ಶಿರಾಳಕೊಪ್ಪದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ, ಅಂಗಡಿಗಳು ಬಂದ್‌

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಕ್ಷುಲ್ಲಕ ಕಾರಣಕ್ಕೆ ಸೋಮವಾರ ಗಲಾಟೆ ನಡೆದು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದೆ. ವಲಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದ್ದು, ಇದು ಎರಡು ಕೋಮುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ. ಬಿಗುವಿನ ವಾತವರಣ ನಿರ್ಮಾಣವಾದ … Continued

ಅಮಿತ್ ಶಾಗೆ ಚಪ್ಪಲಿ ತಂದುಕೊಟ್ಟ ತೆಲಂಗಾಣ ಬಿಜೆಪಿ ಅಧ್ಯಕ್ಷ: ವೀಡಿಯೊ ಹಂಚಿಕೊಂಡು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಕೆಟಿಆರ್

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ   ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವಿಡಿಯೋ ವೈರಲ್ ಆಗಿದ್ದು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ … Continued

ಎರಡು ತಿಂಗಳಲ್ಲಿ ಪೌರಕಾರ್ಮಿಕರ ನೌಕರಿ ಕಾಯಂ: ಸಚಿವ ಕಾರಜೋಳ ಭರವಸೆ

ಮೈಸೂರು: ‘ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಿ ಸರ್ಕಾರಿ ನೌಕರರನ್ನಾಗಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಏರ್ಪಡಿಸಿದ್ದ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಾಗೃತಿ … Continued

ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುತ್ತಿದ್ದ ಉದ್ಯೋಗಾಕಾಂಕ್ಷಿಗೆ ದೊಣ್ಣೆಯಿಂದ ಬೇಕಾಬಿಟ್ಟಿ ಥಳಿಸಿದ ಅಧಿಕಾರಿ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ವಿಳಂಬವನ್ನು ವಿರೋಧಿಸಿ ನೂರಾರು ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪ್ರತಿಭಟನೆಯ ವೀಡಿಯೊ ವೈರಲ್ ಆಗಿದ್ದು, ಅಧಿಕಾರಿಯೊಬ್ಬರು ನೆಲದ ಮೇಲೆ ಮಲಗಿದ ಪ್ರತಿಭಟನಾಕಾರನನ್ನು ಥಳಿಸುತ್ತಿರುವುದನ್ನು ತೋರಿಸುತ್ತದೆ. ಪಾಟ್ನಾದ ದಕ್ ಬಾಂಗ್ಲಾ ಚೌರಾದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ವೀಡಿಯೊದಲ್ಲಿ, ಪಾಟ್ನಾದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಕೆ. ಸಿಂಗ್ … Continued

ಭಟ್ಕಳ: ಮೊಮ್ಮಗನನ್ನೇ ಅಪಹರಣ ಮಾಡಿಸಿದ್ದ ಅಜ್ಜ, ಗೋವಾದಲ್ಲಿ ಬಾಲಕನ ರಕ್ಷಿಸಿದ ಪೊಲೀಸರು

ಕಾರವಾರ: ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಸ್ಥಳೀಯ ನಿವಾಸಿ ಬಾಲಕನನ್ನು ಪೊಲೀಸರು ಗೋವಾದ ಕಲಂಗುಟ್ ಕಡಲತೀರದಲ್ಲಿ ಸೋಮವಾರ ಬೆಳಿಗ್ಗೆ ರಕ್ಷಿಸಿದ್ದು, ಹಣಕಾಸಿನ ವ್ಯವಹಾರದ ಸಂಬಂಧ ಬಾಲಕನ ಅಜ್ಜನೇ (ತಾಯಿಯ ಮಾವ) ಅಪಹರಣ ಮಾಡಿಸಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಆಜಾದ್‌ ನಗರದ ಎಂಟು ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿತ್ತು. … Continued

ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕೆ ಬಂದ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಹಾಲಿ ಸೊರಬದಲ್ಲಿ ವಾಸಿಸುತ್ತಿದ್ದ ಪೂರ್ಣಿಮಾ ಆಚಾರ್ಯ(38) ಸಾವಿಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಕೋಗಾರ … Continued

ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪುದುಚೇರಿ ಉಸ್ತುವಾರಿ ದಿನೇಶ್ ಗುಂಡೂರಾವ್‌ಗೆ ಘೇರಾವ್

ಪುದುಚೇರಿ : ಪುದುಚೇರಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರ ಕಾರಿಗೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ವಾಹನವನ್ನು ಹತ್ತದಂತೆ ತಡೆಯಲು ಯತ್ನಿಸಿದ ಘಟನೆ ನಡೆದಿದೆ. ಮಾಜಿ ಸಚಿವರೊಬ್ಬರನ್ನು ಬೆಂಬಲಿಸುವ ಬಣವೊಂದು ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಆರಂಭಿಸುತ್ತಿದ್ದಂತೆಯೇ ಪುದುಚೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಈ ದೃಶ್ಯ ಕಂಡುಬಂತು. ಪಕ್ಷದ … Continued

ವಿಜಯಪುರ: ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೊ ಪ್ರತ್ಯಕ್ಷ, ಅಂಟಿಸಿದ್ದು ನಾನೇ ಎಂದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

ವಿಜಯಪುರ: ವಿಜಯಪುರ ಜಿಲ್ಲೆಗೂ ಸಾವರ್ಕರ್ ವಿವಾದದ ಕಿಡಿ ವ್ಯಾಪಿಸಿದೆ. ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೊ ಅಂಟಿಸುವ ಮೂಲಕ ಜಿಲ್ಲೆಯಲ್ಲೂ ವಿವಾದ ತಾರಕಕ್ಕೆ ಏರುವಂತಾಗಿದೆ. ನಗರದ ಜಲನಗರ ಪರಿಸರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ವೀರಸಾವರ್ಕರ್ ಫೋಟೋ ಅಂಟಿಸಲಾಗಿದೆ. ಭಾನುವಾರ ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶ ದ್ವಾರ, ಕಿಟಕಿ ಹಾಗೂ ಗೋಡೆ ಸೇರಿದಂತೆ ವಿವಿಧ ಕಡೆಗಳ ಸಾವರ್ಕರ್ … Continued

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹೊಳಿಮಠ  (45) ಅವರು ಹೃದಯಾಘಾತದಿಂದ ಇಂದು ಸೋಮವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.  ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಗೃಹ ಸಚಿವರಾದಾಗಿಂದ ಅವರ … Continued

ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸ್ಟಾಫ್​ ಸೆಲೆಕ್ಷನ್​ ಕಮಿಷನ್; ದ್ವಿತೀಯ ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ … Continued