ಬೆಂಗಳೂರಿನ ತಿಲಕ ​ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಲಷ್ಕರ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಿದ್ದ. ಶಂಕಿತ ಉಗ್ರನ … Continued

ಬಂಧನದ ನಂತರ ಮಮತಾ ಬ್ಯಾನರ್ಜಿಗೆ 4 ಬಾರಿ ಡಯಲ್ ಮಾಡಿದ ಸಚಿವ ಪಾರ್ಥ ಚಟರ್ಜಿ: ಬಂದ ಉತ್ತರ… ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ

ನವದೆಹಲಿ: ಶನಿವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನಾಲ್ಕು ಬಾರಿ ಕರೆ ಮಾಡಿದರೂ ಮಮತಾ ಅವರು ಅದಕ್ಕೆ ಉತ್ತರಿಸಲಿಲ್ಲ ಎಂದು ಇಂಡಿಯಾ ಟುಡೇ.ಇನ್‌ ವರದಿ ಮಾಡಿದೆ. ಪ್ರಕ್ರಿಯೆಯ ಪ್ರಕಾರ, ಒಬ್ಬ ವ್ಯಕ್ತಿಯನ್ನು ಬಂಧಿಸಿದಾಗ, ಅವನು/ಅವಳು ಕುಟುಂಬದ ಸದಸ್ಯರು ಅಥವಾ ಸಂಬಂಧಿಕರು … Continued

ಭಾರತದ ಕಿರಿಯ ವಯಸ್ಸಿನ, ಬುಡಕಟ್ಟು ಸಮುದಾಯದ ಮೊದಲ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು, ಸೋಮವಾರ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದ್ರೌಪದಿ ಮುರ್ಮು ಅವರ ಪ್ರಮಾಣ ವಚನ: ಸಮಯ, … Continued

ಪಾರ್ಥ ಚಟರ್ಜಿಯನ್ನು ಭುವನೇಶ್ವರದ ಏಮ್ಸ್‌ಗೆ ಶಿಫ್ಟ್ ಮಾಡಿ: ಕೋಲ್ಕತ್ತಾ ಹೈಕೋರ್ಟ್‌ ಆದೇಶ, ಮಮತಾ ಸಚಿವರಿಗೆ ಹಿನ್ನಡೆ

ಕೋಲ್ಕತ್ತಾ: ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಏರ್ ಆಂಬುಲೆನ್ಸ್ ಮೂಲಕ ನಾಳೆ, ಸೋಮವಾರ (ಜುಲೈ ೨೬) ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ. ಆಡಳಿತ ಪಕ್ಷಕ್ಕೆ ಸೇರಿದ ರಾಜಕೀಯ ನಾಯಕರು ಈ ಹಿಂದೆ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಆಶ್ರಯ ಪಡೆಯುವ ಮೂಲಕ … Continued

ಅಕ್ಷಯಕುಮಾರ್ ಮತ್ತೊಮ್ಮೆ ದೇಶದ ಅತಿ ಹೆಚ್ಚು ತೆರಿಗೆ ಪಾವತಿದಾರ: ಆದಾಯ ತೆರಿಗೆ ಇಲಾಖೆಯಿಂದ ಪ್ರಮಾಣಪತ್ರ

ಮುಂಬೈ: ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ತಾರೆಗಳಲ್ಲಿ ಒಬ್ಬರಾದ ನಟ ಅಕ್ಷಯ್ ಕುಮಾರ್ ಅವರನ್ನು ಆದಾಯ ತೆರಿಗೆ ಇಲಾಖೆಯು ಮತ್ತೆ ದೇಶದ ‘ಅತಿ ಹೆಚ್ಚು ತೆರಿಗೆ ಪಾವತಿದಾರ’ ಎಂದು ಗೌರವಿಸಿದೆ ಎಂದು ವರದಿಯಾಗಿದೆ. ಆದಾಯ ತೆರಿಗೆ ಇಲಾಖೆಯಿಂದ ಅಕ್ಷಯ್ ಕುಮಾರ್ ಅವರಿಗೆ ನೀಡಿದ ಗೌರವ ಪ್ರಮಾಣಪತ್ರ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವೀಟ್ … Continued

ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ಮೌನ ಧರಣಿ: ಡಿಕೆಶಿ

ಬೆಂಗಳೂರು : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಂಗ್ರೆಸಿಗರು ಮೌನ ಧರಣಿ ನಡೆಸಲಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ಜುಲೈ 26ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ … Continued

ಉದ್ಯಮ ವಾತಾವರಣ ವರ್ಧಿಸುವುದು, ಜನಕಲ್ಯಾಣ ಯೋಜನೆಗಳು ಜನರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಿ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಭಾನುವಾರ ಮ್ಯಾರಥಾನ್ ಸಭೆ ನಡೆಸಿದರು ಮತ್ತು ಕಲ್ಯಾಣ ಯೋಜನೆಗಳ ಸ್ಯಾಚುರೇಶನ್-ಲೆವೆಲ್ ಕವರೇಜ್ ಅನ್ನು ಖಚಿತಪಡಿಸಿಕೊಳ್ಳಲು ಮತ್ತು ದೇಶದಲ್ಲಿ ಉದ್ಯಮ ಸ್ನೇಹಿ  ವಾತಾವರಣವನ್ನು ವರ್ಧಿಸಲು ಕೇಳಿಕೊಂಡರು. ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ 18 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು … Continued

ಉತ್ತರ ಕನ್ನಡಕ್ಕೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು: ಜನರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿದ್ದರಾಮಯ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನಂತರ ಈಗ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ … Continued

ರಸ್ತೆಯಲ್ಲಿ ಸಿಕ್ಕಿದ 45 ಲಕ್ಷ ರೂ.ಗಳನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಛತ್ತೀಸ್‌ಗಢ ಪೊಲೀಸ್‌…!

ರಾಯ್‌ಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಸಂಚಾರಿ ಪೊಲೀಸ್‌ ಸಿಬ್ಬಂದಿಯೊಬ್ಬರು ತನಗೆ ರಸ್ತೆಯಲ್ಲಿ ಸಿಕ್ಕಿದ 45 ಲಕ್ಷ ರೂ.ಗಳಿದ್ದ ಬ್ಯಾಗನ್ನು ಸ್ಥಳೀಯ ಪೊಲೀಸ್‌ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವ ರಾಯ್‌ಪುರದ ಕಯಾಬಂಧ ಪೋಸ್ಟ್‌ಗೆ ಲಗತ್ತಿಸಲಾದ ಟ್ರಾಫಿಕ್ ಕಾನ್‌ಸ್ಟೆಬಲ್ ನೀಲಂಬರ್ ಸಿನ್ಹಾ ಅವರಿಗೆ ಬೆಳಿಗ್ಗೆ ಮಾನಾ ಪೊಲೀಸ್ ಠಾಣಾ ವ್ಯಾಪ್ತಿಯ … Continued

ಕುಮಟಾ ಆಸುಪಾಸು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಬಲ ಬಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಈಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಉತ್ತರ … Continued