ವಿವಾದಾತ್ಮಕ ಹೇಳಿಕೆಗೆ ಪೊಲೀಸ್‌ ನೋಟಿಸ್‌; ನಟಿ ಸಾಯಿ ಪಲ್ಲವಿ ಅರ್ಜಿ ತಿರಸ್ಕರಿಸಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್: ಗೋರಕ್ಷಕರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸುವಂತೆ ಕೋರಿ ನಟಿ ಸಾಯಿ ಪಲ್ಲವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ರಾಜ್ಯ ಹೈಕೋರ್ಟ್‌ ವಜಾಗೊಳಿಸಿದೆ. ಸಾಯಿ ಪಲ್ಲವಿ ಕಾಮೆಂಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದ ನಂತರ ಬಜರಂಗದಳದ ಕಾರ್ಯಕರ್ತರೊಬ್ಬರು ಅವರ ವಿರುದ್ಧ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು … Continued

ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued

ಏಕನಾಥ್ ಶಿಂಧೆ ಸರ್ಕಾರಕ್ಕೆ ಠಾಕ್ರೆ ಬಣದಿಂದ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸವಾಲು

ಮುಂಬೈ: ಬಂಡಾಯ ನಾಯಕ ಏಕನಾಥ್ ಶಿಂಧೆ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಜೂನ್ 30 ರಂದು, ಮಹಾರಾಷ್ಟ್ರ ರಾಜ್ಯಪಾಲ ಬಿ.ಎಸ್. ಕೋಶ್ಯಾರಿ ಅವರು ಶಿಂಧೆ ಮತ್ತು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ರಾಜಭವನದಲ್ಲಿ ಭೇಟಿಯಾದರು, ಈ … Continued

ನೈನಿತಾಲ್‌ನಲ್ಲಿ ಕಾರು ನದಿಗೆ ಬಿದ್ದು 9 ಸಾವು, ಇಬ್ಬರ ರಕ್ಷಣೆ

ಡೆಹ್ರಾಡೂನ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಎರ್ಟಿಗಾ ಕಾರು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರು, ಅವರಲ್ಲಿ ಒಬ್ಬ ಹೆಣ್ಣು ಮಗು ಕೂಡ ಇತ್ತು ಎಂದು ಹೇಳಲಾಗಿದೆ. ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ತಂಡವು ಸ್ಥಳಕ್ಕೆ ಧಾವಿಸಿದೆ. ವರದಿಯ … Continued

ಪ್ರಚಾರ ಭಾಷಣದ ವೇಳೆ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ: ಕುಸಿದ ಬಿದ್ದ ಅಬೆಗೆ ಎಚ್ಚರವಿಲ್ಲ | ದೃಶ್ಯ ಸೆರೆ

ಟೋಕಿಯೊ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಶುಕ್ರವಾರ ನಾರಾ ಪ್ರದೇಶದಲ್ಲಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಅವರ ಎರಡು ಬಾರಿ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಎಚ್ಚರವಿರಲಿಲ್ಲ ಎಂದು ವರದಿಗಳು ತಿಳಿಸಿವೆ. ಮಾಜಿ ಪ್ರಧಾನಿ ಅಬೆ ಅವರ ಮೇಲೆ ನಾರಾದಲ್ಲಿ ಇಂದು ಶಕ್ರವಾರ ಬೆಳಿಗ್ಗೆ 11:30 ರ ಸುಮಾರಿಗೆ ಗುಂಡು ಹಾರಿಸಲಾಗಿದೆ. ಶೂಟರ್ ಎಂದು … Continued

ಹಳೆ ಟ್ವೀಟ್‌ಗೆ ಟ್ವಿಟರ್‌ನಲ್ಲಿ ಹೆಚ್ಚಿದ ಬಂಧನದ ಒತ್ತಾಯದ ಮಧ್ಯೆ ಹರಿಯಾಣ ಐಟಿ ಸೆಲ್ ಮುಖ್ಯಸ್ಥರನ್ನು ತೆಗೆದುಹಾಕಿದ ಬಿಜೆಪಿ

