ನೆಹರು- ಗಾಂಧಿ ಕುಟುಂಬದ ಹೆಸರಲ್ಲಿ ಮೂರು ತಲೆಮಾರಿಗಾಗುವಷ್ಟು ಹಣ ಮಾಡಿಕೊಂಡಿದ್ದೇವೆ: ಮತ್ತೆ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ರಮೇಶಕುಮಾರ ಹೇಳಿಕೆ…!

ಬೆಂಗಳೂರು: ಕಳೆದ ವರ್ಷ ಅಸೆಂಬ್ಲಿಯಲ್ಲಿ ಅತ್ಯಾಚಾರದ ಕುರಿತಾದ ಹೇಳಿಕೆಗಾಗಿ ಭಾರೀ ದೇಶಾದ್ಯಂತ ಭಾರೀ ಟೀಕೆಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸ್ಪೀಕರ್‌ ರಮೇಶ್ ಕುಮಾರ್, ಇಂದು ಗುರುವಾರ ನೆಹರು-ಗಾಂಧಿ ಕುಟುಂಬದ ಬಗ್ಗೆ ಮಾಡಿದ ಹೇಳಿಕೆಗಳ ನಂತರ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ಮಾತನಾಡುವ ಭರಾಟೆಯಲ್ಲಿ ಕಾಂಗ್ರೆಸ್ ನಾಯಕರು ಗಾಂಧಿ ಹೆಸರಿನಲ್ಲಿ ಸಾಕಷ್ಟು ಹಣ ಮಾಡಿದ್ದಾರೆ ಎಂದು … Continued

ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿ : 3ನೇ ಸುತ್ತಿನ ಮತ ಎಣಿಕೆಯಲ್ಲೇ ಗೆಲುವಿನ ನಂಬರ್‌ ದಾಟಿದ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ( (64) ಮೂರನೇ ಸುತ್ತಿನ ನಂತರ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಅವರು ಮೂರನೇ ಸುತ್ತು ಮುಕ್ತಾಯ ವೇಳೆಗೆ ಅವರು 5,77,777 ಮತಗಳನ್ನು ಪಡೆದಿದ್ದಾರೆ. ಗೆಲ್ಲಲು 5.2 ಲಕ್ಷ ಮತಗಳ ಅಗತ್ಯವಿತ್ತು. ಈಗಾಗಲೇ ಅವರು ನಿಗದಿತ ಸಂಖ್ಯೆಯನ್ನು ದಾಟಿದ್ದು, … Continued

ಮೈ ಜುಂ ಎನ್ನುವ ಅಪಘಾತದಲ್ಲಿ ಬಸ್‌ ಕೆಳಗೆ ಬಿದ್ದು ಚಕ್ರದಡಿ ತಲೆ ಸಿಲುಕಿದರೂ ಪವಾಡ ಸದೃಶವಾಗಿ ಬದುಕುಳಿದ ವ್ಯಕ್ತಿ…ಕಾರಣ ಹೆಲ್ಮೆಟ್‌ | ವೀಕ್ಷಿಸಿ

ಸುರಕ್ಷತೆಯ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲು ಸಂಚಾರ ಅಧಿಕಾರಿಗಳು ಎಚ್ಚರಿಕೆಯ ಪೋಸ್ಟ್‌ಗಳು ಮತ್ತು ವೀಡಿಯೊಗಳನ್ನು ಆಗಾಗ ಹಂಚಿಕೊಳ್ಳುತ್ತಾರೆ. ಈ ಯಾವುದೇ ಸೂಚನೆಗಳನ್ನು ಪಾಲಿಸದ ಜನರಿದ್ದರೂ, ನಿಯಮಗಳು ಮತ್ತು ಸಲಹೆಗಳನ್ನು ಪಾಲಿಸುವವರೂ ಇದ್ದಾರೆ. ನಿಯಮಗಳನ್ನು ಅನುಸರಿಸಿ ಇತ್ತೀಚೆಗೆ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬ ತನ್ನ ಜೀವ ಉಳಿಸಿಕೊಂಡ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದೆ. ಬೆಂಗಳೂರಿನ ಟ್ರಾಫಿಕ್ ಪೊಲೀಸ್ … Continued

