ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ಮರುಭೂಮಿ ಪ್ರದೇಶಗಳಿಗೆ ಬಹಳ ಉಪಯುಕ್ತ ಪ್ರಾಣಿಗಳೆಂದು ಪರಿಗಣಿಸಲಾದ ಒಂಟೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ತರಬಹುದು. ಒಂಟೆಗಳ ಕಣ್ಣೀರು ವಿಷಯ ಹಾವುಗಳ ಕಡಿತಕ್ಕೆ ರಾಮಬಾಣವಾಗಬಹುದು ಎಂದು ಹೊಸ ಸಂಶೋಧನೆಯೊಂದು ಹೇಳುತ್ತದೆ. ಬಿಕಾನೆರ್ ಮೂಲದ ರಾಷ್ಟ್ರೀಯ ಒಂಟೆ ಸಂಶೋಧನಾ ಕೇಂದ್ರ (NRCC) ನಡೆಸಿದ ಅಧ್ಯಯನವು ಒಂಟೆ ಕಣ್ಣೀರಿನಲ್ಲಿ ಕಂಡುಬರುವ ಪ್ರತಿಕಾಯಗಳು ವಿವಿಧ 26 ಜಾತಿಯ ಹಾವುಗಳ ವಿಷವನ್ನು ತಟಸ್ಥಗೊಳಿಸಬಹುದು … Continued

ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್‌ ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ. ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ ಎಂಬ … Continued

ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ … Continued

ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಹೊಸ ಪಕ್ಷ ಘೋಷಿಸಿದ ಎಲೋನ್‌ ಮಸ್ಕ್‌…

ವಾಷಿಂಗ್ಟನ್‌ : ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಅವರು ಶನಿವಾರ ‘ಅಮೇರಿಕಾ ಪಾರ್ಟಿ’ ಎಂಬ ಹೆಸರಿನ ಹೊಸ ರಾಜಕೀಯ ಪಕ್ಷದ ಸ್ಥಾಪನೆಯನ್ನು ಘೋಷಿಸಿದ್ದಾರೆ. ಸಾಮಾಜಿಕ ವೇದಿಕೆ X ನಲ್ಲಿ ತಾವು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ. ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಾರ್ವಜನಿಕ ತಿಕ್ಕಾಟದ ನಂತರ ಈ ಘೋಷಣೆ … Continued

ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued

ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌…!!

ಜೈಪುರ: ರಾಜಸ್ಥಾನದಲ್ಲಿ ನಡೆದ ವಿಚಿತ್ರ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ, ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಿ ನಟಿಸಿ – ನಿಯಮಿತ ಪೊಲೀಸ್‌ ತರಬೇತಿಗೆ ಹಾಜರಾಗಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳಿಗೆ ಪೋಸ್ ನೀಡಿ ಸುದ್ದಿಯಾಗಿದ್ದ ನಕಲಿ ಪೊಲೀಸ್‌ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ…! ‘ಮೂಲಿ’ ಎಂದು ಗುರುತಿಸಲಾದ ಮೋನಾ ಬುಗಾಲಿಯಾ … Continued

ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಇದೆಂಥ ಪವಾಡ…| ಒಂದೇ ಗೋಡೆ, 4 ಲೀಟರ್ ಬಣ್ಣ ಬಳಿಯಲು 233 ಕೆಲಸಗಾರರ ಬಳಕೆ…! ಶಾಲೆಯ ಗುತ್ತಿಗೆದಾರನ ಬಿಲ್ ವೈರಲ್‌

ಸಕಂಡಿ: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಗಣಿತ ಮತ್ತು ಮಾನವಶಕ್ತಿಯ ಪವಾಡವೇ ನಡೆದಿದೆ ಎಂದು ವರದಿಯಾಗಿದೆ. ಸಕಂಡಿ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣವನ್ನು ಹಚ್ಚಲು 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ. ಇದರ ಬಿಲ್‌ ಈಗ ಆನ್ಲೈನ್‌ನಲ್ಲಿ ವೈರಲ್‌ ಆದ ನಂತರ ವ್ಯಾಪಕ ಟೀಕೆಗೆ ಗುರಿಯಾಗಿದೆ. … Continued

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued