ದೆಹಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚಳ: ಒಂದು ವಾರ ಶಾಲೆಗಳು ಬಂದ್‌, ಸರ್ಕಾರಿ ಸಿಬ್ಬಂದಿಗೆ ವರ್ಕ್‌ ಫ್ರಂ ಹೋಮ್‌ -ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ. ಮಕ್ಕಳು ಕಲುಷಿತ ಗಾಳಿಯನ್ನು ಉಸಿರಾಡದಂತೆ ನೋಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಸಚಿವಾಲಯದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಅಲ್ಲದೆ, ಸರ್ಕಾರಿ ಅಧಿಕಾರಿಗಳು ಒಂದು ವಾರ … Continued

ನವೆಂಬರ್ 19: 580 ವರ್ಷಗಳ ನಂತರ ಅತಿ ದೀರ್ಘವಾದ ಭಾಗಶಃ ಚಂದ್ರಗ್ರಹಣಕ್ಕೆ ಸಿದ್ಧರಾಗಿ…!

ನವದೆಹಲಿ : ನವೆಂಬರ್ 19 ರಂದು, ಖಗೋಲ ವೀಕ್ಷಕರು ಭಾಗಶಃ ಚಂದ್ರಗ್ರಹಣವನ್ನು ಆನಂದಿಸಬಹುದು, ಇದು ವರ್ಷದ ಕೊನೆಯ ಚಂದ್ರಗ್ರಹಣವಾಗಿದೆ. ಕೊನೆಯ ಬಾರಿಗೆ ಫೆಬ್ರವರಿ 18, 1440 ರಂದು ಇಷ್ಟು ಸುದೀರ್ಘ ಭಾಗಶಃ ಗ್ರಹಣ ಸಂಭವಿಸಿದೆ ಮತ್ತು ಇಷ್ಟೊಂದು ಸುದೀರ್ಘ ಚಂದ್ರಗ್ರಹಣ ಫೆಬ್ರವರಿ 8, 2669 ರಂದು ಸಂಭವಿಸಲಿದೆ. ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ … Continued

ಪುನೀತ್​ ಕಣ್ಣುಗಳಿಂದ ಇನ್ನೂ ಹತ್ತು ಜನಕ್ಕೆ ದೃಷ್ಟಿ ನೀಡಲು ನಾರಾಯಣ ನೇತ್ರಾಲಯದಿಂದ ಪ್ರಯೋಗ

ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಎರಡು ವಾರಗಳೇ ಕಳೆದಿವೆ. ಈ ಮಧ್ಯೆ ಪುನೀತ್‌ ಅವರು ಸಾವಿನಲ್ಲೂ ಮಾದರಿಯಾಗಿದ್ದು ಅವರು ದಾನ ಮಾಡಿದ ಕಣ್ಣು ಈಗ 10 ಅಂಧರಿಗೆ ಬೆಳಕಾಗಲಿದೆ. ಈಗ ನಾರಾಯಣ ನೇತ್ರಾಲಯವು ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದು, ಪುನೀತ್ ಅವರ ಕಣ್ಣಿನಿಂದ ಇನ್ನೂ 10 ಜನಕ್ಕೆ ದೃಷ್ಟಿ ನೀಡಲು ಮುಂದಾಗಿದೆ. ಇದೇ … Continued

ಬಿಎಸ್‌ಎನ್‌ಎಲ್‌ ಆಫರ್‌…187 ರೂ. ಪ್ಲಾನ್ 28 ದಿನಗಳವರೆಗೆ 2ಜಿಬಿ ದೈನಂದಿನ ಡೇಟಾ

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಗ್ರಾಹಕರಿಗೆ ಬಂಪರ್ ಆಫರ್ ಬಿಡುಗಡೆ ಮಾಡಿದೆ. ಇದರಲ್ಲಿ ಅತ್ಯುತ್ತಮ ವ್ಯಾಲಿಡಿಟಿ, ಅನಿಯಮಿತ ವಾಯ್ಸ್‌ ಕರೆ (Unlimited Voice Call) ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಈ 187 ರೂ.ಗಳ ಪ್ರಿಪೇಯ್ಡ್​ ಯೋಜನೆಯಲ್ಲಿ 2GB ದೈನಂದಿನ ಡೇಟಾ ಮತ್ತು ದಿನಕ್ಕೆ 100 SMS ಸೌಲಭ್ಯ ಒದಗಿಸುತ್ತದೆ. ಒಟ್ಟು 28 ದಿನಗಳ … Continued

ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ಇದಕ್ಕೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತಿ ಸದಸ್ಯೆ ಜುಬೇದಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿಲ್ಲವೆಂದು ಮನನೊಂದು ಈ ಕೃತ್ಯಕ್ಕೆ ಮಂದಾಗಿದ್ದು, ತನಗೆ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಕಾಂಗ್ರೆಸ್ ಮುಖಂಡರ ವಿರುದ್ಧ … Continued

ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆ : ಎರಡು ದಿನ ಲಾಕ್‌ಡೌನ್‌ಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏರಿಕೆ ಆಗುತ್ತಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ ವಾಯ ಗುಣಮಟ್ಟ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡುವಂತೆ ಸಲಹೆ ನೀಡಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯದ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ದೆಹಲಿಯ 17 ವರ್ಷದ ವಿದ್ಯಾರ್ಥಿ ಆದಿತ್ಯ ದುಬೆ ಸವೋಚ್ಚ … Continued

ಅಪಘಾತದಲ್ಲಿ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕರಿಬ್ಬರನ್ನು ಉಪಚಾರ ಮಾಡಿ ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದು ದಾಖಲಿಸಿ ಗೃಹಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ ಬೆಳಗ್ಗೆ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು, ಅವರು ಬರುವ ಮಾರ್ಗದಲ್ಲಿ ಮಂಡಗದ್ದೆ ಬಳಿ ಬೈಕ್ … Continued

ಕೋವಿಡ್‌ ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿದ ಭಾರತದ ಖ್ಯಾತ ಆಟಗಾರ: ಮುಷ್ತಾಕ್ ಅಲಿ ಟ್ರೋಫಿಗೆ ಕೈಬಿಟ್ಟ ಆಯ್ಕೆಗಾರರು..!

ಭಾರತದ ಮಾಜಿ ಬ್ಯಾಟರ್ ಮುರಳಿ ವಿಜಯ್ ಅವರು ಕೋವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳದ ಕಾರಣಕ್ಕೆ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ತಮಿಳುನಾಡು ಆಯ್ಕೆದಾರರು ತಮ್ಮ ಹೆಸರನ್ನು ಪರಿಗಣಿಸದ ಕಾರಣ ವೃತ್ತಿಪರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. . 37 ವರ್ಷದ ವಿಜಯ್ ತಮಿಳುನಾಡು ಪರ ಆಡುತ್ತಿದ್ದಾರೆ. ಆದರೆ, ಈ ಬಾರಿ ಅವರಿಗೆ ಅವಕಾಶ ಸಿಕ್ಕಿಲ್ಲ. … Continued

ಮಣಿಪುರದಲ್ಲಿ ಭಯೋತ್ಪಾದಕರ ಹೊಂಚುದಾಳಿಯಲ್ಲಿ ಕರ್ನಲ್, ಪತ್ನಿ-ಮಗ, ನಾಲ್ವರು ಯೋಧರು ಸೇರಿ 7 ಸಾವು

ಗುವಾಹತಿ: ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಅವರ ಪತ್ನಿ ಮತ್ತು ಮಗ ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕ ದಾಳಿ – ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿಯಾಗಿದ್ದು, ಮಣಿಪುರದ ಚುರಾಚಂದಪುರ ಜಿಲ್ಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 46 … Continued

ಜಾರ್ಖಂಡ್‌: ಕುಖ್ಯಾತ ನಕ್ಸಲ್ ನಾಯಕ ಕಿಶನ್‌ ದಾ-ಪತ್ನಿ ಸೆರೆ, ಈತನ ತಲೆಗೆ 1 ಕೋಟಿ ರೂ. ಬಹುಮಾನವಿತ್ತು..!

ರಾಂಚಿ: ಜಾರ್ಖಂಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮಾವೊವಾದಿ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಬಂಧಿಸಿದ್ದಾರೆ. ಈತನ ತಲೆಗೆ ೧ ಕೋಟಿ ರೂ. ಬಹುಮಾನ ಘೋಷಿಸಲಾಗಿತ್ತು. ಪ್ರಶಾಂತ್ ಬೋಸ್ ಜೊತೆಗೆ ಈತನ ಪತ್ನಿ ಶೀಲಾ ಮರಾಂಡಿಯನ್ನು ಸಹ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 75 ವರ್ಷದ ಬೋಸ್, ನಿಷೇಧಿತ … Continued