ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ”: ಪ್ರತಿ ಶಾಸಕರಿಗೂ 5 ಟಿಕೆಟ್ ನೀಡಿ ; ಶಾಸಕ ಕಾಶಪ್ಪನವರ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗಾಗಿ ಪ್ರತಿ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕರೊಬ್ಬರು ಒತ್ತಾಯಿಸಿದ್ದಾರೆ. ಶಾಸಕರು ವಿಐಪಿಗಳಾಗಿದ್ದು, ಅವರು “ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ಹುನಗುಂದ ಶಾಸಕ … Continued

ಕ್ಲಾಸ್​ ರೂಮಿನಲ್ಲೇ ವೈದ್ಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಏಟು ತಿಂದ ಪ್ರೊಫೆಸರ್

ಬೆಂಗಳೂರು : ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿ, ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ (Medical College) ನಡೆದಿದೆ ಎಂದು ವರದಿಯಾಗಿದೆ.  ಅಬ್ದುಲ್ ಎಂಬ ಸಹಾಯಕ ಪ್ರಾಧ್ಯಾಪಕರು ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾರೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು … Continued

1ನೇ ತರಗತಿ ದಾಖಲಾತಿ ; 6 ವರ್ಷ ಕಡ್ಡಾಯ ವಯೋಮಿತಿಗೆ ವಿನಾಯಿತಿ

ಬೆಂಗಳೂರು : ರಾಜ್ಯದಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸಲು ಅಗತ್ಯವಾಗಿರುವ ವಯಸ್ಸಿನ ಬಗ್ಗೆ ಮೂಡಿರುವ ಗೊಂದಲಕ್ಕೆ ಸರ್ಕಾರ ಸದ್ಯಕ್ಕೆ ನಿವಾರಿಸಿದೆ. 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ … Continued

ಅಬುಧಾಬಿ : ಕ್ಷಿಪಣಿ ಹೊಡೆದುರುಳಿಸಿದಾಗ ಅದರ ಭಾಗಗಳು ಬಿದ್ದು ಭಾರತೀಯ ಸಾವು

ಅಬುಧಾಬಿ : ಗುರುವಾರ ಅಬುಧಾಬಿಯ ಮೇಲೆ ಹಾರಿದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದ ನಂತರ ಅದರ ಅವಶೇಷಗಳು ಬಿದ್ದ ಪರಿಣಾಮ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಪಾಕಿಸ್ತಾನ ಮೂಲದ ಮತ್ತೊಬ್ಬ ವ್ಯಕ್ತಿ ಕೂಡ ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, ಮತ್ತೊಬ್ಬ ಭಾರತೀಯ ಸೇರಿದಂತೆ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಕ್ಷಿಪಣಿಯನ್ನು ತಡೆಯಲು ವಾಯು ರಕ್ಷಣಾ ವ್ಯವಸ್ಥೆಗಳನ್ನು … Continued

ಐಪಿಎಲ್ 2026 : 70 ಪಂದ್ಯಗಳ ಪೂರ್ಣ ವೇಳಾಪಟ್ಟಿ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಎರಡನೇ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ತಿಂಗಳ ಆರಂಭದಲ್ಲಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದೀಗ ಲೀಗ್ ಹಂತದ ಉಳಿದ 50 ಪಂದ್ಯಗಳ ವಿವರವನ್ನು ಬಿಸಿಸಿಐ ನೀಡಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿಯನ್ನು ನಂತರ ಪ್ರಕಟಿಸುವುದಾಗಿ ತಿಳಿಸಿದೆ. … Continued

ಪಶ್ಚಿಮ ಏಷ್ಯಾ ಸಂಘರ್ಷ : ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ದೇಶದ ಸಿದ್ಧತೆ ಮತ್ತು ಯೋಜನೆಗಳ ಕುರಿತು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ‘ಟೀಮ್ ಇಂಡಿಯಾ’ ಭಾವನೆಯೊಂದಿಗೆ ಎಲ್ಲರ ಪ್ರಯತ್ನಗಳನ್ನು ಸಂಯೋಜಿಸುವತ್ತ ಈ ಸಭೆಯು ಗಮನಹರಿಸಲಿದೆ. ಆದಾಗ್ಯೂ, … Continued

ಹಾರ್ಮುಜ್ ಜಲಸಂಧಿ ಬಂದ್ ಮಾಡಿದ್ದ ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಇಸ್ರೇಲ್ ದಾಳಿಯಲ್ಲಿ ಸಾವು ; ವರದಿ

ಜೆರುಸಲೆಮ್: ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರು ಪೋರ್ಟ್‌ ಅಬ್ಬಾಸ್‌ನಲ್ಲಿ ನಡೆದ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಹಾರ್ಮುಜ್ ಜಲಸಂಧಿಯ ಬಳಿ ಇರುವ ಪ್ರಮುಖ ಇರಾನಿನ ಬಂದರು ನಗರವಾದ ಪೋರ್ಟ್‌ ಅಬ್ಬಾಸ್‌ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯ … Continued

ವೀಡಿಯೊ : ಎಲ್ಲರೂ ನೋಡನೋಡುತ್ತಿದ್ದಂತೆ ನದಿಗೆ ಬಿದ್ದು ಮುಳುಗಿದ ಬಸ್ ; 24 ಪ್ರಯಾಣಿಕರು ಸಾವು

ಢಾಕಾ: ಬಾಂಗ್ಲಾದೇಶದ ರಾಜಬರಿ ಜಿಲ್ಲೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಬಸ್ಸೊಂದು ಫೆರ್ರಿ (ಸಾರಿಗೆ ದೋಣಿ) ಹತ್ತಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪದ್ಮಾ ನದಿಗೆ ಬಿದ್ದು ಮುಳುಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮಾರ್ಚ್ 25, ಬುಧವಾರ ಸಂಜೆ ಸುಮಾರು 5:15ರ ಸುಮಾರಿಗೆ ರಾಜಬರಿ … Continued

ಭಾರತಕ್ಕೆ ಇರಾನ್ ಅಭಯ: ಯುದ್ಧದ ನಡುವೆಯೂ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಜಗತ್ತಿನ ಅತಿ ದೊಡ್ಡ ತೈಲ ಸಾಗಾಣಿಕಾ ಮಾರ್ಗದಲ್ಲಿ ಒಂದಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಭಾರತದ ಹಡಗುಗಳ ಸಂಚಾರಕ್ಕೆ ಇಡುವುದಾಗಿ ಇರಾನ್ ಪ್ರಕಟಿಸಿದೆ. ಕಳೆದ ತಿಂಗಳು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಯುದ್ಧ ಸಾರಿದ ನಂತರ, ಇರಾನ್ ಈ … Continued

ಭೀಕರ ರಸ್ತೆ ಅಪಘಾತ : ಲಾರಿ-ಬಸ್ ಡಿಕ್ಕಿ, 14 ಪ್ರಯಾಣಿಕರು ಸಜೀವ ದಹನ, 23 ಮಂದಿಗೆ ಗಾಯ

ಅಮರಾವತಿ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಸಜೀವ ದಹನವಾಗಿದ್ದು, 23 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳಲ್ಲಿ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. … Continued