ಮಳೆಗೆ ಅಪಾರ್ಟ್​ಮೆಂಟ್ ಕಂಪೌಂಡ್‌ ಗೋಡೆ ಕುಸಿದು ನಾಲ್ವರ ದುರ್ಮರಣ

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್​ಮೆಂಟ್​ ತಡೆಗೋಡೆ ತಡರಾತ್ರಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಕಾಂಪೌಂಡ್​ ಕೂಲಿ ಕಾರ್ಮಿಕರು ಮಲಗಿದ್ದ ಶೆಡ್ ಮೇಲೆಯೇ ಗೋಡೆ ಕುಸಿದು ಬಿದ್ದಿದೆ. ಉತ್ತರ ಭಾರತ ಮೂಲದ … Continued

ಕಾಂಗ್ರೆಸ್‌ ದೊಡ್ಡ ಶಾಕ್‌ ನೀಡಿದ ಮಮತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯಲು ಟಿಎಂಸಿ ನಿರ್ಧಾರ…!

ಕೋಲ್ಕತ್ತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೃಣಮೂಲ್‌ ಕಾಂಗ್ರೆಸ್‌ ಮತದಾನದಿಂದ ದೂರ ಉಳಿಯಲು ನಿರ್ಧರಿಸುವ ಮೂಲಕ ಕಾಂಗ್ರೆಸ್‌ಗೆ ಅಚ್ಚರಿಯ ಶಾಕ್‌ ನೀಡಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಕಣದಲ್ಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಸಂಸದರೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಮತಾ ಬ್ಯಾನರ್ಜಿ … Continued

ಜ್ಞಾನವಾಪಿ ಮಸೀದಿ ಅರ್ಜಿ: ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವರೆಗೆ ಕಾಯುವುದಾಗಿ ತಿಳಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾಶಿ ವಿಶ್ವನಾಥ ದೇಗುಲ-ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ, ದಾವೆಯ ನಿರ್ವಹಣೆಯ ಕುರಿತು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕಾಗಿ ಕಾಯುವುದಾಗಿ ಹೇಳಿದೆ. ಹಾಗೂ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ ಮೊದಲ ವಾರಕ್ಕೆ ಮುಂದೂಡಿದೆ. ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಶೃಂಗಾರ್ ಗೌರಿ … Continued

ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ರುಂಡದೊಂದಿಗೆ ಠಾಣೆಗೆ ಬಂದ ಪಾಗಲ್ ಪ್ರೇಮಿ…!

ಬಳ್ಳಾರಿ: ಪಾಗಲ್ ಪ್ರೇಮಿಯೊಬ್ಬ ತನ್ನ ಮಾಜಿ ಪ್ರೇಯಸಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ನಿರ್ಮಲಾ(23) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಬೋಜರಾಜ ಎಂದು ಗುರುತಿಸಲಾಗಿದೆ. ಬಿಎಸ್‍ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆ ಇದ್ದ ಹಿನ್ನೆಲೆ … Continued

ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಎಣಿಕೆ ನಂತರ ಭರ್ಜರಿ ಗೆಲುವಿನತ್ತ ದ್ರೌಪದಿ ಮುರ್ಮು ದಾಪುಗಾಲು

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರಿಗಿಂತ ಭಾರೀ ಅಂತರದ ಮುನ್ನಡೆ ಸಾಧಿಸಿದ್ದಾರೆ. . ಟ್ರೆಂಡ್‌ ನೀಡಿದರೆ ಅವರು ಭರ್ಜರಿ ಗೆಲುವು ಸಾಧಿಸುವ ಲಕ್ಷಣಗಳು ಕಾಣುತ್ತಿದ್ದು, ಆಯ್ಕೆಯಾದರೆ ಅವರು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗಲಿದ್ದಾರೆ. ಮೊದಲು ಸಂಸದರ ಮತ ಎಣಿಕೆಯಾದಾಗ ಎನ್‌ಡಿಎಯ ದ್ರೌಪದಿ … Continued

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಾ. ವೀರೇಂದ್ರ ಹೆಗ್ಗಡೆ

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರಕಾರದಿಂದ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಇಂದು, ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ … Continued

ಉತ್ತರ ಪ್ರದೇಶ ಸರ್ಕಾರಕ್ಕೆ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿ ದಾನ ಮಾಡಿದ ಮೊರಾದಾಬಾದ್ ವೈದ್ಯರು…!

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನ ವೈದ್ಯರಾದ ಅರವಿಂದಕುಮಾರ್‌ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ…! ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 600 ಕೋಟಿ ರೂ.ಗಳಾಗಿವೆ. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಆಸ್ತಿಯನ್ನು ದಾನ ಮಾಡಿದ ನಂತರ ಅವರು, ಸುಮಾರು 25 … Continued