ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟ‌ನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ನಾಗೇಶ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಹೆಂಡತಿ ಮತ್ತು ಮಕ್ಕಳ ಮೃತದೇಹಗಳು ಮಲಗಿದ ಸ್ಥಿತಿಯಲ್ಲಿ … Continued

ಅಲ್ವಾರ್ ಶಾಲೆಯ 4 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ಕಿರುಕುಳ ಆರೋಪ: 9 ಶಿಕ್ಷಕರು, ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಅಲ್ವಾರ್‌: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಂಬತ್ತು ಶಿಕ್ಷಕರು ಮತ್ತು ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ವರದಿ ಪ್ರಕಾರ, ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ವಿದ್ಯಾರ್ಥಿನಿಯ ತಂದೆ ಕೇಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. … Continued

ಸತತ 9ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿಟ್ಟ ಆರ್‌ಬಿಐ

ಮುಂಬೈ: ಬುಧವಾರ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಆರು ಸದಸ್ಯರ ಹಣಕಾಸು ನೀತಿ ಸಮಿತಿ (ಎಂಪಿಸಿ) ಪಾಲಿಸಿ ರೆಪೊ ದರವನ್ನು ಶೇಕಡಾ 4 ರಷ್ಟು ಬದಲಾಗದೆ ಇರಿಸಲು ಸರ್ವಾನುಮತದಿಂದ ಮತ ಚಲಾಯಿಸಿದ್ದಾರೆ ಎಂದು ಪ್ರಕಟಿಸಿದರು. ರೆಪೊ ದರವು ಒಂಬತ್ತನೇ ಬಾರಿಗೆ ಬದಲಾಗದೆ ಉಳಿದಿದೆ. ರಿವರ್ಸ್ ರೆಪೊ ದರವು ಶೇ … Continued

ಭಾರತದಲ್ಲಿ 8,439 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 23.7% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,439 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಇದು ನಿನ್ನೆಗಿಂತ 23.7% ಹೆಚ್ಚಾಗಿದೆ. ಇದು ಒಟ್ಟು ಪ್ರಕರಣವನ್ನು 3,46,56,822 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 195 ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,73,952 ಕ್ಕೆ ಹೆಚ್ಚಿಸಿದೆ.ಭಾರತದ ಚೇತರಿಕೆ ದರವು ಈಗ 98.36% ರಷ್ಟಿದೆ. … Continued

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ: ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ನಂತರ ಎಚ್ಚೆತ್ತುಕೊಂಡ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ … Continued

ಕೊರೊನಾ ಸೋಂಕು ತಗುಲಿ 154 ದಿನಗಳ ಹೋರಾಟದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾದ ಕೊಪ್ಪಳದ ಮಹಿಳೆ

ಕೊಪ್ಪಳ: ಕೊರೊನಾ ಸೋಂಕಿಗೆ ತುತ್ತಾಗಿರುವ ಮಹಿಳೆಯೊಬ್ಬರು 158 ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿ ಇಂದು, ಮಂಗಳವಾರ ಕೊಪ್ಪಳದ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..! ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೋದೂರು ಗ್ರಾಮದ ಗೀತಾ (45) ಎಂಬವರು ಸೋಂಕಿತ ಮಹಿಳೆಯು ಒಟ್ಟು 108 ದಿನ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಳೆದ ಜುಲೈ 13 ರಂದು ಕೋವಿಡ್ ದೃಢಪಟ್ಟು ಆಸ್ಪತ್ರೆಗೆ … Continued

ಏರ್‌ಪೋರ್ಟ್‌ಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ದರ ನಿಗದಿ ಮಾಡಿದ ಸರ್ಕಾರ

ಬೆಂಗಳೂರು: ಏರ್‌ಪೋರ್ಟ್‌ಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ಸರ್ಕಾರ ದರ ನಿಗದಿ ಮಾಡಿದೆ. ಐಸಿಎಂಆರ್‌ (ICMR) ಪ್ರಮಾಣಿತ ಕೋವಿಡ್ ಪರೀಕ್ಷೆಗಳಿಗೆ ದರ ನಿಗದಿ ಮಾಡಿ ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಆರ್‌ಟಿಪಿಸಿಆರ್ ಟೆಸ್ಟ್‌ಗೆ 500 ರೂಪಾಯಿ ಹಾಗೂ ಅಬಾಟ್ ಐಡಿ ಟೆಸ್ಟ್‌ಗೆ 3,000 ರೂಪಾಯಿ ನಿಗದಿ ಮಾಡಲಾಗಿದೆ. ಥರ್ಮೋ ಫಿಶರ್ ಅಕ್ಯುಲಾ ಟೆಸ್ಟ್‌ಗೆ 1,500 ರೂಪಾಯಿ, ಟಾಟಾ ಎಂಡಿ3 … Continued

ಡಿ.13ರಂದು ಪ್ರಧಾನಿ ಮೋದಿಯಿಂದ ‘ಕಾಶಿ ವಿಶ್ವನಾಥ ಕಾರಿಡಾರ್’ ಉದ್ಘಾಟನೆ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 13 ರಂದು ತಮ್ಮ ಕನಸಿನ ಯೋಜನೆ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ದೇಶಾದ್ಯಂತದ ಸಂತರ ಸಮ್ಮುಖದಲ್ಲಿ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ 12 ಜ್ಯೋತಿರ್ಲಿಂಗಗಳು ಮತ್ತು 51 ಸಿದ್ಧಪೀಠಗಳ ಅರ್ಚಕರು ಉಪಸ್ಥಿತರಿರುವರು. ಕಾರಿಡಾರ್‌ನ ಶಂಕುಸ್ಥಾಪನೆಯನ್ನು ಮಾರ್ಚ್ 8, 2019 ರಂದು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದರು. 700 ಕೋಟಿ … Continued

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್​ನಲ್ಲಿ ನಡೆದಿದೆ.. ಪ್ರಸನ್ನಕುಮಾರ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಪ್ರಸನ್ನಕುಮಾರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಂಗಳವಾರ ಸಂಜೆ 5 ಗಂಟೆಯ ವೇಳೆ ಈ … Continued

ನೆಲದಿಂದ ನಭಕ್ಕೆ ಚಿಮ್ಮುವ ಭಾರತದ ಹೊಸ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬಾಲಸೋರ್: ಭಾರತವು ಮಂಗಳವಾರ ನಡೆಸಿದ ಸ್ವದೇಶದಲ್ಲಿ ನಿರ್ಮಿಸಿದ ನೆಲದಿಂದ ನಭಕ್ಕೆ ಚಿಮ್ಮುವ (VLSRSAM) ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ. ಬಾಲಸೋರ್​ನ ಸಮುದ್ರ ತೀರದಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ಚಾಂದಿಪುರದಿಂದ ಮಧ್ಯಾಹ್ನ 3.08 ಗಂಟೆಗೆ ಆಗಸದಲ್ಲಿ ಹಾರಿಬಿಟ್ಟ ವಸ್ತುವೊಂದಕ್ಕೆ ಗುರಿಯಾಗಿಸಿ ಹಾರಿಸಲಾಯಿತು. ಡಿಆರ್​ಡಿಒ ವಿಜ್ಞಾನಿಗಳ ಲೆಕ್ಕಾಚಾರದಂತೆಯೇ ಕ್ಷಿಪಣಿಯು ಉದ್ದೇಶಿತ ಮಾರ್ಗದಲ್ಲಿ ಕ್ರಮಿಸಿತು. ಹಲವು ಉಪಕರಣಗಳ … Continued