ಸೋನಿಯಾ ಗಾಂಧಿ ಪ್ರಶ್ನಿಸಿದ ಕೆಲವೇ ದಿನಗಳ ನಂತರ ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇ.ಡಿ ದಾಳಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ ಕೆಲವೇ ದಿನಗಳ ನಂತರ, ತನಿಖಾ ಸಂಸ್ಥೆ ಇಂದು, ಮಂಗಳವಾರ ದೆಹಲಿಯಲ್ಲಿ ಪತ್ರಿಕೆಯ ಕಚೇರಿಗಳು ಮತ್ತು ಅಸೋಸಿಯೇಟೆಡ್‌ಗೆ ಸಂಬಂಧಿಸಿದ ಹಲವಾರು ಸ್ಥಳಗಳು ಸೇರಿದಂತೆ ಸುಮಾರು 12 ಸ್ಥಳಗಳ ಮೇಲೆ ದಾಳಿ ನಡೆಸಿದೆ. ತನಿಖೆಯ … Continued

ಪ್ರವೀಣ ಹಂತಕರ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ. ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಹತ್ಯೆ ಪ್ರಕರಣದ ಸಂಬಂಧ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇವರ ಮೇಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪವಿದೆ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗುತ್ತಿದೆ. … Continued

ಮಾಜಿ ಸಿಎಂ ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಾಯ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಜಿಲ್ಲೆಯ ಕುಣಿಗಲ್ ತಾಲ್ಲೂಕು ತಿಪ್ಪೂರು ಗೇಟ್ ಬಳಿ ತಡರಾತ್ರಿ ಅಪಘಾತಕ್ಕೀಡಾಗಿದೆ. ವಾಹನದಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ರ್ಸತೆ ಆಚೆ ಬದಿಗೆ ನುಗ್ಗಿದೆ ಎಂದು … Continued

ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ಕಾಬೂಲಿನ ಸುರಕ್ಷಿತ ಮನೆಯಲ್ಲಿ ಜಗತ್ತಿನ ಮೋಸ್ಟ್‌ ವಾಂಟೆಡ್‌ ಉಗ್ರ ,ಅಲ್ ಖೈದಾ ಮುಖ್ಯಸ್ಥ ಜವಾಹಿರಿಯನ್ನು ಅಮೆರಿಕ ಕೊಂದಿದ್ದು ಹೇಗೆ..? ಕಾರ್ಯಾಚರಣೆ ಪೂರ್ಣ ವಿವರ ಇಲ್ಲಿದೆ

ವಾಷಿಂಗ್ಟನ್: ವಾರಾಂತ್ಯದಲ್ಲಿ ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿದ ದಾಳಿಯಲ್ಲಿ ಜಗತ್ತಿನ ಮೋಸ್ಟ್‌ ವಾಂಟೆಡ್‌ ಉಗ್ರ, ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ ಹತನಾಗಿದ್ದಾನೆ. 2011ರಲ್ಲಿ ಅದರ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ ಹತ್ಯೆಯಾದ ನಂತರ ಅಲ್ ಖೈದಾ ಉಗ್ರಗಾಮಿ ಸಂಘಟನೆ ಮುಖ್ಯಸ್ಥನನ್ನು ಹೊಡೆದುರುಳಿಸಿದೆ. ಜವಾಹಿರಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆ ಹಚ್ಚಿ ಕೊಲ್ಲುವ ಕಾರ್ಯಾಚರಣೆ ಭಯೋತ್ಪಾದನೆ … Continued

ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರ ಅಲ್‌ಕೈದಾ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದಲ್ಲಿ ಹತ್ಯೆ ಮಾಡಿದ ಅಮೆರಿಕ:ಬೈಡನ್‌ ಘೋಷಣೆ

ವಾಷಿಂಗ್ಟನ್‌: ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ. ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್‌ ಝವಾಹಿರಿ, 2001ರ ಸೆಪ್ಟೆಂಬರ್‌ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದ. ಸುದ್ದಿ ವಾಹಿನಿಯಲ್ಲಿ … Continued

ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಗುಡ್ಡವೊಂದು ಮನೆಯ ಮೇಲೇ ಕುಸಿದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ದುರಂತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬ್ರಹ್ಮಣ್ಯ ಕುಮಾರಧಾರದ ಸ್ನಾನಘಟ್ಟದ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾಾರಿಯ ಪರ್ವತಮುಖಿ ಎಂಬಲ್ಲಿ ದುರಂತ ಸಂಭವಿಸಿದ್ದು, ಕುಸುಮಾಧರ – ರೂಪಾಶ್ರೀ ದಂಪತಿಯ ಮಕ್ಕಳಾದ ಶ್ರುತಿ … Continued

ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಭೇಟಿ ಸಾಧ್ಯತೆ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಮಿತ್ ಶಾ ಅವರು ಆಗಸ್ಟ್ 3 ಹಾಗೂ 4ರಂದು ಕರ್ನಾಟಕಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಇಂದು ಮಂಗಳವಾರ ಸಂಜೆಯೊಳಗೆ ಅಮಿತ್ ಶಾ ಅವರ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದಕ್ಷಿಣ … Continued

ಆನೆ vs ಹಲಸಿನ ಹಣ್ಣು : ಎರಡೇ ಕಾಲಲ್ಲಿ ನಿಂತು ಹಲಸಿನ ಕಾಯಿ ಗೊಂಚಲನ್ನೇ ಕೀಳುವ ಆನೆಯ ಸಾಹಸ ನೋಡಿದ್ದೀರಾ | ವೀಕ್ಷಿಸಿ

ಆನೆಗಳಿಗೆ ಸಂಬಂಧಪಟ್ಟ ವೀಡಿಯೊಗಳು ಸಾಮಾನ್ಯವಾಗಿ ನೋಡಲು ಮುದ ನೀಡುತ್ತವೆ ಮತ್ತು ವೀಕ್ಷಿಸಲು ಆನಂದದಾಯಕವಾಗಿರುತ್ತವೆ.ಮಣ್ಣಿನ ಸ್ನಾನ ಮಾಡುವುದರಿಂದ ಹಿಡಿದು ಇಳಿಜಾರುಗಳಲ್ಲಿ ಜಾರುವ ವರೆಗೆ, ಅಂತಹ ಅದ್ಭುತ ವೀಡಿಯೊಗಳಿಂದ ಇಂಟರ್ನೆಟ್ ತುಂಬಿದೆ. ಏತನ್ಮಧ್ಯೆ, ಸ್ಥಳೀಯರ ಪ್ರೋತ್ಸಾಹದಿಂದ ಆನೆಯೊಂದು ಮರದಿಂದ ಹಲಸು ಕೀಳಲು ಹೆಣಗಾಡುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಸುಪ್ರಿಯಾ ಸಾಹು ಅವರು ಹಂಚಿಕೊಂಡ 30 … Continued

ಕಾಮನ್‌ವೆಲ್ತ್ ಗೇಮ್ಸ್‌ -2022 : ಮಹಿಳೆಯರ 48 ಕೆಜಿ ವಿಭಾಗ ಜುಡೊದಲ್ಲಿ 2ನೇ ಬೆಳ್ಳಿ ಗೆದ್ದ ಶುಶೀಲಾ ದೇವಿ

ಸೋಮವಾರ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌- 2022 ರಲ್ಲಿ ಮಹಿಳೆಯರ ಜುಡೊ 48 ಕೆಜಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಮೈಕೆಲಾ ವೈಟ್‌ಬೂಯಿ ವಿರುದ್ಧ ಸೋತ ನಂತರ ಜೂಡೋಕಾ ಶುಶೀಲಾ ದೇವಿ ಲಿಕ್ಮಾಬಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ತನ್ನ ಎರಡನೇ ಬೆಳ್ಳಿ ಗೆದ್ದರು. ಪಂದ್ಯವು 4 ನಿಮಿಷಗಳ ಅಂತ್ಯದಲ್ಲಿ 0-0 ಆಗಿ ಉಳಿದ ನಂತರ ಗೋಲ್ಡನ್ ಪಾಯಿಂಟ್‌ಗೆ ಹೋಯಿತು. ಚಿನ್ನದ … Continued