ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭ: ಸ್ಪೀಕರ್ ಕಾಗೇರಿಯಿಂದ ಸಿದ್ಧತೆ ಪರಿಶೀಲನೆ

ಬೆಳಗಾವಿ : ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಇಂದು, ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ಧತೆ ಪರಿಶೀಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆಯಿಂದ ಆರಂಭವಾಗುವ ಚಳಿಗಾಲದ ಅಧಿವೇಶನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ನಾಳೆ, ಸೋಮವಾರ ಬೆಳಗ್ಗೆ 10:30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದೆ. … Continued

ಜನರಲ್‌ ಬಿಪಿನ್ ರಾವತ್ ಸಾವಿನ ಕುರಿತು ಆಕ್ಷೇಪಾರ್ಹ ಪೋಸ್ಟ್ : ವ್ಯಕ್ತಿ ಬಂಧನ

ಬೆಂಗಳೂರು: ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಟಿ.ಕೆ.ವಂಸತಕುಮಾರ್ (೪೦) ಬಂಧಿತ ಆರೋಪಿಯಾಗಿದ್ದಾನೆ. ಈತ ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಆರೋಪಿ ಜನರಲ್‌ ಬಿಪಿನ್ ರಾವತ್ ಸಾವಿನ ಬಗ್ಗೆ … Continued

ಕೇರಳದಲ್ಲಿ ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ಪತ್ತೆ: ಭಾರತದ ಒಟ್ಟು ಸಂಖ್ಯೆ 38ಕ್ಕೆ ಏರಿಕೆ

ನವದೆಹಲಿ: ಕೇರಳಕ್ಕೆ ಬ್ರಿಟನ್ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಸೋಂಕು ದೃಢಪಟ್ಟಿದ್ದು, ಇದು ರಾಜ್ಯದಲ್ಲಿ ಮೊದಲ ಓಮಿಕ್ರಾನ್‌ ಪ್ರಕರಣವಾಗಿದೆ. ವ್ಯಕ್ತಿ ಡಿಸೆಂಬರ್ 8 ರಂದು ಅವರು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು. ಆರಂಭಿಕ ಪರೀಕ್ಷೆಯಲ್ಲಿ ನೆಗೆಟಿವ್ ಮತ್ತು ಡಿಸೆಂಬರ್ 8 ರಂದು ಮಾಡಿದ ಪರೀಕ್ಷೆಯಲ್ಲಿ ಧನಾತ್ಮಕ ಪರೀಕ್ಷೆ ಮಾಡಿದರು. ಎಲ್ಲಾ 149 ಪ್ರಯಾಣಿಕರು ಸೇರಿದಂತೆ ವಿಮಾನದಲ್ಲಿ ಅವರ … Continued

ಕೊಡಗಿನಲ್ಲಿ 34 ವಿದ್ಯಾರ್ಥಿಗಳು ಸೇರಿ 49 ಜನರಿಗೆ ಕೊರೊನಾ ಸೋಂಕು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇಂದು ಒಂದೇ ದಿನ 34 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು … Continued

ವಿವಾಹ ನೋಂದಣಿಯಂತೆ ಮತಾಂತರಕ್ಕೂ ನೋಂದಣಿ ಪದ್ಧತಿ ಜಾರಿಗೆ ಚಿಂತನೆ:ಸಚಿವ ಮಾಧುಸ್ವಾಮಿ

ತುಮಕೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧೀವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಈ ಮಧ್ಯೆ ತುಮುಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಕಾನೂನು ಸಚಿವ ಜೆ.ಮಾಧುಸ್ವಾಮಿ ವಿವಾಹ ನೋಂದಣಿ ಮಾಡುವಂತೆ … Continued

