ಆಸ್ಟ್ರೇಲಿಯಾ ವಿರುದ್ಧ ಗೆಲುವು ; ಪಾಕಿಸ್ತಾನ ಹೊರದಬ್ಬಿ ವಿಶ್ವದ ನಂ.1 ತಂಡವಾದ ಭಾರತ; ಎಲ್ಲ ಸ್ವರೂಪದ ಕ್ರಿಕೆಟ್‌ನಲ್ಲೂ ಅಗ್ರಸ್ಥಾನ ಪಡೆದ ಏಷ್ಯಾದ ಮೊದಲ ತಂಡ ಭಾರತ

ನವದೆಹಲಿ: ಕೆಎಲ್ ರಾಹುಲ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳ ಜಯವನ್ನು ದಾಖಲಿಸಿತು ಮತ್ತು ಆ ಮೂಲಕ ODI ಶ್ರೇಯಾಂಕದಲ್ಲಿ ಅಗ್ರಸ್ಥಾನದಿಂದ ಪಾಕಿಸ್ತಾನವನ್ನು ಹೊರದಬ್ಬಿದೆ. ಭಾರತವು ದಕ್ಷಿಣ ಆಫ್ರಿಕಾದ ನಂತರ ಎಲ್ಲಾ ಸ್ವರೂಪದ ಕ್ರಿಕೆಟ್‌ ಮಾದರಿಯಲ್ಲಿ ಏಕ ಕಾಲದಲ್ಲಿ ನಂಬರ್ 1 ರ್ಯಾಂಕ್‌ ಗಳಿಸಿದ ಎರಡನೇ ತಂಡವಾಗಿದೆ ಮತ್ತು  ಅಪರೂಪದ ಸಾಧನೆಯನ್ನು … Continued

ಇಂದಿನಿಂದ ಸೆಪ್ಟೆಂಬರ್‌ 30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್‌ 23 ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ 30 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ … Continued

ಟಿ-20 ಕ್ರಿಕೆಟ್‌: ರಾಜ್ಯ ಮಹಿಳಾ (ಸಂಭಾವ್ಯ) ತಂಡಕ್ಕೆ ಹುಬ್ಬಳ್ಳಿಯ ಇಬ್ಬರು ಸೇರಿ 26 ಆಟಗಾರ್ತಿಯರ ಆಯ್ಕೆ

ಹುಬ್ಬಳ್ಳಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ( ಬಿಸಿಸಿಐ) 2023-24ನೇ ಸಾಲಿನ ಸೀನಿಯರ್ ಮಹಿಳಾ ಟಿ-20 ಪಂದ್ಯಾವಳಿಗೆ ರಾಜ್ಯ ತಂಡಕ್ಕೆ 26 ಆಟಗಾರ್ತಿಯರ (ಸಂಭವನೀಯ) ತಂಡವನ್ನು ಶುಕ್ರವಾರ ಕರ್ನಾಟಕ ರಾಜ್ಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಈ ತಂಡಕ್ಕೆ ಹುಬ್ಬಳ್ಳಿಯ ಪುಷ್ಪಾ ಕಿರೇಸೂರ ಮತ್ತು ತನಿಷಾ ಕಾಮತ್ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಿಂದ ಪುಷ್ಟಾ, ತನಿಷಾ ಹೊರತುಪಡಿಸಿ … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ … Continued

ಸನಾತನ ಧರ್ಮ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್‌, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಿತ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆ.22) ನೋಟಿಸ್ ಜಾರಿಮಾಡಿದೆ. ಸನಾತನ ಧರ್ಮದ ಹೇಳಿಕೆ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕೇಂದ್ರದ ಮಾಜಿ ಸಚಿವ ಎ ರಾಜಾ … Continued

ಏಷ್ಯನ್ ಗೇಮ್ಸ್‌ನಿಂದ 3 ಭಾರತೀಯ ಅಥ್ಲೀಟ್‌ಗಳಿಗೆ ಚೀನಾ ನಿಷೇಧದ ನಂತರ ಕ್ರೀಡಾ ಸಚಿವರ ಪ್ರವಾಸ ರದ್ದು

ನವದೆಹಲಿ: ಶನಿವಾರ ಚೀನಾದ ಹ್ಯಾಂಗ್‌ಝೌನಲ್ಲಿ ಆರಂಭವಾಗಲಿರುವ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಮೂವರು ಭಾರತೀಯ ವುಶು ಆಟಗಾರರಿಗೆ ಚೀನಾ ಪ್ರವೇಶ ನಿರಾಕರಿಸಿದ ನಂತರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ತಮ್ಮ ನಿಗದಿತ ಚೀನಾ ಭೇಟಿ ರದ್ದುಗೊಳಿಸಿದ್ದಾರೆ. ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರಿಗೆ ಚೀನಾದ ಅಧಿಕಾರಿಗಳು “ಉದ್ದೇಶಿತ ಮತ್ತು … Continued

ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಬೆಂಗಳೂರು : ಹೈದರಾಬಾದ್-ಬೆಂಗಳೂರು ʼವಂದೇ ಭಾರತʼ ರೈಲಿನ ವಾಣಿಜ್ಯ ಕಾರ್ಯಾಚರಣೆ ಸೆಪ್ಟೆಂಬರ್ 25 (ಸೋಮವಾರ)ರಿಂದ ಪ್ರಾರಂಭವಾಗಲಿದೆ. ಅರೆ-ಹೈ-ಸ್ಪೀಡ್ ರೈಲು ಎರಡು ಮಹಾನಗರಗಳ ನಡುವೆ ಸುಮಾರು ಎರಡು ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್-ಬೆಂಗಳೂರು ವಂದೇ ಭಾರತ್ ರೈಲನ್ನು ಭಾನುವಾರ ವರ್ಚುವಲ್‌ನಲ್ಲಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಯಶವಂತಪುರದಿಂದ ಹೈದರಾಬಾದ್‌ನ ಕಾಚೆಗುಡಕ್ಕೆ ಕಾರ್ಯಾಚರಣೆ ನಡೆಸಲು … Continued

ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ರಾಜ್ಯದ ವಿದ್ಯುತ್‌ ಉತ್ಪಾದನೆಯು ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತವಾಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಯಾಕೆ ಹೆಚ್ಚಳವಾಗಿಲ್ಲ … Continued

ವೀಡಿಯೊ | ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಪಕ್ಷ ಸೇರ್ಪಡೆ

ನವದೆಹಲಿ: ಜೆಡಿಎಸ್‌ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಶುಕ್ರವಾರ ಮಧ್ಯಾಹ್ನ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ … Continued

ಸಂಸತ್ತಿನಲ್ಲಿ ಮುಸ್ಲಿಂ ಸಂಸದರನ್ನು ನಿಂದಿಸಿದ ಬಿಜೆಪಿ ನಾಯಕನಿಗೆ ಪಕ್ಷದಿಂದ ನೋಟಿಸ್

ನವದೆಹಲಿ: ಬಿಜೆಪಿ ಸಂಸದ ರಮೇಶ ಬಿಧುರಿ ಅವರು ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ “ಕಠಿಣ ಕ್ರಮ”ದ ಎಚ್ಚರಿಕೆ ನೀಡಿದ್ದಾರೆ. ಅವರ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಕಡತಗಳಿಂದ ತೆಗೆದು ಹಾಕಲಾಗಿದೆ. ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ … Continued