ಬೆಳಗಾವಿ : ಸಕ್ಕರೆ ಕಾರ್ಖಾನೆ ದುರಂತ ; ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ  ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ವರದಿಯಾಗಿದೆ. ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ  ಸ್ಥಳದಲ್ಲೇ … Continued

ಸಿಎಂ ಮಮತಾ ಬ್ಯಾನರ್ಜಿಯಿಂದ ತನಿಖೆಗೆ ‘ಅಡ್ಡಿ’ ; ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ಕೋಲ್ಕತ್ತಾ: 2020ರ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಗುರುವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಗುರುವಾರ ಬೆಳಿಗ್ಗೆ ಐ-ಪ್ಯಾಕ್ (I-PAC) ಸಂಸ್ಥೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡಿದ್ದಾರೆ ಎಂದು ಇಡಿ … Continued

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ. 500ರಷ್ಟು ಸುಂಕ ಹೇರುವ ಮಸೂದೆಗೆ ಟ್ರಂಪ್ ಸಮ್ಮತಿ…!

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ಮುಂದುವರಿಸುತ್ತಿರುವ ಭಾರತ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಸುಂಕದ ಕ್ರಮಕ್ಕೆ ಅಮೆರಿಕ ಮತ್ತೆ ಮುಂದಾಗಿದೆ. ರಷ್ಯಾದ ಮೇಲೆ ಕಠಿಣ ಆರ್ಥಿಕ ದಿಗ್ಬಂಧನ ವಿಧಿಸುವ ದ್ವಿಪಕ್ಷೀಯ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿಸಿದ್ದಾರೆ ಎಂದು ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ತಿಳಿಸಿದ್ದಾರೆ. ಈ ಮಸೂದೆಯು ಕಾನೂನಾಗಿ ಜಾರಿಗೆ … Continued

ಪಶ್ಚಿಮ ಘಟ್ಟಗಳ ಧ್ವನಿ, ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಪುಣೆ: ಭಾರತದ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನವಿಡೀ ಹೋರಾಡಿದ, ಹಿರಿಯ ಪರಿಸರ ವಿಜ್ಞಾನಿ ಮತ್ತು ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ (ಜನವರಿ 7) ಪುಣೆಯಲ್ಲಿ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಗಾಡ್ಗೀಳ್ ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ಈ ದುಃಖದ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಪಶ್ಚಿಮ ಘಟ್ಟಗಳ … Continued

ಅಮೆರಿಕ ಸುಂಕದ ಮಧ್ಯೆಯೂ ಭಾರತದ ಆರ್ಥಿಕತೆಗೆ ಬೂಸ್ಟ್: 2025-26ರಲ್ಲಿ 7.4%ರಷ್ಟು ಜಿಡಿಪಿ ಪ್ರಗತಿ ಅಂದಾಜು

ನವದೆಹಲಿ: ಜಾಗತಿಕ ಸವಾಲುಗಳು ಮತ್ತು ಅಮೆರಿಕದ ಸುಂಕದ ಸಮರದ (Tariff War) ನಡುವೆಯೂ ಭಾರತದ ಆರ್ಥಿಕತೆಯು ಸದೃಢವಾಗಿ ಬೆಳೆಯುತ್ತಿದೆ. ಜನವರಿ 7 ರಂದು ಸರ್ಕಾರ ಬಿಡುಗಡೆ ಮಾಡಿದ ಮೊದಲ ಮುಂಗಡ ಅಂದಾಜಿನ ಪ್ರಕಾರ, 2025-26ರ ಹಣಕಾಸು ವರ್ಷದಲ್ಲಿ ಭಾರತದ ನೈಜ ಒಟ್ಟು ದೇಶೀಯ ಉತ್ಪನ್ನ (GDP) ಶೇ. 7.4 ರಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. ಇದು … Continued

ಅಸ್ಸಾಂ ವಿಧಾನಸಭೆ ಚುನಾವಣೆಗೆ ತಯಾರಿ : ಕಾಂಗ್ರೆಸ್ ಹಿರಿಯ ವೀಕ್ಷಕರಾಗಿ ಡಿ.ಕೆ. ಶಿವಕುಮಾರ ನೇಮಕ

ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಸಿದ್ಧತೆ ನಡೆಸಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿ (AICC) ಬುಧವಾರ ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರ ತಂಡವನ್ನು ಘೋಷಿಸಿದ್ದು, ಡಿ.ಕೆ. ಶಿವಕುಮಾರ ಅವರೊಂದಿಗೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಮತ್ತು ಜಾರ್ಖಂಡ್‌ನ ಮಾಜಿ ಶಾಸಕ ಬಂಧು … Continued

ಚಾಕುವಿನಿಂದ ಇರಿದು ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಹತ್ಯೆ

ಮುಂಬೈ: ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತ್ ಪಟೇಲ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸಾವಿನಲ್ಲಿ ಅಂತ್ಯಗೊಂಡಿದೆ. ಮಂಗಳವಾರ ಅಕೋಲಾ ಜಿಲ್ಲೆಯ ಅಕೋಟ್ ನಗರದಲ್ಲಿ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿದ್ದ ಪಟೇಲ್, ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅಕೋಲಾ ಪೊಲೀಸ್ ಅಧೀಕ್ಷಕ ಅರ್ಚಿತ್ ಚಂದಕ್ ಅವರ ಮಾಹಿತಿ ಪ್ರಕಾರ, ಮಂಗಳವಾರ … Continued

ಇನ್ನೆಷ್ಟು ದಿನ ಇರ್ತೀನೋ ಗೊತ್ತಿಲ್ಲ, ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಹಿಂದಿಕ್ಕಿ ಕರ್ನಾಟಕದಲ್ಲಿ “ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ” ವ್ಯಕ್ತಿ ಎಂಬ ದಾಖಲೆ ಸೃಷ್ಟಿಸಿದ ದಿನವೇ, ಸಿದ್ದರಾಮಯ್ಯ ಅವರು ʼಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆʼ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. … Continued

ದಾಖಲೆ ಬರೆದ ಪ್ರಧಾನಿ ಮೋದಿಯ ಪರೀಕ್ಷಾ ಪೆ ಚರ್ಚಾ- 2026ರ ನೋಂದಣಿ ; 4 ಕೋಟಿ ದಾಟಿದ ಅಭ್ಯರ್ಥಿಗಳ ಸಂಖ್ಯೆ…!

 ನವದೆಹಲಿ: ಈ ವರ್ಷದ ‘ಪರೀಕ್ಷಾ ಪೆ ಚರ್ಚಾ’ (PPC 2026) ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆಯು ಈಗಾಗಲೇ 4 ಕೋಟಿಯ ಗಡಿಯನ್ನು ದಾಟುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಜನವರಿ 7, 2026ರ ಸಂಜೆ 5:30ರ ವೇಳೆಗೆ ಒಟ್ಟು 4,03,12,346 ಮಂದಿ ನೋಂದಾಯಿಸಿಕೊಂಡಿದ್ದಾರೆ. ಇದರ ವಿವರ ಹೀಗಿದೆ: ವಿದ್ಯಾರ್ಥಿಗಳು: 3,75,00,671 ಶಿಕ್ಷಕರು: 22,89,974 … Continued