ಭೋಪಾಲ್‌ನಲ್ಲಿ 4 ಶಂಕಿತ ಭಯೋತ್ಪಾದಕರ ಬಂಧನ, ಸ್ಫೋಟಕಗಳು ವಶ

ಭೋಪಾಲ: ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾನುವಾರ ಭೋಪಾಲ್‌ನಲ್ಲಿ ಕೇಂದ್ರ ಏಜೆನ್ಸಿಗಳು ಮತ್ತು ಮಧ್ಯಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ಭದ್ರತಾ ಕಾರ್ಯಾಚರಣೆಯಲ್ಲಿ ಕನಿಷ್ಠ 4 ಭಯೋತ್ಪಾದಕರನ್ನು ಬಂಧಿಸಲಾಗಿದೆ. ಸಂಪೂರ್ಣ ಗೌಪ್ಯತೆಯನ್ನು ಕಾಪಾಡಿಕೊಂಡು ಕಾರ್ಯಾಚರಣೆ ನಡೆಸಲಾಗಿದ್ದು, ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಭೋಪಾಲ್‌ನ ಐಶ್‌ಬಾಗ್ ಪೊಲೀಸ್ ಠಾಣೆಯಿಂದ 200 ಮೀಟರ್ ದೂರದಲ್ಲಿರುವ ಫಾತಿಮಾ … Continued

800 ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತಂದ ಮಹಿಳಾ ಪೈಲಟ್‌

ಕೊಲ್ಕತ್ತಾ: ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ’ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಕೋಲ್ಕತ್ತಾದ ಯುವ ಮಹಿಳಾ ಪೈಲೆಟ್ ಮಹಾಶ್ವೇತ ಚಕ್ರವರ್ತಿ ಗಮನ ಸೆಳೆದಿದ್ದು ಉಕ್ರೇನ್‌ನಿಂದ ಸುಮಾರು ೮೦೦ ಭಾರತೀಯರನ್ನು ದೇಶಕ್ಕೆ ಕರೆ ತಂದಿದ್ದಾರೆ. ಆಪರೇಷನ್ ಗಂಗಾ ಕಾರ್ಯಾಚರಣೆಯ ವಿಮಾನದ ಪೈಲೆಟ್ ಆಗಿರುವ ೨೪ ವರ್ಷದ ಮಹಾಶ್ವೇತ ಚಕ್ರವರ್ತಿ ಪಶ್ಚಿಮ ಬಂಗಾಳದ ಬಿಜೆಪಿ ಮಹಿಳಾ ಮೋರ್ಚಾದ ಮುಖ್ಯಸ್ಥೆ … Continued

ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued

ಶಾಲೆಯಲ್ಲಿ ಇನ್ನೂ ಕಸ ಗುಡಿಸುವ ಕೆಲಸ ಮಾಡುತ್ತಿರುವ ಪಂಜಾಬ್ ಸಿಎಂ ಚನ್ನಿ ಸೋಲಿಸಿದ ಎಎಪಿ ಶಾಸಕರ ತಾಯಿ..!

ಬರ್ನಾಲಾ (ಪಂಜಾಬ್): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸೋಲಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಲಾಭ್‌ ಸಿಂಗ್ ಉಗೋಕೆ ಅವರ ತಾಯಿ ಬಲದೇವ್ ಕೌರ್ ಅವರು ತಮ್ಮ ಮಗ ಗೆದ್ದ ನಂತರವೂ ಶನಿವಾರ ಸರ್ಕಾರಿ ಶಾಲೆಯಲ್ಲಿ ಸ್ವೀಪರ್ ಆಗಿ ಕೆಲಸ ಮುಂದುವರೆಸಿದ್ದಾರೆ. ಭಾದೌರ್ ಕ್ಷೇತ್ರದಿಂದ ಚನ್ನಿ ಅವರನ್ನು 37,550 … Continued

ಆರು ವರ್ಷಗಳ ಹಿಂದೆ ಕಳೆದುಹೋಗಿದ್ದ ಮಾತು ಬಾರದ ಪುತ್ರನನ್ನು ಹುಡುಕಿಕೊಟ್ಟ ಆಧಾರ್‌ ಕಾರ್ಡ್‌..!

