಿಎಂಸಿ ನಾಯಕ ಅನುಬ್ರತ ಮೊಂಡಲ್ ಅವರನ್ನು ಬಿಡುಗಡೆ ಮಾಡದಿದ್ದರೆ ನ್ಯಾಯಾಧೀಶರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಡ್ರಗ್ಸ್‌ ಪ್ರಕರಣ ದಾಖಲಿಸಿ ಸಿಲುಕಿಸಲಾಗುವುದು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಗೆ ಬೆದರಿಕೆ ಹಾಕಲಾಗಿದೆ. ಮೊಂಡಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದಿದ್ದರೆ, ತಮ್ಮ ಕುಟುಂಬವನ್ನು … Continued

ಬಿಎಸ್‌ಎನ್‌ಎಲ್‌ ಕರ್ನಾಟಕ ವೃತ್ತಕ್ಕೆ 100 ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್, ಕರ್ನಾಟಕ ವೃತ್ತವು ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು bsnl.co.in ನಲ್ಲಿ ಬಿಎಸ್‌ಎನ್‌ಎಲ್‌ (BSNL)ನ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ಆಗಸ್ಟ್ 22 ರಂದು ಪ್ರಾರಂಭವಾಗಿದೆ ಮತ್ತು ಆಗಸ್ಟ್ 30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸಂಸ್ಥೆಯಲ್ಲಿ 100 ಹುದ್ದೆಗಳನ್ನು ಭರ್ತಿ … Continued

ವಿವಾದಕ್ಕೆ ಕಾರಣವಾಯ್ತು ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಸಿಎಂ ನಿತೀಶ್ ಜೊತೆ ಹಿಂದೂಯೇತರ ಸಚಿವರ ಪ್ರವೇಶ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಂದೂಯೇತರ ಸಚಿವರೊಂದಿಗೆ ವಿಷ್ಣುಪಾದ ದೇವಸ್ಥಾನಕ್ಕೆ ಪ್ರವೇಶಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನದಲ್ಲಿ ಹಿಂದೂಯೇತರ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಮತ್ತು ಕಳೆದ 100 ವರ್ಷಗಳಿಂದ ಈ ನಿಯಮ ಜಾರಿಯಲ್ಲಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಿಂದೂಯೇತರರಿಗೆ ಪ್ರವೇಶ ನಿಷಿದ್ಧ ಎಂಬ ಸಂದೇಶದ ಫಲಕಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, … Continued

ಪ್ರವಾದಿ ಹೇಳಿಕೆಗೆ ಸಂಬಂಧಿಸಿ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತು ಮಾಡಿದ ಬಿಜೆಪಿ

ಹೈದರಾಬಾದ್‌: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಅವರನ್ನು ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ ಉತ್ತರ ನೀಡಲು ಪಕ್ಷವು 10 ದಿನಗಳ ಕಾಲಾವಕಾಶ ನೀಡಿದೆ. ನೀವು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ, … Continued