ಕೇಂದ್ರಕ್ಕೆ ರೈತರ ಪಟ್ಟಿ ಕಳುಹಿಸಲಾಗಿದೆ:ಮಮತಾ ಸ್ಪಷ್ಟನೆ

ಕೋಲ್ಕತ್ತ: ಪ್ರಧಾನಮಂತ್ರಿ ಕಿಸಾನ ಸಮ್ಮಾನ್‌ ಯೋಜನೆಗೆ ಪಶ್ಚಿಮ ಬಂಗಾಳ ೨.೫ ಲಕ್ಷ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಮರುದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. … Continued

ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ: ಪ್ರಧಾನಿಗೆ ಟಿಕಾಯಿತ್‌ ಆಗ್ರಹ

ನವ ದೆಹಲಿ: ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಪಡಿಸುವುದರ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ತರಬೇಕು ಎಂಬ ರೈತರ ಬೇಡಿಕೆಯನ್ನುರಾಕೇಶ ಟಿಕಾಯಿತ್‌ ಪುನರುಚ್ಚರಿಸಿದ್ದಾರೆ ಸೋಮವಾರ ರಾಜ್ಯಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮುಂದುವರಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ  ಘೋಷಣೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯಿತ್‌ ಎಂಎಸ್‌ಪಿ ಕಾನೂನಿಗೆ ಒತ್ತಾಯಿಸಿದರು … Continued

ಗಾಜಿಪುರ ರೈತ ಹೋರಾಟಕ್ಕೆ ಕರ್ನಾಟಕದ ೫೦ ರೈತರು

ಗಾಜಿಪುರ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತೀಯ ಕಿಸಾನ್‌ ಯೂನಿಯನ್‌ ನಡೆಸುತ್ತಿರುವ ಚಳವಳಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ೫೦ ಜನ ರೈತರ ಗುಂಪು ಸೋಮವಾರ ಆಗಮಿಸಿತು. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಹೋರಾಟಗಾರರ ಡೇರೆಗಳನ್ನು ಕರ್ನಾಟಕದ ಕೃಷಿಕರು ಸೇರಿಕೊಂಡರು. ನಾವು ಬೆಂಗಳೂರು ಹಾಗೂ ಮೈಸೂರಿನಲ್ಲಿ ರೈತ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದೆವೆ. … Continued

ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ

ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued

ನೂತನ ವಿಜಯನಗರ ಜಿಲ್ಲೆಗೆ ಅಧಿಕೃತ ಮುದ್ರೆ

ಬಳ್ಳಾರಿ : ಜಿಲ್ಲೆಯ ಹಲವರ ವಿರೋಧದ ನಡುವೆಯೂ ಅಖಂಡ ಬಳ್ಳಾರಿ‌ ಜಿಲ್ಲೆಯ‌ನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ಅಂತಿಮವಾಗಿ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ನೂತನ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಗಳನ್ನು ತಾಲೂಕುಗಳಾಗಿ ಸೇರ್ಪಡೆ ಮಾಡಲಾಗಿದ್ದು, ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ವಿಜಯನಗರ ಜಿಲ್ಲೆ ಘೋಷಣೆ … Continued

ಪರಿಷತ್‌ ಅಧ್ಯಕ್ಷ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. … Continued

ನಾವೇನು ಮೂರ್ಖರೇ: ಪ್ರಧಾನಿ ಭಾಷಣಕ್ಕೆ ಖರ್ಗೆ ಪ್ರತಿಕ್ರಿಯೆ

ನವ ದೆಹಲಿ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಕಾಂಗ್ರೆಸ್ ಸೋಮವಾರ ಟೀಕಿಸಿದೆ. ವಿವಾದಾತ್ಮಕ ಮೂರು ಕೃಷಿ ಕಾನೂನುಗಳಲ್ಲಿ ಏನು ಕೊರತೆಯಿದೆ ಎಂಬ ಬಗ್ಗೆ ಪಕ್ಷದ ಪ್ರಸ್ತಾಪವನ್ನು ಅವರು ಕಡೆಗಣಿಸಿದ್ದಾರೆ ಎಂದು ಮೇಲ್ಮನೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ್ ಖರ್ಗೆ ಹೇಲಿದ್ದು ‘ನಾವೆಲ್ಲರೂ ಮೂರ್ಖರೇ ಎಂದು ಪ್ರಶ್ನಿಸಿದ್ದಾರೆ. ರಾಜ್ಯಸಭೆಯಲ್ಲಿ … Continued

ಅಸ್ಸಾಂ: ಕಾಂಗ್ರೆಸ್‌-ಎಐಯುಡಿಎಫ್ ನಡುವೆ ಸೀಟಿಗಾಗಿ ತಿಕ್ಕಾಟ

ಗುವಾಹಟಿ: ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಎರಡು ವಿರೋಧ ಪಕ್ಷಗಳು ಮೈತ್ರಿ ಘೋಷಿಸಿದ ನಂತರ ಕಾಂಗ್ರೆಸ್ ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಸ್ಥಾನಗಳಿಗಾಗಿ ಚುನಾವಣೆ ಘೋಷಣೆಯಾಗುವ ಜಗಳವಾಡಲು ಪ್ರಾರಂಭಿಸಿವೆ. ಜನವರಿ 19 ರಂದು, ಎರಡೂ ಪಕ್ಷಗಳು, ಪ್ರಾದೇಶಿಕ ಅಂಚಾಲಿಕ್ ಗಾನಾ ಮೋರ್ಚಾ (ಎಜಿಎಂ) ಮತ್ತು ಮೂರು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ … Continued

ದೇಶದ ಸೆಲೆಬ್ರಿಟಿಗಳ ಟ್ವೀಟ್‌ ತನಿಖೆ ಮಾಡಲಿರುವ ಮಹಾರಾಷ್ಟ್ರ…!

ಮುಂಬೈ: ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಪಾಪ್‌ ಗಾಯಕಿ ರಿಹಾನಾ ಮಾಡಿದ ಟ್ವೀಟ್‌ಗೆ ಖಂಡಿಸಿ ಭಾರತದ ಸಾರ್ವಭೌಮತ್ವದ ವಿಷಯದಲ್ಲಿ ಮೂಗು ತೂರಿಸುವುದನ್ನು ಖಂಡಿಸಿ ಟ್ವೀಟ್‌ ಮಾಡಿರುವ ಕ್ರಿಕೆಟ್‌ ಅಟಗಾರರು ಹಾಗೂ ಬಾಲಿವುಡ್‌ ತಾರೆಯರು ಬಿಜೆಪಿ ಒತ್ತಡದಲ್ಲಿ ಟ್ವೀಟ್‌ ಮಾಡಿದ್ದಾರೆಯೇ ಎಂಬುದರ ಕುರಿತು ಮಹಾರಾಷ್ಟರ ಸರ್ಕಾರ ತನಿಖೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ ಆಡಳಿತಾರೂ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) … Continued