ಎರಡು ಗುಂಪುಗಳ ನಡುವೆ ಘರ್ಷಣೆ, ಚಾಕು ಇರಿತ : ನಿಷೇಧಾಜ್ಞೆ ಜಾರಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಚೂರಿಯಿಂದ ಇರಿಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅರುಣ ಹಾಗೂ ಲಕ್ಷ್ಮಣ ಎಂಬವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮನೂರಿ ಎಂಬವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್‌ ಜಾಮೀನು ಅರ್ಜಿ ತೀರ್ಪು ಜುಲೈ 11ಕ್ಕೆ ಕಾಯ್ದಿರಿಸಿದ ಲೋಕಾಯುಕ್ತ ಕೋರ್ಟ್‌

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮಾನತಾಗಿರುವ ಐಎಎಸ್‌ ಅಧಿಕಾರಿ ಜೆ ಮಂಜುನಾಥ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜುಲೈ 11ಕ್ಕೆ ತೀರ್ಪು ಕಾಯ್ದಿರಿಸಿದೆ. ಆನೇಕಲ್‌ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬವರಿಂದ … Continued

ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಶಿವಸೇನೆ ಮುಖ್ಯ ಸಚೇತಕರನ್ನು ಬದಲಾಯಿಸಿದ ಉದ್ಧವ್ ಠಾಕ್ರೆ

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬುಧವಾರ ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಸಂಸದೆ ಭಾವನಾ ಗವಳಿ ಅವರ ಬದಲಿಗೆ ರಾಜನ್ ವಿಚಾರೆ ಅವರನ್ನು ನಾಮನಿರ್ದೇಶನ ಮಾಡಿದೆ ಎಂದು ಪಕ್ಷದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಶಿವಸೇನೆ ಸಂಸದೀಯ ಪಕ್ಷವು ತಕ್ಷಣವೇ ಜಾರಿಗೆ ಬರುವಂತೆ ಸಂಸದೆ (ಎಲ್‌ಎಸ್) ಭಾವನಾ ಗವಳಿ ಅವರ ಬದಲಿಗೆ ಲೋಕಸಭೆಯಲ್ಲಿ ಸಂಸದ … Continued

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಯಿಂದ ಮರಳುವಾಗ ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ

ಧಾರವಾಡ ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಧಾರವಾಡ ಸಮೀಪ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಹತ್ಯೆಯಾದ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ದುರದುಂಡೇಶ್ವರ ಮಠದ ಸ್ವಾಮೀಜಿ ಅವರ ಕಾರು ಮರಳಿ ಬೆಳಗಾವಿಯತ್ತ … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ, ಮಂಗಳವಾರ (ಜುಲೈ 7) ಕೂಡ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಗುರುವಾರ ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲ … Continued

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮ ನಿರ್ದೇಶನ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ. ಖ್ಯಾತ ಓಟಗಾರ್ತಿ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ವಿ ವಿಜಯೇಂದ್ರ ಪ್ರಸಾದ್ ಅವರನ್ನು ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ನಾಲ್ಕು ನಾಮನಿರ್ದೇಶಿತರು ನಾಲ್ಕು ವಿಭಿನ್ನ ರಾಜ್ಯಗಳಿಂದ ಬಂದವರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭಾ ನಾಮನಿರ್ದೇಶಿತರಿಗೆ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಶ್ರೀ … Continued

ನಕಲಿ ದಾಖಲೆ ನೀಡಿ ನೌಕಾಪಡೆ ಅಧಿಕಾರಿ ಎಂದು ಕದಂಬ ನೌಕಾ ನೆಲೆಗೆ ನುಗ್ಗಲು ಯತ್ನಿಸಿದ ಯುವಕ..!

ಕಾರವಾರ: ನಕಲಿ ದಾಖಲೆ ನೀಡಿ ಕದಂಬ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನೊಬ್ಬನನ್ನು ನೌಕಾಪಡೆ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರ್ಗಾದ ಕದಂಬ ನೌಕಾನೆಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಂಧೀತನನ್ನು ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್. ಎಂದು ಗುರುತಿಸಲಾಗಿದೆ. ತಾನು ನೌಕಾಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಪರಿಚಯಿಸಿಕೊಂಡು … Continued

ಹುಬ್ಬಳ್ಳಿ: ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಯಾಗಿದ್ದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು, ಬುಧವಾರ ಅಪರಾಹ್ನದ ನಂತರ ಹುಬ್ಬಳ್ಳಿ ಬಳಿಯ ಸುಳ್ಳ ರಸ್ತೆಯಲ್ಲಿರುವ ಕೃಷಿಭೂಮಿಯಲ್ಲಿ ನೆರವೇರಿತು. ಕುಟುಂಬಸ್ಥರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಗುರೂಜಿ ಅಣ್ಣನ ಮಗ ಸಂಜಯ ಅಂತಿಮ ವಿಧಿವಿಧಾನ ನೆರವೇರಿಸಿದರು. ಗುರೂಜಿ 2ನೇ … Continued

ಆನೆ ಹೆರಿಗೆಗೆ ಹೆದ್ದಾರಿಯೇ ಒಂದು ತಾಸು ಬಂದ್ !

ಇಡುಕ್ಕಿಯ ಹೈರೇಂಜ್ ಜಿಲ್ಲೆಯ ಮರಯೂರು ಪ್ರದೇಶದ ಮೂಲಕ ಹಾದುಹೋಗುವ ತಮಿಳುನಾಡು ಮತ್ತು ಕೇರಳವನ್ನು ಸಂಪರ್ಕಿಸುವ ರಸ್ತೆಯ ಸಂಚಾರವನ್ನು ಸುಮಾರು ಒಂದು ಗಂಟೆಗಳ ಕಾಲ ತಡೆಹಿಡಿಯಲಾಯಿತು. ಇದು ಯಾವುದೇ ವಿಐಪಿ ಸಂಚಾರಕ್ಕಾಗಿ ಅಲ್ಲ, ಆದರೆ ರಸ್ತೆಯ ಮಧ್ಯದಲ್ಲಿ ಆನೆಯೊಂದು ಮರಿಯೊಂದಕ್ಕೆ ಜನ್ಮ ನೀಡುವುದಕ್ಕೆ ತೆಗೆದುಕೊಂಡ ಕ್ರಮವಾಗಿದೆ. ಮಂಗಳವಾರ ಮುಂಜಾನೆ ತಾಯಿಗೆ ಹೆರಿಗೆಯಾಗುತ್ತಿದ್ದಂತೆ ಆನೆಗಳ ಹಿಂಡು ರಸ್ತೆಗೆ ಅಡ್ಡವಾಗಿ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲಾ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜುಲೈ 7ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ನೀಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ಮಂಗಳವಾರ ಮತ್ತು ಬುಧವಾರವೂ ರಜೆ ನೀಡಲಾಗಿತ್ತು. ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ಜುಲೈ 7ರ ಬೆಳಿಗ್ಗೆ … Continued