ಪ್ರವಾದಿ ಮುಹಮ್ಮದ್ ಕುರಿತ ಹೇಳಿಕೆ: ನೂಪುರ್ ಶರ್ಮಾ ಬೆಂಬಲಕ್ಕೆ ನಿಂತ ಡಚ್ ಸಂಸದ

ನವದೆಹಲಿ: ಪ್ರವಾದಿ ಮುಹಮ್ಮದ್ ಅವರ ಹೇಳಿಕೆಗಳಿಗೆ ಇಸ್ಲಾಮಿಕ್ ರಾಷ್ಟ್ರಗಳಿಂದ ಭಾರೀ ಆಕ್ಷೇಪದ ನಡುವೆ, ಬಿಜೆಪಿಯ ಮಾಜಿ ವಕ್ತಾರಾದ ನೂಪುರ್ ಶರ್ಮಾ ಅವರಿಗೆ ಈಗ ನೆದರ್ಲ್ಯಾಂಡ್ಸ್‌ನ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್‌ನಲ್ಲಿ ಬೆಂಬಲ ನೀಡಿದ್ದಾರೆ. ಡಚ್ ನಾಯಕ ನೂಪುರ್ ಶರ್ಮಾ ಅವರು ಸತ್ಯವನ್ನು ಹೇಳುತ್ತಿದ್ದಾರೆ ಎಂದು ಹೇಳಿದರು ಮತ್ತು ಹಾಗೂ ಇಸ್ಲಾಮಿಕ್ ದೇಶಗಳ ಕೋಪವನ್ನು “ಹಾಸ್ಯಾಸ್ಪದ” ಎಂದು … Continued

ಶೀಘ್ರವೇ ನೂತನ ಲೋಕಾಯುಕ್ತರ ನೇಮಕ: ಸಿಎಂ ಬೊಮ್ಮಾಯಿ

ಮೈಸೂರು: ನೂತನ ಲೋಕಾಯುಕ್ತರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಇಂದು ಮೈಸೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತರ ನೇಮಕಾತಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರವೇ ನೂತನ ಲೋಕಾಯುಕ್ತರನ್ನು ನೇಮಕ ಮಾಡಲಾಗುವುದು. ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ … Continued

ಪಠ್ಯ ಪುಸ್ತಕಗಳು ಶೀಘ್ರವೇ ಲಭ್ಯ, ಆದಷ್ಟು ಬೇಗ ಪಠ್ಯ ಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ನಾಗೇಶ

ಧಾರವಾಡ: ಪಠ್ಯ ಪುಸ್ತಕಗಳಲ್ಲಾಗಿರುವ ಲೋಪ ದೋಷಗಳನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು. ಅದರಲ್ಲಾದ ತಪ್ಪುಗಳನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಠ್ಯ, ಪುಸ್ತಕ ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪು ಮಾಡಬಾರದು. ಈ ರೀತಿಯ ತಪ್ಪು ಆಗಿರುವುದ್ದನ್ನು ಗಮನಿಸಿ ಅದರ ಮರು ಪರಿಷ್ಕರಣೆಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದರು. … Continued

ಭಾರತದಿಂದ 75 ಕಿಮೀ ಉದ್ದದ ಬಿಟುಮಿನಸ್ ಕಾಂಕ್ರೀಟ್ ರಸ್ತೆ ನಿರ್ಮಾಣ ಈಗ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ, ಭಾರತವು ನಿರಂತರವಾಗಿ ಹಾಕಲಾದ ಬಿಟುಮಿನಸ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದೆ ಎಂದು ಪ್ರಕಟಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಲಹೆಗಾರರಾದ ರಾಜ್‌ಪಥ್ ಇನ್‌ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು ರಾಷ್ಟ್ರೀಯ ಹೆದ್ದಾರಿ 53 ರಲ್ಲಿ ಒಂದೇ … Continued

