ಬಾಲಿವುಡ್‌ ನಟಿ ನೋರಾ ಫತೇಹಿ ರೀತಿ ತನ್ನ ಹೆಂಡತಿಯೂ ಅದೇ ತರಹದ ಆಕಾರ ಪಡೆಯಬೇಕೆಂದು ಆಕೆಗೆ ಆಹಾರ ಕೊಡದ ಗಂಡ..!

ವಿಚಿತ್ರ ಘಟನೆಯೊಂದರಲ್ಲಿ, ಬಾಲಿವುಡ್ ನಟಿ ನೋರಾ ಫತೇಹಿಯಂತಹ ಶರೀರದ ಆಕೃತಿಯನ್ನು ಹೊಂದಲು ತನ್ನನ್ನು ಒತ್ತಾಯಿಸಿ ತನ್ನ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗಾಜಿಯಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಗಜೈಬಾದ್ ಮುರಾದ್‌ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, ವೃತ್ತಿಯಲ್ಲಿ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕ ಶಿವಂ ಉಜ್ವಲ್ ಹೆಸರಿನ ತನ್ನ … Continued

ಮೈ ಜುಂ ಎನ್ನುವ ವೀಡಿಯೊ…| ಭಾರೀ ಮಳೆಯಿಂದಾಗಿ ರಸ್ತೆಯ ಕಾಂಕ್ರೀಟ್ ಮುಚ್ಚಳ ಕುಸಿದು ಚರಂಡಿಗೆ ಬಿದ್ದ ವ್ಯಕ್ತಿ

ಮಹಾರಾಷ್ಟ್ರದ ಚಂದ್ರಾಪುರದಲ್ಲಿ ವ್ಯಕ್ತಿಯೊಬ್ಬ ತಾನು ನಿಂತಿದ್ದ ರಸ್ತೆಯ ಕಾಂಕ್ರೀಟ್ ಮುಚ್ಚಳ ಇದ್ದಕ್ಕಿದ್ದಂತೆ ಸಡಿಲಗೊಂಡ ನಂತರ ಚರಂಡಿಯ ಒಳಗೆ ಕುಸಿದು ಬಿದ್ದ ಘಟನೆ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದ್ದು, ಬೇಕರಿಯ ಬಳಿ ನಿಲ್ಲಿಸಿದ್ದ ಸ್ಕೂಟರ್‌ನಿಂದ ಕೈಯಲ್ಲಿ ಪೆಟ್ಟಿಗೆಗಳನ್ನು ಹಿಡಿದುಕೊಂಡು ಆ ವ್ಯಕ್ತಿ ಇಳಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ವೀಡಿಯೊದಲ್ಲಿ, ಮುಚ್ಚಿದ ಚರಂಡಿಯ ಒಂದು ಭಾಗವು ಕೆಲವು ಬಿರುಕುಗಳನ್ನು … Continued

ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್‌ ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್‌ ನೀಡಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ … Continued

ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್‌ ಐಟಿಗೆ ಹಸ್ತಾಂತರ

ಮಂಗಳೂರು : 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅನನ್ಯ ತಾಯಿ ಎನ್ನಲಾಗಿರುವ  2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣವನ್ನು ಕೇಸ್ ನಂ. 175/PTN/DPS/2025 ಅಡಿಯಲ್ಲಿ … Continued

ಮಹಾರಾಷ್ಟ್ರದಲ್ಲಿ ಮಳೆ | ಉಕ್ಕಿ ಹರಿದ ಘಟಪ್ರಭಾ ; ಗೋಕಾಕದಲ್ಲಿ ಪ್ರವಾಹ : ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ, ನೂರಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣೆ ತುಂಬಿ ಹರಿಯುತ್ತಿದೆ. ಘಟಪ್ರಭೆ ಕೂಡ ಅಬ್ಬರಿಸುತ್ತಿದ್ದು, ೬೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಘಟಪ್ರಭಾ ನದಿಗೆ … Continued

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ

ಬಾಲಾಸೋರ್‌ : ಭಾರತ ಬುಧವಾರ (ಆಗಸ್ಟ್ 20) ಒಡಿಶಾದ ಚಂದಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ತನ್ನ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ರಕ್ಷಣಾ ಸಚಿವಾಲಯವು ಒಂದು ಹೇಳಿಕೆಯಲ್ಲಿ, ಉಡಾವಣೆಯು ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳು ಸರಿಯಾಗಿತ್ತು ಮತ್ತು ಕಾರ್ಯತಂತ್ರದ ಪಡೆಗಳ ಕಮಾಂಡ್‌ನ ಆಶ್ರಯದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿದೆ ಎಂದು … Continued

ವೀಡಿಯೊ..| ಲೋಕಸಭೆಯಲ್ಲಿ ಮಂಡಿಸಿದ ಬಂಧಿತ ಸಚಿವರ ವಜಾಗೊಳಿಸುವ ಮಸೂದೆ ಪ್ರತಿಗಳನ್ನು ಹರಿದು ಅಮಿತ್ ಶಾ ಮೇಲೆ ಎಸೆದ ವಿಪಕ್ಷಗಳು

ನವದೆಹಲಿ: ಗೃಹ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಕ್ರಿಮಿನಲ್‌ ಪ್ರಕರಣದಲ್ಲಿ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಪದಚ್ಯುತಗೊಳಿಸಬಹುದು ಎಂಬ ಮಸೂದೆಯನ್ನುಲೋಕಸಭೆಯಲ್ಲಿ ಮಂಡಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು. ಸಂವಿಧಾನ (130 ನೇ ತಿದ್ದುಪಡಿ) ಮಸೂದೆ, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು (ಆಗಸ್ಟ್ 20) ಉತ್ತರ ಕನ್ನಡ , ಹಾವೇರಿ,ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಒಟ್ಟು 5 ಜಿಲ್ಲೆಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ … Continued

‘ಜನ ಸುನವಾಯಿ’ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ; ಆರೋಪಿ ಬಂಧನ

ನವದೆಹಲಿ : ಇಂದು, ಬುಧವಾರ ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ನಡೆದ ಸಾರ್ವಜನಿಕ ಅಹವಾಲು ಆಲಿಕೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಯಿತು. 40 ರ ಹರೆಯದ ವ್ಯಕ್ತಿಯೊಬ್ಬರು ‘ಜನಸುನವಾಯಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಕುಂದುಕೊರತೆ ಹೇಳಿಕೊಳ್ಳುವವನ ವೇಷದಲ್ಲಿ ಬಂದಿದ್ದ ದಾಳಿಕೋರನನ್ನು ಮುಖ್ಯಮಂತ್ರಿಯವರ ಭದ್ರತಾ … Continued