ಬೆಂಗಳೂರು: ಆಧಾರ್‌ ಕಾರ್ಡ್‌ನಿಂದಾಗಿ ಆರು ವರ್ಷಗಳ ಹಿಂದೆ ಕಳೆದುಹೋಗಿದ್ದ ಮಾತುಬಾರದ ಮಗ ತನ್ನ ತಾಯಿಯ ಮಡಿಲು ಸೇರಿದ್ದಾನೆ. ಆಧಾರ್‌ ಕಾರ್ಡ್‌ ನೀಡಿದ ಮಾಹಿತಿ ಆಧಾರದಲ್ಲಿ ಕಳೆದ 6 ವರ್ಷಗಳ ಹಿಂದೆ ಯಲಹಂಕದಲ್ಲಿ ನಾಪತ್ತೆಯಾಗಿದ್ದ ಮಾತು ಬಾರದ ಮಗ ತಾಯಿ ಮಡಿಲನ್ನು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭರತ (19) ಮಾತು ಬಾರದ ಯುವಕನಾಗಿದ್ದು, 2016ರಲ್ಲಿ ನಾಪತ್ತೆಯಾಗಿದ್ದ. 2016ರಲ್ಲಿ … Continued

ಭಾರತದ ಗಡಿಯಲ್ಲಿ ಹೆಪ್ಪುಗಟ್ಟಿದ ಹಿಮದಲ್ಲಿ ಕಬಡ್ಡಿ ಆಡಿದ ಸೈನಿಕರು: ವೀಡಿಯೋ ವೈರಲ್

ಶಿಮ್ಲಾ: ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳ ಬಾಋತದ ಗಡಿಯಲ್ಲಿ ದೇಶ ಕಾಯುವ ಯೋಧರು ದಪ್ಪ ಉಣ್ಣೆಯ ಬಟ್ಟೆ ಧರಿಸಿ ಕಬಡ್ಡಿ ಆಡುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ … Continued

ನಾನು ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಭಾನುವಾರ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮದವರ ಮಾತನಾಡಿದ ಅವರು, ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ಆದರೆ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡಲಿದ್ದೇನೆ. ಆದರೆ ಚಾಮುಂಡೇಶ್ವರಿ … Continued

ಮೈಸೂರು ವಿವಿಯಿಂದ ಪುನೀತ ರಾಜಕುಮಾರಗೆ ಮರಣೋತ್ತರ ಗೌರವ ಡಾಕ್ಟರೇಟ್

ಮೈಸೂರು: ಕನ್ನಡದ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತಕುಮಾರ್ ಪ್ರಕಟಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿಶ್ವ ವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ. ವಿಶೇಷವೆಂದರೆ 46 ವರ್ಷದ … Continued

ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೊ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧೆ

ಮಾಜಿ ಕೇಂದ್ರ ಸಚಿವ ಮತ್ತು ನಟ ಶತ್ರುಘ್ನ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಟಿಕೆಟ್‌ನಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಟ್ವಿಟರ್‌ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ. “ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರು … Continued

12 ದಿನಗಳಲ್ಲಿ 1,582 ಉಕ್ರೇನಿಯನ್‌ ನಾಗರಿಕರ ಸಾವು: ಮರಿಯುಪೋಲ್‌ನಲ್ಲಿನ ಸಾಮೂಹಿಕ ಸಮಾಧಿ

ಉಕ್ರೇನ್‌ನಲ್ಲಿನ ಮಾನವೀಯ ಪರಿಸ್ಥಿತಿಯು ತ್ವರಿತವಾಗಿ ಕ್ಷೀಣಿಸುತ್ತಿದೆ ಮತ್ತು ಮಾರಿಯುಪೋಲ್‌ನಲ್ಲಿ ದುರಂತವಾಗಿದೆ. ಯುದ್ಧ ಪ್ರಾರಂಭವಾದಾಗಿನಿಂದ ರಷ್ಯಾದ ಶೆಲ್ ದಾಳಿಯಲ್ಲಿ 1,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭಯಾನಕ ಚಿತ್ರಗಳು ಸಾಮೂಹಿಕ ಸಮಾಧಿ ಮಾಡಲಾದ ನಾಗರಿಕರ ದೇಹಗಳನ್ನು ತೋರಿಸುತ್ತವೆ. ನನಗೆ ಬೇಕಾಗಿರುವುದು ಇದೆಲ್ಲವೂ ಕೊನೆಗೊಳ್ಳುವುದು. ಯಾರು ತಪ್ಪಿತಸ್ಥರು ಮತ್ತು ಯಾರು ಸರಿ ಎಂದು ನನಗೆ ತಿಳಿದಿಲ್ಲ. ಇದನ್ನು ಯಾರು … Continued