ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued

ಎಎಪಿಗೆ ಆಘಾತ: ಪಕ್ಷದ ಏಕೈಕ ಲೋಕಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಆಮ್‌ ಆದಮಿ ಪಕ್ಷಕ್ಕೆ ಆಘಾತದಲ್ಲಿ ಪಂಜಾಬಿನ ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸದಸ್ಯ ಸುಶೀಲಕುಮಾರ ರಿಂಕು ಅವರು ಪಕ್ಷದ ಶಾಸಕ ಶೀತಲ ಅಂಗುರಲ್ ಅವರೊಂದಿಗೆ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಂಗುರಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಲಂಧರ ಸಂಸದ ಸುಶೀಲಕುಮಾರ ರಿಂಕು ಅವರೊಂದಿಗೆ ಶಾಸಕರು ಕೇಂದ್ರ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued

ಹುಕ್ಕಾ ಬಾರ್‌ನಲ್ಲಿ ದಾಳಿ ವೇಳೆ ಬಿಗ್ ಬಾಸ್ 17 ರ ವಿಜೇತ ಮುನಾವರ್ ಫರೂಕಿ ಬಂಧನ ; ನಂತರ ಬಿಡುಗಡೆ

ಮುಂಬೈ: ಮುಂಬೈನ ಹುಕ್ಕಾ ಪಾರ್ಲರ್‌ನಲ್ಲಿ ನಡೆದ ದಾಳಿಯಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮತ್ತು ಬಿಗ್ ಬಾಸ್ 17 ರ ವಿಜೇತ ಮುನಾವರ್ ಫರೂಕಿ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ರಿಯಾಲಿಟಿ ಟಿವಿ ಸ್ಟಾರ್ ಮುನಾವರ್ ಫರೂಕಿ ಅವರನ್ನು ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ. ನಗರದ ಕೋಟೆ ಪ್ರದೇಶದಲ್ಲಿ ಅಕ್ರಮವಾಗಿ … Continued

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ಮಿಷನ್‌ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ಮಂಗಳವಾರ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದಾಗಿ ಜನವರಿ 29 ರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಾಮಿ ಆತ್ಮಸ್ಥಾನಂದರ ಮರಣದ ನಂತರ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ರಾಮಕೃಷ್ಣ ಮಠ ಮತ್ತು ಮಿಷನ್‌ನ 16 ನೇ ಅಧ್ಯಕ್ಷರಾದರು. ಮೂತ್ರನಾಳದ … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued