ಟ್ರಾಯ್‌ ಯೋಜನೆಯಡಿ 5ಜಿ ನೆಟ್​​ವರ್ಕ್ ಪರೀಕ್ಷಿಸಿದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಂಗಳೂರು ಮೆಟ್ರೊ

ಬೆಂಗಳೂರು: ಭಾರತದಲ್ಲಿ 5G ಪರೀಕ್ಷೆಯು ಪೂರ್ಣ ಸ್ವಿಂಗ್‌ನಲ್ಲಿದೆ ಎಂದು ತೋರುತ್ತಿದೆ. ಜಿಯೋ (Jio) ಮತ್ತು ಏರ್‌ಟೆಲ್‌ (Airtel) ನಂತಹ ಕಂಪನಿಗಳು 2022 ರ ಅಂತ್ಯದ ವೇಳೆಗೆ ಭಾರತದಲ್ಲಿ 5G ನೆಟ್‌ವರ್ಕ್ ಅನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಇದೀಗ ಟ್ರಾಯ್ (TRAI) ಪ್ರಾಯೋಗಿಕ ಯೋಜನೆಯಡಿಯಲ್ಲಿ 5 ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಬೆಂಗಳೂರು … Continued

ಸುಪ್ರೀಂಕೋರ್ಟ್‌ನಿಂದ ಯಡಿಯೂರಪ್ಪಗೆ ರಿಲೀಫ್

ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಬಿಜೆಪಿಯ ಹಿರಿಯ ನಾಯಕ 2006-07ರಲ್ಲಿ ಅವರು … Continued

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ: ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡ ಅಜಯ್ ದೇವಗನ್, ಸೂರ್ಯ

ನವದೆಹಲಿ: ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ಪಾತ್ರಗಳಿಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ. ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ ಗೋಪಿನಾಥ್ ಅವರ ಜೀವನದಲ್ಲಿ ನಡೆದ ಘಟನೆಗಳನ್ನು ಆಧರಿಸಿದ ಸೂರರೈ ಪೊಟ್ರು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ … Continued

ಚುಂಬನದ ವೀಡಿಯೊ ವೈರಲ್‌ ಆದ ನಂತರ 8 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಮಂಗಳೂರಿನಲ್ಲಿ ಎಂಟು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಮಂಗಳೂರಿನಲ್ಲಿ ಎಂಟು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಲೇಜಿನ ಎಂಟು ಹದಿಹರೆಯದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ವೀಡಿಯೊವನ್ನು ಆರು ತಿಂಗಳ ಹಿಂದೆ ಚಿತ್ರೀಕರಿಸಲಾಗಿದ್ದು, ಇತ್ತೀಚೆಗೆ … Continued

ಪುತ್ರನಿಗಾಗಿ ತನ್ನ ರಾಜಕೀಯ ಕರ್ಮಭೂಮಿ ಬಿಟ್ಟುಕೊಡುವ ಮಹತ್ವದ ಘೋಷಣೆ ಮಾಡಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ ಅವರು  ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ ಹಾಗೂ ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ … Continued

ದ್ರೌಪದಿ ಮುರ್ಮು ವಿಜಯದ ಅಂತರ ಹೆಚ್ಚಿಸಿದ ವಿರೋಧ ಪಕ್ಷಗಳ ಅಡ್ಡ-ಮತದಾನ: ಯಾವ ರಾಜ್ಯದಲ್ಲಿ ಎಷ್ಟು ಅಡ್ಡ ಮತದಾನ ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಲಿರುವ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರ ಪರವಾಗಿ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ಶಾಸಕರು ಹಾಗೂ ಸಂಸದರು ಅಡ್ಡ ಮತದಾನ ಮಾಡಿದ್ದಾರೆ..! ಮೂಲಗಳ ಪ್ರಕಾರ ದ್ರೌಪದಿ ಮುರ್ಮು ಅವರ ಬೆಂಬಲಕ್ಕೆ ಪ್ರತಿಪಕ್ಷಗಳ ಸುಮಾರು 125 ಶಾಸಕರು ಮತ್ತು 17 ಸಂಸದರು ಅಡ್ಡ ಮತದಾನ ಮಾಡಿದ್ದಾರೆ. ಚುನಾವಣೆಯಲ್ಲಿ … Continued

