ಕರ್ನಾಟಕದಲ್ಲಿ ಗುರುವಾರ 310 ಹೊಸ ಕೊವಿಡ್ ಪ್ರಕರಣಗಳು, 6 ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು (ಗುರುವಾರ) 310 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ 6 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 347 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 29,82,399ಕ್ಕೆ ಏರಿದೆ. ಇಲ್ಲಿಯವರೆಗೆ 29,34,870 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 37, 922 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ. … Continued