ರೆಪೊ ದರ ಮತ್ತೆ ಏರಿಕೆ ಮಾಡಿದ ಆರ್‌ಬಿಐ : ಇಎಂಐಗಳು, ಸಾಲದ ಮೇಲಿನ ಬಡ್ಡಿ ದರಗಳು ಹೆಚ್ಚಾಗಬಹುದು

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೋ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 4.90 ಕ್ಕೆ ಹೆಚ್ಚಿಸುವುದಾಗಿ ಪ್ರಕಟಿಸಿದೆ. 2022-23 ರ ಹಣಕಾಸು ವರ್ಷದಲ್ಲಿ ಹಣದುಬ್ಬರ ದರವು ಶೇಕಡಾ 6.7 ರಷ್ಟಿದೆ ಎಂದು ಅಂದಾಜಿಸಲಾಗಿದ್ದರೂ, ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಶೇಕಡಾ 7.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್‌ಬಿಐ ಭರವಸೆ ನೀಡಿದೆ. ವಿತ್ತೀಯ ನೀತಿ … Continued

ಕ್ಯಾನ್ಸರ್‌ ಕಾಯಿಲೆ ಬಗ್ಗೆ ಭರವಸೆಯ ಕಿರಣ…ಅಮೆರಿಕದ ಔಷಧ ಪ್ರಯೋಗದ ವೇಳೆ ಇದೇ ಮೊದಲ ಬಾರಿಗೆ ಎಲ್ಲ ರೋಗಿಗಳಲ್ಲಿ ಕ್ಯಾನ್ಸರ್ ಕಣ್ಮರೆ…!

ಪ್ರಪಂಚವು ಶೀಘ್ರದಲ್ಲೇ ಭಯಪಡುವ ಭಯಂಕರ ಕಾಯಿಲೆ ಕ್ಯಾನ್ಸರ್ ಅನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ಬಾರಿಗೆ, ಅಮೆರಿಕದ ಮ್ಯಾನ್‌ಹ್ಯಾಟನ್‌ನಲ್ಲಿರುವ ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್‌ನಲ್ಲಿ ರೋಗಿಗಳಲ್ಲಿ 100% ಕ್ಯಾನ್ಸರ್ ನಿರ್ಮೂಲನೆ ಮಾಡಿದ್ದನ್ನು ಔಷಧದ ಪ್ರಯೋಗವು ತೋರಿಸಿದೆ. ಪ್ರಯೋಗವು ಚಿಕ್ಕದಾಗಿದ್ದರೂ, ದೀರ್ಘ ಮತ್ತು ನೋವಿನ ಕಿಮೊಥೆರಪಿ ಅವಧಿಗಳು ಅಥವಾ ಶಸ್ತ್ರಚಿಕಿತ್ಸೆಗಳ ಮೂಲಕ ಹೋಗದೆಯೇ ಕ್ಯಾನ್ಸರ್ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ, ಬೆಂಗಳೂರು ಸೇರಿ ಕೆಲವೆಡೆ ಇಂದು ಸಾಧಾರಣ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ (ಜೂನ್ 9) ಮೂರು ದಿನಗಳ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜೂನ್ 9ರಿಂದ 11ರ ವರೆಗೆ ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದು … Continued

ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ಶೇ.41ರಷ್ಟು ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯಾ ಎಂಬ ಆತಂಕ ಮತ್ತೆ ಎದುರಾಗಿದೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿರುವುದೇ ಈ ಆತಂಕಕ್ಕೆ ಕಾರಣ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ (ಬುಧವಾರ) 5233 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ … Continued

ಪ್ರವಾದಿ ಮುಹಮ್ಮದ್ ವಿವಾದಿತ ಹೇಳಿಕೆಗಳ ನಂತರ ಪಕ್ಷದ ವಕ್ತಾರರಿಗೆ-ನಾಯಕರಿಗೆ ಲಕ್ಷ್ಮಣ ರೇಖೆ ಎಳೆದ ಬಿಜೆಪಿ

ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ಪಕ್ಷದ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಹಿನ್ನಡೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಬಿಜೆಪಿ ಹೊಸ ಮಿತಿಗಳನ್ನು ನಿಗದಿಪಡಿಸಿದೆ. ಅಧಿಕೃತ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ಮಾತ್ರ ಟಿವಿ ಚರ್ಚೆಗಳಲ್ಲಿ … Continued

ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಜಾಮೀನು ಮನವಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಕಾಯ್ದಿರಿಸಿದೆ. ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಶಿವಶಂಕರ ಅಮರಣ್ಣವರ ನೇತೃತ್ವದ … Continued