ಮನುಷ್ಯರಂತೆ ಕಲ್ಲಿಗೆ ಉಜ್ಜಿ ಚಾಕು ಹರಿತ ಮಾಡಿದ ಮಂಗ..| ವಿಡಿಯೊ ವೀಕ್ಷಿಸಿ

ನಾವು ಮಾಡುವುದನ್ನೇ ಈಗ ಪ್ರಾಣಿಗಳು ಸಹ ಅನುಕರಿಸುತ್ತಿವೆ. ಇದಕ್ಕೊಂದು ಉತ್ತಮ ಉದಾಹರಣೆ ಈ ವಿಡಿಯೊದಲ್ಲಿ ಮಂಗ ನಮ್ಮನ್ನು ಅನುಕರಿಸುವುದನ್ನು ನೋಡಬಹುದು. ಮನುಷ್ಯರಂತೆ ಮಂಗವೊಂದು ಚಾಕುವನ್ನು ಕಲ್ಲಿಗೆ ಉಜ್ಜಿ ಹರಿತ ಮಾಡುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿದರೆ ನಗು ಬರುವುದು ಗ್ಯಾರಂಟಿ. ಜೊತೆಗೆ ಮಂಗನ ಬುದ್ಧಿವಂತಿಕೆಗೂ ತಲೆದೂಗುತ್ತೀರಿ. ಹೀಗಾಗಿ ಇನ್ಮುಂದೆ ಕಪಿಚೇಷ್ಟೆ … Continued

ಕೇವಲ ಒಂದೇ ದಿನದಲ್ಲಿ 10 ಕೋವಿಡ್ ಲಸಿಕೆ ತೆಗೆದುಕೊಂಡ ಭೂಪ..!

ಪ್ರಸ್ತುತ ಪರಿಸ್ಥಿತಿಯಲ್ಲಿ ವೈರಸ್ ಹರಡುವುದನ್ನು ತಡೆಯಲು ಮತ್ತು ಪ್ರತಿರಕ್ಷಣಾ ವ್ಯವಸ್ಥೆ ಬಲಪಡಿಸಲು ಬಯಸಿದರೆ ಕೋವಿಡ್‌-19 ಲಸಿಕೆ ಶಾಟ್ ಪಡೆಯುವುದು ಅನಿವಾರ್ಯವಾಗಿದೆ. ವಿವಿಧ ಕಂಪನಿಗಳ ಬಹುತೇಕ ಎಲ್ಲ ಕೋವಿಡ್‌-19 ಲಸಿಕೆಗಳು ಎರಡು ಡೋಸ್‌ಗಳನ್ನು ಒಳಗೊಂಡಿವೆ, ಆದರೆ ಒಬ್ಬ ವ್ಯಕ್ತಿಯು ಒಂದೇ ದಿನದಲ್ಲಿ ಕೋವಿಡ್‌-19 ಡೋಸನ್ನು ಪಡೆದಿದ್ದಾನೆ..! ನ್ಯೂಜಿಲೆಂಡ್‌ನ ವ್ಯಕ್ತಿಯೊಬ್ಬರು ಕೇವಲ 24 ಗಂಟೆಗಳ ಅವಧಿಯಲ್ಲಿ ಒಟ್ಟು 10 … Continued

ನಾನು ಹಿಂದು, ಆದ್ರೆ ಹಿಂದುತ್ವವಾದಿ ಅಲ್ಲ ಎಂದ ರಾಹುಲ್ ಗಾಂಧಿ; ಜೈಪುರ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ

ಜೈಪುರ: ಭಾರತವು ಹಿಂದೂಗಳ ದೇಶವೇ ಹೊರತು ಹಿಂದುತ್ವವಾದಿಗಳ ದೇಶವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ತೈಲ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ … Continued

ಸಾಯುವ ಕೆಲವು ತಾಸುಗಳ ಮೊದಲು ರೆಕಾರ್ಡ್‌ ಮಾಡಿದ ಬಿಪಿನ್‌ ರಾವತ್‌ ಕೊನೆಯ ಸಾರ್ವಜನಿಕ ಸಂದೇಶ ವಿಡಿಯೊ ಸ್ವರ್ಣಿಮ್ ವಿಜಯ್ ಪರ್ವದಲ್ಲಿ ಬಿಡುಗಡೆ..ವೀಕ್ಷಿಸಿ

ನವದೆಹಲಿ: ಸೇನಾ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ದುರಂತ ನಡೆಯುವ ಒಂದು ದಿನದ ಮೊದಲು ರೆಕಾರ್ಡ್ ಮಾಡಿದ ಸಂದೇಶವನ್ನು ಭಾನುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಯಿತು. ಸಂದೇಶದಲ್ಲಿ ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು 1971 ರ ಯುದ್ಧದಲ್ಲಿ ಭಾರತದ ಐತಿಹಾಸಿಕ ವಿಜಯದ … Continued

ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ದೃಢ: ರಾಜ್ಯದಲ್ಲಿ ಮೂರಕ್ಕೇರಿದ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಓಮಿಕ್ರಾನ್ ಪ್ರಕರಣಗಳು ಪತ್ತೆಯಾದಂತಾಗಿದೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ 34 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಓಮಿಕ್ರಾನ್ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಐವರು, ದ್ವಿತೀಯ … Continued