ಗಾಯಕ ಸಿಧು ಮೂಸ್ ವಾಲಾ ಹತ್ಯೆ: ಅಮೃತಸರ ಬಳಿ ಪೊಲೀಸರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಶಂಕಿತ ಶೂಟರ್‌ಗಳ ಹತ್ಯೆ

ಚಂಡೀಗಡ: ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಆರೋಪಿ ಶೂಟರ್‌ಗಳ ಪೈಕಿ ಇಬ್ಬರು ಶೂಟರ್‌ಗಳು ಇಂದು, ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ. ಈ ವೇಳೆ ಮೂವರು ಪೊಲೀಸರಿಗೂ ಗಾಯಗಳಾಗಿವೆ. ಜಗ್ರೂಪ್ ಸಿಂಗ್ ರೂಪಾ ಮೊದಲು ಕೊಲ್ಲಲ್ಪಟ್ಟರೆ, ಮತ್ತೊಬ್ಬ ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಹತನಾಗುವ ಮೊದಲು ಸುಮಾರು ಒಂದು … Continued

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ಎಲ್ಲ ಪ್ರಕರಣಗಳಲ್ಲಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅವರನ್ನು ತಕ್ಷಣ ಕಸ್ಟಡಿಯಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಜುಬೇರ್ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸ್ ವಿಶೇಷ ಸೆಲ್‌ಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ, ಇದು ಅವರು 2018 ರಲ್ಲಿ ಹಿಂದೂ … Continued

ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ, ಇತರ ಇಬ್ಬರ ವಿರುದ್ಧ ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡದ  ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ  ಹಾಗೂ ಇತರ ಇಬ್ಬರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶ್ರೀನಿವಾಸ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು … Continued

ಮೇಕೆದಾಟು ಯೋಜನೆ: ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಮೇಕೆದಾಟು ಅಣೆಕಟ್ಟು ಸಮಗ್ರ ಯೋಜನಾ ವರದಿ (ಡಿಪಿಆರ್) ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ಇಂದು, ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಜುಲೈ 26ರಂದು ವಿಸ್ತೃತ ವಿಚಾರಣೆ … Continued

ಹಿಜಾಬ್ ವಿವಾದದ ಬೆನ್ನಲ್ಲೇ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು

ಮಂಗಳೂರು: ಹಿಜಾಬ್ ವಿವಾದದ  ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ ಎಂದು ವರದಿಯಾಗಿದೆ. ಶಾಲಾ-ಕಾಲೇಜು ಮಾಡಿರುವ ನಿಯಮಗಳ ಅನ್ವಯ ಸಮವಸ್ತ್ರ ಧರಿಸುವುದು ಕಡ್ಡಾಯ, ಯಾವುದೇ ಧಾರ್ಮಿಕ ವಸ್ತ್ರಗಳಿಗೆ ಅವಕಾಶ ಇಲ್ಲ ಎಂದು ಸರ್ಕಾರ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದ ನಂತರ ಹಲವು ವಿದ್ಯಾರ್ಥಿನಿಯರು … Continued

ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆ

ಕೊಲಂಬೊ: ತತ್ತರಿಸುತ್ತಿರುವ ಭಾರೀ ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಅವರು ಇಂದು, ಬುಧವಾರ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಸಂಸತ್ತಿನ ಮತದಾನದಲ್ಲಿ ಅವರು 219ರಲ್ಲಿ 134 ಮತಗಳನ್ನು ಪಡೆಯುವ ಮೂಲಕ ಪಕ್ಷದ ಪ್ರತಿಸ್ಪರ್ಧಿ ದಲ್ಲಸ್ ಅಲಹಪ್ಪೆರುಮ ಅವರನ್ನು ಸೋಲಿಸಿದರು. ದೇಶದಲ್ಲಿ ವ್ಯಾಪಕ ಪ್ರತಿಭಟನೆಗಳ ನಂತರ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸೆ … Continued

ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಜುಲೈ 25ರಿಂದ ಆರಂಭ, ಇಲ್ಲಿದೆ ವೇಳಾಪಟ್ಟಿ

