ಇರಾನ್-ಅಮೆರಿಕ ಸಂಘರ್ಷದ ನಡುವೆ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ: ಭಾರತದಾದ್ಯಂತ ಅಡುಗೆ ಅನಿಲದ ಬೆಲೆಯಲ್ಲಿ ಏರಿಕೆಯಾಗಿದೆ. 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಸುಮಾರು 115 ರೂಪಾಯಿ ಏರಿಕೆಯಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷದಿಂದಾಗಿ ಜಾಗತಿಕ ಇಂಧನ ಬೆಲೆಗಳು ಏರುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 7 ರಿಂದ ಈ ಪರಿಷ್ಕೃತ … Continued

ಯುಪಿಎಸ್‌ಸಿ ಅಂತಿಮ ಫಲಿತಾಂಶ 2025 ಪ್ರಕಟ : 20 ಟಾಪರ್‌ಗಳ ಪಟ್ಟಿ

ನವದೆಹಲಿ: 2025 ರ ನಾಗರಿಕ ಸೇವಾ ಪರೀಕ್ಷೆ ಅಂತಿಮ ಫಲಿತಾಂಶವನ್ನು ಇಂದು, ಮಾರ್ಚ್ 6 ರಂದು ಕೇಂದ್ರ ಲೋಕಸೇವಾ ಆಯೋಗ (UPSC) ಪ್ರಕಟಿಸಿದೆ. ಒಟ್ಟು 958 ಅಭ್ಯರ್ಥಿಗಳು 1087 ಐಎಎಸ್‌ (IAS), ಐಪಿಎಸ್‌ (IPS, ಮತ್ತು ಐಎಫ್‌ಎಸ್‌ (IFS-ಭಾರತೀಯ ವಿದೇಶಾಂಗ ಸೇವೆ) ಮತ್ತು ಇತರ ಸೇವೆಗಳ ಹುದ್ದೆಗಳಿಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 958 ಅಭ್ಯರ್ಥಿಗಳಲ್ಲಿ, 317 … Continued

ಆಗಸದಿಂದ ಮೃತ್ಯುವಾಗಿ ಬಂದು ಅಪ್ಪಳಿಸುವ ಈ ಭೀಕರ ಕ್ಷಿಪಣಿ ; ಇರಾನಿನ ಖಮೇನಿ ಹತ್ಯೆಗೆ ಇಸ್ರೇಲ್ ಬಳಸಿದ ‘ಬ್ಲೂ ಸ್ಪ್ಯಾರೋ’ ರಹಸ್ಯವೇನು ?

ಫೆಬ್ರವರಿ 28ರಂದು ತೆಹ್ರಾನ್ ಮೇಲೆ ನಡೆಸಿದ ದಾಳಿಯಲ್ಲಿ 37 ವರ್ಷಗಳ ಕಾಲ ಇರಾನ್ ಅನ್ನು ಆಳಿದ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಇಸ್ರೇಲ್ ಹತ್ಯೆ ಮಾಡಿದೆ. ಈ ಕಾರ್ಯಾಚರಣೆಗೆ ಬಳಸಲಾದ ಪ್ರಮುಖ ಅಸ್ತ್ರವೆಂದರೆ ‘ಬ್ಲೂ ಸ್ಪ್ಯಾರೋ’ (Blue Sparrow). ಇದು ‘ರಾಫೆಲ್ ಅಡ್ವಾನ್ಸ್ಡ್ ಡಿಫೆನ್ಸ್ ಸಿಸ್ಟಮ್ಸ್’ ಅಭಿವೃದ್ಧಿಪಡಿಸಿದ ಗಾಳಿಯಿಂದ ಉಡಾಯಿಸಲ್ಪಡುವ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ.  ಇರಾನ್‌ನ … Continued

ವೀಡಿಯೊ..| ಇಸ್ರೇಲಿನ 50 ಯುದ್ಧ ವಿಮಾನಗಳಿಂದ ವಾಯು ದಾಳಿ: ತೆಹ್ರಾನ್‌ನಲ್ಲಿದ್ದ ಖಮೇನಿ ಭೂಗತ ಬಂಕರ್ ಧ್ವಂಸ

ನವದೆಹಲಿ: ಇರಾನ್ ರಾಜಧಾನಿ ತೆಹ್ರಾನ್‌ನ ಹೃದಯಭಾಗದಲ್ಲಿರುವ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ನಿವಾಸದ ಅಡಿಯಲ್ಲಿ ನಿರ್ಮಿಸಲಾಗಿದ್ದ ಬೃಹತ್ ಭೂಗತ ಬಂಕರ್ ಮೇಲೆ ಶುಕ್ರವಾರ ಮುಂಜಾನೆ ಇಸ್ರೇಲ್ ಯುದ್ಧ ವಿಮಾನಗಳು ಭೀಕರ ದಾಳಿ ನಡೆಸಿವೆ. ಇಸ್ರೇಲ್ ವಾಯುಪಡೆಯ ಸುಮಾರು 50 ಯುದ್ಧ ವಿಮಾನಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಮೊಸಾದ್ ಮತ್ತು ಮಿಲಿಟರಿ ಗುಪ್ತಚರ ಇಲಾಖೆಯ … Continued

ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಜೆಡಿಯು ಸೇರಲಿರುವ ನಿತೀಶ ಪುತ್ರ ನಿಶಾಂತ; ಮುಂದಿನ ಡಿಸಿಎಂ ?

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ನಿತೀಶಕುಮಾರ ಅವರ ಪುತ್ರ ನಿಶಾಂತಕುಮಾರ ಅವರು ಶನಿವಾರ ಅಧಿಕೃತವಾಗಿ ಜನತಾ ದಳ (ಯುನೈಟೆಡ್) ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಅಲ್ಲದೆ, ಅವರು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸಂಜಯ ಕುಮಾರ ಝಾ ಶುಕ್ರವಾರ ನಡೆದ ಪ್ರಮುಖ ಸಭೆಯಲ್ಲಿ ಸುಳಿವು ನೀಡಿದ್ದಾರೆ. ನಿತೀಶಕುಮಾರ ಅವರು … Continued

ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued

2026ರ ಕರ್ನಾಟಕ ಬಜೆಟ್‌ ಹೈಲೈಟ್ಸ್‌

  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್‌ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ.  ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್‌ ಆಗಿದೆ. ಇದೇ ವೇಳೆ 1,32,190 ಕೋಟಿ … Continued

2026ರ ಕರ್ನಾಟಕ ಬಜೆಟ್‌ : 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಯಾರಿಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ  2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ 4,48,004 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ 2025-26ನೇ ಸಾಲಿನ ಬಜೆಟ್‌ನಲ್ಲಿ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಬಜೆಟ್‌ ಹಂಚಿಕೆಯಲ್ಲಿ ಎಂದಿನಂತೆ ಶಿಕ್ಷಣ ಕ್ಷೇತ್ರಕ್ಕೆ … Continued

2026ರ ಕರ್ನಾಟಕ ಬಜೆಟ್‌ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು,  ಮೊಬೈಲ್‌ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು … Continued