ಚಂಡೀಗಡ: ಪ್ರವಾದಿ ಮತ್ತು ಇಸ್ಲಾಂ ಧರ್ಮದ ಕುರಿತು 2017ರ ಟ್ವೀಟ್‌ಗೆ ಸಂಬಂಧಿಸಿದಂತೆ ಅರುಣ್ ಯಾದವ್ ಅವರ ಬಂಧನಕ್ಕೆ ಹೆಚ್ಚುತ್ತಿರುವ ಒತ್ತಾಯದ ನಡುವೆ ಬಿಜೆಪಿಯು ಗುರುವಾರ ಸಂಜೆ ಪಕ್ಷದ ಹರಿಯಾಣ ಘಟಕದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅವರನ್ನು ತೆಗೆದುಹಾಕಿದೆ. ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ನಾಲ್ಕು ವರ್ಷಗಳ ಹಳೆಯ ಟ್ವೀಟ್‌ನಿಂದ ಬಂಧನಕ್ಕೊಳಗಾದ ನಂತರ 2017ರ ಟ್ವೀಟ್‌ಗೆ … Continued

ತಮಿಳುನಾಡಿನ ತಿರುನಲ್ವೇಲಿಯಲ್ಲಿ 4,000 MW ಸೌರ ಸೆಲ್‌ -ಮಾಡ್ಯೂಲ್ ಉತ್ಪಾದನಾ ಘಟಕ ನಿರ್ಮಿಸಲು ಟಾಟಾ ಪವರ್ ಒಡಂಬಡಿಕೆ

ಟಾಟಾ ಪವರ್ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಗ್ರೀನ್‌ಫೀಲ್ಡ್ 4000 MW ಸೋಲಾರ್ ಸೆಲ್ ಮತ್ತು 4000MW ಸೋಲಾರ್ ಮಾಡ್ಯೂಲ್ ಉತ್ಪಾದನಾ ಘಟಕ ಸ್ಥಾಪನೆಗೆ ಸುಮಾರು 3,000 ಕೋಟಿ ರೂಪಾಯಿ ಹೂಡಿಕೆ ಮಾಡಲು ತಮಿಳುನಾಡು ಸರ್ಕಾರದೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಸ್ಥಾವರದಲ್ಲಿ ಹೂಡಿಕೆಯನ್ನು 16 ತಿಂಗಳುಗಳಲ್ಲಿ ಮಾಡಲಾಗುತ್ತದೆ ಮತ್ತು ಇದು 2,000 ಕ್ಕೂ ಹೆಚ್ಚು … Continued

ಆನಂದ್ ಶರ್ಮಾ ಬಿಜೆಪಿ ಸೇರುತ್ತಾರೆಯೇ..?: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕ

ನವದೆಹಲಿ: ಕೇಂದ್ರದ ಮಾಜಿ ಸಚಿವ ಮತ್ತು “ಜಿ-23” ಅಥವಾ ಭಿನ್ನಮತೀಯ ಕಾಂಗ್ರೆಸ್ ನಾಯಕರ ಗುಂಪಿನ ಸದಸ್ಯ ಆನಂದ್ ಶರ್ಮಾ ಅವರು ಗುರುವಾರ ಸಂಜೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಇದು ಅವರು ಕೇಸರಿ ಪಾಳಯಕ್ಕೆ ಹೋಗುತ್ತಾರೆಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಯಿತು. ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮುಂಚೆಯೇ … Continued

ಕೆಪಿಸಿಸಿಯಲ್ಲಿ ಪ್ರಿಯಾಂಕ್ ಖರ್ಗೆ, ನಾಗರಾಜ್ ಯಾದವ್‌ಗೆ ಮಹತ್ವದ ಹೊಣೆಗಾರಿಕೆ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಚೇರ್ಮನ್‌ ಆಗಿ ಪ್ರಿಯಾಂಕ್ ಖರ್ಗೆ ಹಾಗೂ ಪಕ್ಷದ ಮುಖ್ಯ ವಕ್ತಾರರನ್ನಾಗಿ ನಾಗರಾಜ್ ಯಾದವ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ. ಈ ಸಂಬಂಧ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಕೆ.ಸಿ. ವೇಣುಗೋಪಾಲ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. … Continued

ಭಾರೀ ವರುಣಾರ್ಭಟ: ಈ ಎರಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ, ಶನಿವಾರ (ಜುಲೈ 8 ಮತ್ತು 9 ) ಈ ಎರಡು ಜಿಲ್ಲೆಗಳ ಎಲ್ಲ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ … Continued