ಶಿವಮೊಗ್ಗ: ಕೋವಿಡ್‌ ಎರಡನೇ ಅಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಇದೇ ಜುಲೈ 25ರಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುವ ರೈಲು, ರಾತ್ರಿ 11:30ಕ್ಕೆ ತಾಳಗುಪ್ಪ ತಲುಪುತ್ತದೆ. ಇನ್ನು ಮಾರನೇ ದಿನ ಬೆಳಿಗ್ಗೆ 6:10ಕ್ಕೆ ತಾಳಗುಪ್ಪದಿಂದ ಹೊರಡುವ ರೈಲು, ಮಧ್ಯಾಹ್ನ 3.35 … Continued

ಹುಬ್ಬಳ್ಳಿ-ಧಾರವಾಡ, ಹಾವೇರಿ, ಮಂಗಳೂರು ಸೇರಿದಂತೆ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನೇಮಕಾತಿ ರದ್ದು ಮಾಡಿದ ಸರ್ಕಾರ

ಬೆಂಗಳೂರು : ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಈಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದು, ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿ, … Continued

ಎರಡನೇ ತ್ರೈಮಾಸಿಕದಲ್ಲಿ ಸುಮಾರು 10 ಲಕ್ಷ ಚಂದಾದಾರರನ್ನು ಕಳೆದುಕೊಂಡ ನೆಟ್‌ಫ್ಲಿಕ್ಸ್…!

ಸ್ಯಾನ್ ಫ್ರಾನ್ಸಿಸ್ಕೋ: ಜನಪ್ರಿಯ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಸುಮಾರು ಹತ್ತು ಲಕ್ಷ ಚಂದಾದಾರರನ್ನು ಕಳೆದುಕೊಂಡಿದೆ ಎಂದು ಪ್ರಕಟಿಸಿದೆ. ಎರಡನೇ ತ್ರೈಮಾಸಿಕ ಗಳಿಕೆಯ ವರದಿಯಲ್ಲಿ, ಕಂಪನಿಯು 9,70,000 ಚಂದಾದಾರರನ್ನು ಕಳೆದುಕೊಂಡಿದೆ ಎಂದು ಬಹಿರಂಗಪಡಿಸಿದೆ, ಇದು ಮೊದಲ ತ್ರೈಮಾಸಿಕದಿಂದ 2,00,000 ಸದಸ್ಯರ ಕುಸಿತಕ್ಕಿಂತ ಬಹುತೇಕ ಐದು ಪಟ್ಟು ಹೆಚ್ಚಾಗಿದೆ. ಎರಡನೇ ತ್ರೈಮಾಸಿಕವು … Continued

ಹರಿಯಾಣದಲ್ಲಿ ಡಿಎಸ್‌ಪಿ ಹತ್ಯೆಯ ನಂತರ ಜಾರ್ಖಂಡ್‌ನಲ್ಲಿ ವಾಹನ ತಪಾಸಣೆ ವೇಳೆ ಪಿಕ್‌ ವಾಹನ ಹಾಯಿಸಿ ಹತ್ಯೆ..!

ರಾಂಚಿ: ಬುಧವಾರ (ಜುಲೈ 20) ಜಾರ್ಖಂಡ್‌ನ ರಾಂಚಿಯಲ್ಲಿ ವಾಹನ ತಪಾಸಣೆಯ ವೇಳೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಅವರನ್ನು ಪಿಕಪ್ ವ್ಯಾನ್ ಹಾಯಿಸಿ ಸಾಯಿಸಲಾಗಿದೆ. ಈ ಘಟನೆ ಬುಧವಾರ ನಸುಕಿನ ಜಾವ ತುಪುಡಾನಾ ಪ್ರದೇಶದಲ್ಲಿ ನಡೆದಿದೆ. ಡಿಎಸ್‌ಪಿ ಶ್ರೇಣಿಯ ಹರಿಯಾಣ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ಅವರನ್ನು ನುಹ್‌ನಲ್ಲಿ ಗಣಿಗಾರಿಕೆ ಮಾಫಿಯಾ ಇದೇ ರೀತಿ … Continued