ಕನ್ವರ್ ಯಾತ್ರೆಗೆ ತಂದೆ-ತಾಯಿಯನ್ನು ಹೆಗಲ ಮೇಲೆ ಹೊತ್ತು ಹೊರಟಿರುವ ಆಧುನಿಕ ಶ್ರವಣ ಕುಮಾರ | ವೀಕ್ಷಿಸಿ

ತೀರ್ಥಯಾತ್ರೆಗೆ ಹೋಗಬೇಕೆಂದು ಬಯಸಿದ್ದ ತಂದೆ ತಾಯಿಯನ್ನು ಬುಟ್ಟಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತು ಸಾಗಿದ ಶ್ರವಣ ಕುಮಾರನ ಕಥೆ ಕೇಳಿದ್ದೇವೆ. ಈಗಲೂ ಇಂತಹ ಶ್ರವಣ ಕುಮಾರ ಇದ್ದಾನೆ ಎಂದರೆ… ತನ್ನ ವಯಸ್ಸಾದ ತಂದೆ ತಾಯಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆಹೊತ್ತುಕೊಂಡು ಕನ್ವರ್ ಯಾತ್ರೆಗೆ ಹೋಗುತ್ತಿರುವ ವೀಡಿಯೋ ವೈರಲ್ ಆಗಿದೆ. ಕೊರೋನಾ ಹಿನ್ನೆಲೆ ಎರಡು ವರ್ಷಗಳಿಂದ ಉತ್ತರಾಖಂಡದ … Continued

ಬಾಬರಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿದಂತೆ 32 ಆರೋಪಿಗಳ ಖುಲಾಸೆ ಪ್ರಶ್ನಿಸಿದ ಅರ್ಜಿ ಅಲಹಾಬಾದ್ ಹೈಕೋರ್ಟಿನಲ್ಲಿ ಆಗಸ್ಟ್ 1ರಂದು ವಿಚಾರಣೆ

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್‌ ಕೆ ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಅಲಾಹಾಬಾದ್‌ ಹೈಕೋರ್ಟ್‌ ಆಗಸ್ಟ್‌ 1ರಂದು ನಡೆಸಲಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌, ಬಿಜೆಪಿ ನಾಯಕರಾದ ಮುರುಳಿ ಮನೋಹರ್‌ … Continued

ಕಾಂಗ್ರೆಸಿಗರು ತಲೆಮಾರಿಗೆ ಆಗುವಷ್ಟು ಅಕ್ರಮ ಸಂಪಾದನೆ ಮಾಡಿದ್ದು ಸತ್ಯವಲ್ಲವೇ?: ರಮೇಶಕುಮಾರ ಹೇಳಿಕೆ ಮುಂದಿಟ್ಟು ಕಾಂಗ್ರೆಸ್‌ ಕುಟುಕಿದ ಬಿಜೆಪಿ

ಬೆಂಗಳೂರು : ಮಾಜಿ ಸ್ಪೀಕರ್ ರಮೇಶಕುಮಾರ ಅವರು ಗುರುವಾರ ಕಾಂಗ್ರೆಸ್‌ ಪ್ರತಿಭಟನಾ ಸಭೆಯಲ್ಲಿ ನೀಡಿದ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್‌ ಅನ್ನು ಕುಟುಕಿದೆ. ನೆಹರು, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಹೆಸರಿನಲ್ಲಿ ನಾವು ಮೂರ್ನಾಲ್ಕು ತಲೆಮಾರುಗಳಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ, ಈಗ ಅದರ ಋಣ ತೀರಿಸಬೇಕಿದೆ ಎಂದು ಹೇಳಿದ್ದು, ಅವರು ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ. ರಮೇಶಕುಮಾರ್ … Continued

ಬೆಳಗಾವಿ: ಪ್ರಿಯತಮೆ ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಬೆಳಗಾವಿ: ನಗರದ ಬಸವ ಕಾಲೊನಿಯಲ್ಲಿ ಗುರುವಾರ ರಾತ್ರಿ ಕತ್ತು ಬಿಗಿದು ಪ್ರೇಯಸಿ ಕೊಲೆ ಮಾಡಿದ ಯುವಕ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ವರದಿಯಾಗಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ನಿವಾಸಿ ರಾಮಚಂದ್ರ ತೆಣಗಿ (27) ಹಾಗೂ ಯರಗಟ್ಟಿ ತಾಲೂಕಿನ ಮದ್ಲೂರು ಮೂಲದ ರೇಣುಕಾ ಪಚ್ಚಣ್ಣವರ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರೇಣುಕಾ ಅವರ … Continued